ಕಲಬುರಗಿ: ರಾಜ್ಯದಲ್ಲಿ ಬರಗಾಲ ಇದೆ, ಸರ್ಕಾರ ಸತ್ತಿದೆಯೋ ಬದುಕಿದೆಯೋ ಎಂಬ ಭಾವನೆ ಜನರಲ್ಲಿದೆ. ಅವರೇ ಕಚ್ಚಾಡಿಕೊಂಡ್ರೆ ನಾವೇನು ಮಾಡೋಣ, ತಾಕತ್ ಇದ್ರೆ ಜೆಡಿಎಸ್-ಕಾಂಗ್ರೆಸ್ ಶಾಸಕರನ್ನು ಒಗ್ಗೂಡಿಸಿ ಇಟ್ಟುಕೊಳ್ಳಲಿ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ ಸವಾಲು ಹಾಕಿದ್ದಾರೆ.
ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನಾನೆಲ್ಲಾದರೂ ಮುಖ್ಯಮಂತ್ರಿ ಆಗ್ತೇನೆ ಅಂತಾ ಹೇಳಿದ್ದೇನಾ? ರಾಜ್ಯದಲ್ಲಿ ಬರಗಾಲ ಇದೆ, ಕಾಂಗ್ರೆಸ್ ಮುಖಂಡರು ಹಾಗೂ ಮಲ್ಲಿಕಾರ್ಜುನ ಖರ್ಗೆಗೆ ಪ್ರಧಾನಿ ಬಗ್ಗೆ ಹಗುರವಾಗಿ ಮಾತನಾಡೋದು ಚಾಳಿಯಾಗಿದೆ. ಪ್ರಧಾನಿ ಬಗ್ಗೆ ಮಾತನಾಡಿದ್ರೆ ದೊಡ್ಡವರಾಗ್ತೇವೆ ಎಂಬ ಭ್ರಮೆಯಲ್ಲಿದ್ದಾರೆ. ಜೆಡಿಎಸ್ ರಾಜ್ಯಾಧ್ಯಕ್ಷ ಹೆಚ್.ವಿಶ್ವನಾಥ್ ಸಿದ್ದರಾಮಯ್ಯ ವಿರುದ್ಧ ಕೊಟ್ಟ ಹೇಳಿಕೆ ಕೇವಲ ವಿಶ್ವನಾಥ್ ಅವರ ಹೇಳಿಕೆಯಲ್ಲ. ಕುಮಾರಸ್ವಾಮಿ ಹೇಳಬೇಕೆಂದಿದ್ದನ್ನು ವಿಶ್ವನಾಥ ಮೂಲಕ ಹೇಳಿಸಿದ್ದಾರೆ ಅಷ್ಟೇ. ಮೇ 23ರ ಬಳಿಕ ರಾಜ್ಯದಲ್ಲಿ ಕಾಂಗ್ರೆಸ್ ಎರಡಂಕಿ ದಾಟಲ್ಲ ಅಂತಾ ಅವರಿಗೆ ಮನವರಿಕೆ ಆಗಿದೆ ಎಂದು ಹರಿಹಾಯ್ದ ಅವರು ಉಪಚುನಾವಣೆ ಫಲಿತಾಂಶ ಬಳಿಕ ಸಮ್ಮಿಶ್ರ ಸರ್ಕಾರದ ಅಸ್ತಿತ್ವಕ್ಕೆ ಧಕ್ಕೆ ಬರುವ ಸಾಧ್ಯತೆ ಹೆಚ್ಚಿದೆ ಎಂದರು. ಚಿಂಚೋಳಿ ಎರಡೂ ಕ್ಷೇತ್ರಗಳಲ್ಲಿ ನಮ್ಮ ಅಭ್ಯರ್ಥಿಗಳು ಬಹಳ ಅಂತರದಿಂದ ಗೆಲ್ತಾರೆ ಅಂತಾ ಬಿಎಸ್ವೈ ವಿಶ್ವಾಸ ವ್ಯಕ್ತಪಡಿಸಿದ್ರು.
ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…
ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…
ಚಿಂಚೋಳಿ: ಕಾನೂನು ತೊಡಕಿನಿಂದ ಸ್ಥಗಿತಗೊಂಡ ಸಿದ್ದಸಿರಿ ಎಥೆನಾಲ್ ಕಾರ್ಖಾನೆ ಪ್ರಾರಂಭಕ್ಕೆ ಕರ್ನಾಟಕ ಮಾಲಿನ್ಯ ನಿಯಂತ್ರಣ ಮಂಡಳಿ ಅನುಮತಿ ನೀಡಬೇಕೆಂದು ಒತ್ತಾಯಿಸಿ…
ಚಿಂಚೋಳಿ: ಸಿದ್ದಶ್ರೀ ಕಾರ್ಖಾನೆ ಪ್ರಾರಂಭ ಮಾಡಲು ರೈತರು ಹಗಲು ರಾತ್ರಿ ಎನ್ನದೆ ಬಸವೇಶ್ವರ ಉತ್ತರ ಬಳಿ ಧರಣಿಯಲ್ಲಿ ಹೋರಾಟ ಮಾಡುತ್ತಿದ್ದು.…
ಕಲಬುರಗಿ: ನವೆಂಬರ್ 29 ರಿಂದ 2 ಡಿಸೇಂಬರ್ ವರೆಗೆ ತಮಿಳುನಾಡಿನ ಅಲಗಪ್ಪ ವಿಶ್ವವಿದ್ಯಾಲಯ ಕರೈಕುಡಿಯಲ್ಲಿ ನಡೆಯುವ ದಕ್ಷಿಣ ಭಾರತ ಅಂತರ…
ಕಲಬುರಗಿ: ನಗರದ ವಾರ್ಡ ನಂ.51.ರ ಜೇವರ್ಗಿ ಕಾಲೋನಿ ವಾಟರ್ ಟ್ಯಾಂಕ್ ಹತ್ತಿರದ ಉದ್ಯವನದಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಪ್ರಿಯಾಂಕ ಖರ್ಗೆ…