ಕಲಬುರಗಿ: ದೇಶದಲ್ಲಿ ಸಧ್ಯ ವಿಷಮ ಪರಿಸ್ಥಿತಿ ಇದ್ದು ಅದರ ನಿವಾರಣೆಗಾಗಿ ಎಲ್ಲರೂ ಸಹಾಯ ಮಾಡಬೇಕಾಗಿದೆ ಅದೇ ರೀತಿ ಸಹಾಯ ಮಾಡುವವರ ಸಂಖ್ಯೆಯೂ ಹೆಚ್ಚಾಗಲಿ ಎಂದು ಜಿ.ಪಂ ಸದಸ್ಯ ಹರ್ಷಾನಂದ ಎಸ್ ಗುತ್ತೇದಾರ ಹೇಳಿದರು.
ಮಂಗಳವಾರ ಆಳಂದ ಪಟ್ಟಣದಲ್ಲಿ ಮತ್ತು ಖಜೂರಿ ಬಾರ್ಡರ್‌ನಲ್ಲಿ ಆಳಂದ ಮಂಡಲ ಬಿಜೆಪಿ ವತಿಯಿಂದ ಬಡವರಿಗೆ, ನಿರ್ಗತಿಕರಿಗೆ, ಪೌರ ಕಾರ್ಮಿಕರಿಗೆ ಹಾಗೂ ಪೊಲೀಸ್ ಇಲಾಖೆಯವರಿಗೆ ಆಹಾರದ ಪೊಟ್ಟಣಗಳನ್ನು ವಿತರಿಸಿದರು.
ಕೊರೋನಾ ವೈರಸ್‌ನಿಂದ ಹಲವಾರು ಜನ ಕೆಲಸವಿಲ್ಲದೇ ಕಂಗಾಲಾಗಿದ್ದಾರೆ ಅವರಿಗೆ ಒಪ್ಪತ್ತಿನ ಊಟಕ್ಕೂ ಪರದಾಟುವಂತಹ ಸ್ಥಿತಿ ನಿರ್ಮಾಣವಾಗಿದೆ ಹೀಗಾಗಿ ಅವರ ಸಹಾಯಕ್ಕೆ ಧಾವಿಸಬೇಕಾಗಿರುವುದು ನಮ್ಮೆಲ್ಲರ ಆದ್ಯ ಕರ್ತವ್ಯವಾಗಿದೆ ಸಾದ್ಯವಾದಷ್ಟು ಈ ಸಂದರ್ಭದಲ್ಲಿ ಅವರ ಜೊತಗೆ ನಿಲ್ಲೋಣಾ ಎಂದು ಕಾರ್ಯಕರ್ತರಿಗೆ ತಿಳಿಸಿದರು.
ಕಾರ್ಯಕರ್ತರು ತಮ್ಮ ಇತಿಮಿತಿಯಲ್ಲಿ ಪ್ರಧಾನಮಂತ್ರಿಗಳ, ಮುಖ್ಯಮಂತ್ರಿಗಳ ಪರಿಹಾರ ನಿಧಿಗೆ ಹಣ ನೀಡಲು ಹಾಗೂ ದಿನಬಳಕೆಯ ವಸ್ತುಗಳನ್ನು ದಾನ ಮಾಡುವವರು ಸಂಬಂಧಪಟ್ಟ ತಹಸೀಲ ಕಚೇರಿಯಲ್ಲಿ ಹೆಸರು ನೋಂದಾಯಿಸಿ ತಮ್ಮ ಕೈಲಾದ ಸಹಾಯ ಮಾಡಬೇಕೆಂದು ಹೇಳಿದರು.
ಮಂಡಲ ಅಧ್ಯಕ್ಷ ಆನಂದರಾವ ಪಾಟೀಲ ಕೊರಳ್ಳಿ, ಪ್ರಕಾಶ ಮಾನೆ, ಮಹೇಶ ಗೌಳಿ, ರವಿ ಪಾಟೀಲ, ರೋಹಿತ ಬಂಡಗಾರ, ಮಹಾಂತೇಶ ಪೂಜಾರಿ, ಗಣೇಶ ಭೋಸಲೆ, ಓಂಕಾರ ಕಾಂಬಳೆ ಸೇರಿದಂತೆ ಇತರರು ಇದ್ದರು.
ಕಲಬುರಗಿ: ಮಹಿಳೆಯರ ಸಹಭಾಗಿತ್ವ ಮತ್ತು ಕೊಡುಗೆಯಿಲ್ಲದೆ ದೇಶದ ಸರ್ವಾಂಗೀಣ ಅಭಿವೃದ್ಧಿ ಅಸಾಧ್ಯ ಎಂದು ಶರಣಬಸವೇಶ್ವರ ವಿದ್ಯಾವರ್ಧಕ ಸಂಘದ ಅಧ್ಯಕ್ಷೆ ಮಾತೋಶ್ರೀ…
ಕಲಬುರಗಿ: ಕಲಬುರಗಿ ದಕ್ಷಿಣ ಮತಕ್ಷೇತ್ರದ ಶಾಸಕ ಅಲ್ಲಮಪ್ರಭು ಪಾಟೀಲ ಅವರು ಶನಿವಾರ ಸಂಜೆ ಕ್ಷೇತ್ರದ ಭೀಮಳ್ಳಿ ಗ್ರಾಮದ ರೈತರ ಹೊಲಗಳಿಗೆ…
ಕಲಬುರಗಿ: ಕಷ್ಟಗಳು ಬಂದಾಗ ಕುಗ್ಗದೆ, ಆ ಕಷ್ಟಗಳನ್ನು ಸವಾಲಾಗಿ ಸ್ವೀಕರಿಸಿ ಮೇಲೇಳಬೇಕು ಎಂದು ತಾಜ್ ನಗರದ ಆರೋಗ್ಯ ಕೇಂದ್ರದ ಹಿರಿಯ…
ಪರೋಪಕಾರ ಸೇವೆಯಿಂದ ಆತ್ಮತೃಪ್ತಿ: ಹಿರೇಮಠ ಕಲಬುರಗಿ: ನಗರ ಹೊರವಲಯದ ಸೈಯದ್ ಚಿಂಚೋಳಿ ರಸ್ತೆಯ ಬಳಿ ಇರುವ ಕೆವಿಪಿ ದಣ್ಣೂರ ಪಿಯು…
ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…
ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…