ಬಿಸಿ ಬಿಸಿ ಸುದ್ದಿ

ಅನ್ನಕ್ಕಿಂತ ಮೊದಲು ಕುಡಿಯಲು ನೀರು ಕೊಡಿ: ನೀರಿನ ವ್ಯವಸ್ಥೆ ಕಲ್ಪಿಸಲು ಅಧಿಕಾರಿಗಳಿಗೆ ತಾಕೀತು

ಶಹಾಬಾದ: ಕರೋನಾ ವೈರಸ್ ಹರಡುತ್ತಿರುವದರಿಂದ ದೇಶದ್ಯಾದಂತ ಲಾಕ್ ಡೌನ್ ಮಾಡಿದ ಹಿನ್ನೆಲೆಯಲ್ಲಿ ರಾಮಘಡ ಆಶ್ರಯ ಕಾಲೋನಿಯಲ್ಲಿರುವ ಕೈಗೆ ದುಡಿಮೆ ಇಲ್ಲದೆ, ಹೊಟ್ಟೆಗೆ ಅನ್ನವಿಲ್ಲದೆ ಪರಿತಪಿಸುತ್ತಿರುವ ಬಡ ಜನರಿಗೆ ಕಲಬುರಗಿ ಗ್ರಾಮೀಣ ಮತಕ್ಷೇತ್ರದ ಶಾಸಕ ಬಸವರಾಜ ಮತ್ತಿಮಡು ಅನ್ನದ ಪೊಟ್ಟಣ ವಿತರಿsಸಲು ಬಂದಾಗ, ಅಲ್ಲಿನ ಜನರು ನಮಗೆ ಅನ್ನಕ್ಕಿಂತ ಮೊದಲು ನೀರು ಕೊಡಿ ಸಾಹೇಬ್ರೆ ಎಂದು ಅಳಲು ತೋಡಿಕೊಂಡ ಘಟನೆ ನಡೆದಿದೆ.

ರಾಮಘಡ ಆಶ್ರಯ ಕಾಲೋನಿಯಲ್ಲಿ ಕುಡಿಯುವ ನೀರಿನ ಸಮಸ್ಯೆ ಇದ್ದು, ನೀರಿಗಾಗಿ ಪರದಾಡುವ ಪ್ರಸಂಗ ಎದುರಾಗಿದೆ. ಆಶ್ರಯ ಕಾಲೋನಿಯಿಂದ ಬೇರೆ ಬಡಾವಣೆಗೆ ನೀರು ತರಲು ಹೋದರೆ ಅಲ್ಲಿಂದ ಪೊಲೀಸರು ಓಡಿಸುತ್ತಾರೆ. ಅನ್ನವನ್ನು ಬೇಡಿಯಾದರೂ ತಿನ್ನಬಹುದು. ಕುಡಿಯುವ ನೀರಿಲ್ಲದೇ ಹೇಗೆ ಬದುಕಬೇಕು ಎಂದು ಶಾಸಕರ ಮುಂದೆ ಅಲವತ್ತುಕೊಂಡರು.

ತಕ್ಷಣವೇ ಶಾಸಕರು, ಒಂದೆರಡು ದಿನದಲ್ಲಿ ಪೈಪ್ ಲೈನ ಅಳವಡಿಸಿ ಕುಡಿಯುವ ನೀರಿನ ವ್ಯವಸ್ಥೆ ಕಲ್ಪಿಸಲು ನಗರ ಸಭೆ ಪೌರಾಯುಕ್ತರಿಗೆ ತಾಕೀತು ಮಾಡಿದರು. ಪೈಪ್ ಲೈನ್ ಮಾಡಲು ಸಮಯಾವಕಾಶ ಬೇಕಾಗುತ್ತದೆ. ಅದಕ್ಕಿಂತ ಮುಂಚೆ ಟ್ಯಾಂಕರ್ ಮೂಲಕ ನೀರು ಸರಬರಾಜು ಮಾಡವುದಾಗಿ ಪೌರಾಯುಕ್ತರು ಹೇಳಿದರು. ನಂತರ ರಾಮಘಡ, ಮರಗೋಳ ಮಹಾವಿದ್ಯಾಲಯದ ಬಳಿ ಇರುವ ಆಶ್ರಮ ಮನೆಯ ಬಡ ನಿವಾಸಿಗಳಿಗೆ ಅನ್ನದ ಪೊಟ್ಟಣ ವಿತರಿಸಿದರು.

ಶಾಸಕರೊಂದಿಗೆ ಬಿಜೆಪಿ ಅಧ್ಯಕ್ಷ ಅಣವೀರ ಇಂಗಿನಶೆಟ್ಟಿ, ಶಿವಕುಮಾರ ಇಂಗಿನಶೆಟ್ಟಿ, ನಿಂಗಣ್ಣ ಹುಳಗೋಳಕರ್, ನಾಗರಾಜ ಮೇಲಗಿರಿ, ಅಣ್ಣಪ್ಪ ದಸ್ತಾಪುರ ಕನದಪ್ಪ ದಂಡಗುಲಕರ್, ಸುಭಾಷ ಜಾಪೂರ, ಸದಾನಂದ ಕುಂಬಾರ, ಪಾರ್ವತಿ ಪವಾರ ಪಿಐ ಅಮರೇಶ.ಬಿ ಇತರರು ಇದ್ದರು.

emedialine

Recent Posts

ಅಧ್ಯಾತ್ಮದ ಜ್ಞಾನ ಬದುಕಿಗೆ ಬೆಳಕು ನೀಡುತ್ತದೆ

ಕಲಬುರಗಿ:ಮಾನವನ ಬದುಕಿಗೆ ಅಧ್ಯಾತ್ಮದ ಜ್ಞಾನವು ಅರಿವು ಮೂಡಿಸುವುದಲ್ಲದೆ,ಬೆಳಕು ನೀಡುತ್ತದೆ ಎಂದು ಪುರಾಣ ಪಂಡಿತ ಮಲ್ಲಿಕಾರ್ಜುನ ಶಾಸ್ತ್ರಿ ಅಭಿಪ್ರಾಯ ಪಟ್ಟಿದ್ದಾರೆ. ಜಯನಗರ…

21 mins ago

ಮೊಬೈಲ್ ಆಪ್ ಮೂಲಕ ಶಾಲೆಯಿಂದ ಹೊರಗುಳಿದ ಮಕ್ಕಳನ್ನು ಪತ್ತೆ ಸಮೀಕ್ಷೆ : ಡಾ. ಶಾಲಿನಿ ರಜನೀಶ್

ಬೆಂಗಳೂರು: ಮೊಬೈಲ್ ಆಪ್ ಮೂಲಕ ಶಾಲೆಯಿಂದ ಹೊರಗುಳಿದ ಮಕ್ಕಳನ್ನು ಪತ್ತೆಹಚ್ಚಲು ಜುಲೈ 15 ರಿಂದ 30 ರವರೆಗೆ ಸಮೀಕ್ಷೆ ನಡೆಸಲಾಗುವುದು…

3 hours ago

ಸಾಮಾಜಿಕ ಮಾಧ್ಯಮಗಳ ಮೂಲಕ ಹರಡುವ ಸುಳ್ಳು ಸುದ್ದಿಗಳು ಸಮಾಜಕ್ಕೆ ಅನಾಹುತಕಾರಿ: ಸಿಎಂ ಸಿದ್ದು

ಬೆಂಗಳೂರು: ಸಾಮಾಜಿಕ ಮಾಧ್ಯಮಗಳ ಮೂಲಕ ಹರಡುವ ಸುಳ್ಳು ಸುದ್ದಿಗಳು ಸಮಾಜಕ್ಕೆ ಅನಾಹುತಕಾರಿ. ಫೇಕ್ ನ್ಯೂಸ್ ಗಳ ಬಗ್ಗೆ ಇಡೀ ಸಮಾಜ…

3 hours ago

ಕನ್ನಡದ ನೆಲದಲ್ಲಿ ಕನ್ನಡಿಗರ ಮಕ್ಕಳೇ ಉದ್ಯೋಗ ಮಿಸಲಾತಿ ಕೇಳುವಂತಹ ಪರಸ್ಥಿತಿ ಆಘಾತಕಾರಿ

ಕಲಬುರಗಿ: ಡಾ.ಸರೋಜನಿ ಮಹಿಷಿ ವರದಿ ಅನುಷ್ಠಾನಕ್ಕೆ ನಡೆದ, ನಡೆಯುತ್ತಿರುವ ಹೋರಾಟಗಳಿಗೆ ಲೆಕ್ಕವೇ ಇಲ್ಲ. ಮಹಿಷಿ ವರದಿಯ ಹೆಸರು ಹೇಳಿ ಆಳಿದ…

3 hours ago

ವೀರಶೈವ ಮಹಾಸಭಾ ಜಿಲ್ಲಾ ಕಾರ್ಯಕಾರಿ ಸದಸ್ಯ ಸಮಿತಿಗೆ ಮಹೇಶ್ ರೆಡ್ಡಿ ನಾಮಪತ್ರ ಸಲ್ಲಿಕೆ

ಕಲಬುರಗಿ: ಅಖಿಲ ಭಾರತ ವೀರಶೈವ ಮಹಾಸಭಾ ಜಿಲ್ಲಾ ಕಾರ್ಯಕಾರಿ ಸದಸ್ಯ ಸಮಿತಿಗೆ ಮಹಾಸಭಾದ ಅಧ್ಯಕ್ಷ ಶರಣಕುಮಾರ ಮೋದಿ ಹಾಗೂ ಸಮಾಜದ…

3 hours ago

ಕನ್ನಡಿಗರಿಗೆ ಉದ್ಯೋಗ ನೀಡುವಲ್ಲಿ ವಿಫಲ: ರಾಜ್ಯ ಸರಕಾರದ ವಿರುದ್ಧ ಸಾಂಕೇತಿಕ ಧರಣಿ ಸತ್ಯಾಗೃಹ

ಕಲಬುರಗಿ: ಕರ್ನಾಟಕ ನೆಲದಲ್ಲಿ ಕನ್ನಡಿಗರಿಗೆ ಉದ್ಯೋಗ ನೀಡುವಲ್ಲಿ ವಿಫಲವಾದ ರಾಜ್ಯ ಸರ್ಕಾರ ವಿರೋಧಿಸಿ ಕರ್ನಾಟಕ ರಕ್ಷಣಾ ವೇದಿಕೆಯ ಜಿಲ್ಲಾಧ್ಯಕ್ಷ ಪುನೀತರಾಜ…

3 hours ago