ಬಿಸಿ ಬಿಸಿ ಸುದ್ದಿ

ಕೋವಿಡ್-19 ಪರೀಕ್ಷೆ: 68 ಜನರಿಗೆ ಕೊರೋನಾ ಸೊಂಕು ಇಲ್ಲ: ಜಿಲ್ಲಾಧಿಕಾರಿ ಶರತ್ ಬಿ.

ಕಲಬುರಗಿ: ಕಲಬುರಗಿ ಜಿಲ್ಲೆಯಿಂದ ಇದೂವರೆಗೆ ಕೋವಿಡ್-19 ಪರೀಕ್ಷೆಗೆ ಮೃತ ವಯೋವೃದ್ಧ ವ್ಯಕ್ತಿ ಸೇರಿದಂತೆ ಒಟ್ಟಾರೆ ಕಳುಹಿಸಲಾದ 101 ಸ್ಯಾಂಪಲ್ಸ್ ಪರೀಕ್ಷೆಗಳಲ್ಲಿ ಮಾರ್ಚ್ 30ರ ಸಾಯಂಕಾಲ 6 ಗಂಟೆ ವರೆಗೆ 68 ಪ್ರಕರಣಗಳಲ್ಲಿ ನೆಗೆಟಿವ್ ವರದಿ ಬಂದಿದೆ ಎಂದು ಜಿಲ್ಲಾಧಿಕಾರಿ ಶರತ್ ಬಿ. ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಸೋಮವಾರ ಹೊರಡಿಸಿರುವ ಪತ್ರಿಕಾ ಪ್ರಕಟಣೆಯಲ್ಲಿ ಒಟ್ಟಾರೆ 101 ಪ್ರಕರಣಗಳ ಪೈಕಿ ಇದೂವರೆಗೆ 3ರಲ್ಲಿ (ಮೃತ ವ್ಯಕ್ತಿ ಸೇರಿದಂತೆ) ಪಾಸಿಟಿವ್ ಬಂದಿದೆ. 2 ಪ್ರಕರಣಗಳಲ್ಲಿ ತಾಂತ್ರಿಕ ಕಾರಣದಿಂದ ಪರೀಕ್ಷೆಯಾಗಿರುವುದಿಲ್ಲ. ಇನ್ನೂ 28 ಪ್ರಕರಣಗಳಲ್ಲಿ ವೈದ್ಯಕೀಯ ಪರೀಕ್ಷೆಯ ವರದಿ ಬರಬೇಕಿದೆ ಎಂದು ಅವರು ತಿಳಿಸಿದ್ದಾರೆ.

ಜಿಲ್ಲೆಯಲ್ಲಿ ಕೊರೋನಾ ಪಾಸಿಟಿವ್ ಹೊಂದಿದ ವ್ಯಕ್ತಿಗಳೊಂದಿಗೆ ನೇರ ಸಂಪರ್ಕ ಹೊಂದಿರುವ 99 ಜನ ಹಾಗೂ ಎರಡನೇ ಸಂಪರ್ಕ ಹೊಂದಿರುವ 388 ಜನರನ್ನು ಗುರುತಿಸಲಾಗಿದೆ. ಇದಲ್ಲದೆ ವಿದೇಶದಿಂದ ಆಗಮಿಸಿದ 487 ಜನರನ್ನು ಸಹ ಪತ್ತೆ ಹಚ್ಚಲಾಗಿದೆ. ಪ್ರಸ್ತುತ 206 ಜನರನ್ನು ಹೋಂ ಕ್ವಾರಂಟೈನ್‍ನಲ್ಲಿಟ್ಟು ಎಲ್ಲರ ಆರೋಗ್ಯದ ಮೇಲೆ ನಿಗಾ ವಹಿಸಿದೆ. ಇನ್ನೂ ಹೋಂ ಕ್ವಾರಂಟೈನ್ ಅವಧಿ ಮುಗಿಸಿದ 768 ಜನರನ್ನು ಸ್ವಯಂ ಆರೋಗ್ಯದ ವರದಿ ನೀಡಲು ತಿಳಿಸಲಾಗಿದೆ. ಪ್ರಸ್ತುತ ಒಟ್ಟಾರೆ 33 ಜನರು ಐಸೋಲೇಟೆಡ್ ವಾರ್ಡ್‍ನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ ಎಂದು ಅಂಕಿ-ಸಂಖ್ಯೆಯೊಂದಿಗೆ ವಿವರ ನೀಡಲಾಗಿದೆ.

7827 ಮನೆ ಸರ್ವೇ, ಸ್ಕ್ರೀನಿಂಗ್:- ಜಿಲ್ಲೆಯಲ್ಲಿ ಇದೂವರೆಗೆ ಕೊರೋನಾ ಪಾಸಿಟಿವ್ (ಮೃತ ವ್ಯಕ್ತಿ ಸೇರಿದಂತೆ) ದೃಢವಾದ ಹಿನ್ನೆಲೆಯಲ್ಲಿ ಕಲಬುರಗಿ ನಗರದ ವಾರ್ಡ್ ಸಂಖ್ಯೆ 30 ಮತ್ತು 14 ಎರಡು ಕಂಟೇನ್‍ಮೆಂಟ್ ಝೋನ್ ಎಂದು ಗುರುತಿಸಿ ಪಾಸಿಟಿವ್ ಪ್ರಕರಣದ ರೋಗಿಗಳ ಮನೆ ಸುತ್ತಮುತ್ತ ಒಟ್ಟಾರೆ 7827 ಮನೆಗಳನ್ನು ಸರ್ವೆ ಮಾಡಿ ಅಲ್ಲಿ ಮುಂಜಾಗೃತ ಕ್ರಮವಾಗಿ ಸ್ಕ್ರೀನಿಂಗ್, ಸ್ಯಾನಿಟೈಜೇಷನ್ ಮತ್ತು ಅರಿವು ಮೂಡಿಸುವ ಕಾರ್ಯಕ್ರಮ ನಡೆಸಲಾಗುತ್ತಿದೆ ಎಂದು ಡಿ.ಸಿ. ಶರತ್ ಬಿ. ತಿಳಿಸಿದ್ದಾರೆ.

ಕೊರೋನಾ ಸಹಾಯವಾಣಿ ಸಂಖ್ಯೆ: 08472-278648/ 278698 / 278604/ 278677. ಡಿ.ಎಸ್.ಯು ಹೆಲ್ಪ್‍ಲೈನ್ ಸಂಖ್ಯೆ: 08472-268648 ಇರುತ್ತದೆ.

ಹೊರದೇಶದಿಂದ ಬಂದವರು 14 ದಿನ ಮನೆಯಲ್ಲಿರಿ: ಇತ್ತೀಚೆಗೆ ಕೋವಿಡ್-19 ಬಾಧಿತ ದೇಶಗಳಿಂದ ಜಿಲ್ಲೆಗೆ ಹಿಂದಿರುಗಿದವರು ಯಾವುದೇ ರೋಗದ ಲಕ್ಷಣ ಕಾಣದಿದ್ದರು ಕಡ್ಡಾಯವಾಗಿ 14 ದಿನ ಹೋಂ ಕ್ವಾರಂಟೈನ್‍ನಲ್ಲಿರಬೇಕು ಮತ್ತು ಜಿಲ್ಲಾಡಳಿತಕ್ಕೆ ಮಾಹಿತಿ ನೀಡಬೇಕು. ರೋಗದ ಲಕ್ಷಣ ಕಂಡುಬಂದಲ್ಲಿ ಹತ್ತಿರದ ಸರ್ಕಾರಿ ಆಸ್ಪತ್ರೆಗೆ ಭೇಟಿ ನೀಡಬೇಕು ಅಥವಾ ಹೆಲ್ಪ್‍ಲೈನ್ ಸಂಖ್ಯೆ: 104 ಕರೆ ಮಾಡಿ ಸಹಾಯ ಪಡೆಯಬಹುದು.

ಯಾವುದೇ ವ್ಯಕ್ತಿ ಕೆಮ್ಮುವಾಗ, ಸೀನುವಾಗ ಕಡ್ಡಾಯವಾಗಿ ಕರವಸ್ತ್ರ ಉಪಯೋಗಿಸಬೇಕು. ಪರಸ್ಪರ ಮಾತಾಡುವಾಗ ಸಾಮಾಜಿಕ ಅಂತರ ಕಾಯ್ದುಕೊಳ್ಳಬೇಕು. ಆಗಾಗ ಸಾಬೂನಿನಿಂದ ಕೈಗಳನ್ನು ಸ್ವಚ್ಛವಾಗಿ ತೊಳೆದುಕೊಳ್ಳಬೇಕು ಮತ್ತು ಹೆಚ್ಚಿನ ಜನಸಂದಣಿಯಲ್ಲಿ ಭಾಗವಹಿಸದಂತೆ ಎಚ್ಚರಿಕೆ ವಹಿಸಿದಲ್ಲಿ ಕೊರೋನಾ ಸೊಂಕು ತಡೆಗಟ್ಟಬಹುದಾಗಿದೆ ಎಂದು ಅವರು ತಿಳಿಸಿದ್ದಾರೆ.

emedialine

Recent Posts

ಆತ್ಮವಿಶ್ವಾಸವಿದ್ದರೆ ಜೀವನದಲ್ಲಿ ಏನನ್ನಾದರೂ ಸಾಧಿಸಬಹುದು : ಶಂಕರಗೌಡ

ಕಲಬುರಗಿ: ಜೀವನದಲ್ಲಿ ಹತ್ತನೇ ಮತ್ತು ಪಿಯುಸಿ ಬಹಳ ಮಹತ್ವದ ಘಟ್ಟಗಳು. ಇವೆರಡು ನಮ್ಮ ಭವಿಷ್ಯವನ್ನು ನಿರ್ಧರಿಸುತ್ತವೆ. ವಿದ್ಯಾರ್ಥಿಗಳು ಅಚಲವಾದ ಆತ್ಮವಿಶ್ವಾಸದಿಂದ…

8 hours ago

ಬೌದ್ಧಿಕ ವಿಕಾಸದಿಂದ ತನ್ನತನದ ಶೋಧ

ಸೇಡಂ : ತಮ್ಮ ಬೌದ್ಧಿಕ ವಿಕಾಸದಲ್ಲಿಯೇ ಮಹಿಳೆಯರ ಅಸ್ತಿತ್ವವಿದೆ ಎಂದು ಕೇಂದ್ರ ಸಾಹಿತ್ಯ ಅಕಾಡೆಮಿ ಸದಸ್ಯ ಡಾ.ಬಸವರಾಜ ಸಾದರ ಹೇಳಿದರು.…

8 hours ago

ನಿಧನ ವಾರ್ತೆ; ಆನಂದಪ್ಪ ಉಮ್ಮನಗೋಳ್

ಕಲಬುರಗಿ: ಅಫಜಲಪುರ ತಾಲೂಕಿನ ಸೊನ್ನ ಗ್ರಾಮದ ನಿವಾಸಿ ಆನಂದಪ್ಪ ಶರಣಪ್ಪ ಉಮ್ಮನಗೋಳ್(೮೦) ಅವರು ಸೋಮವಾರ ಬೆಳಗ್ಗೆ ವಯೋಸಹಜವಾಗಿ ನಿಧನರಾದರು. ಮೃತರು…

10 hours ago

ಸಂಘಸಂಸ್ಥೆಗಳು ಸಮಾಜಕ್ಕೆ ನೀಡಿದ ಕೋಡುಗೆ ಅಪಾರ ಪಾಳಾಶ್ರೀ

ಕಲಬುರಗಿ: ಸಂಘಸಂಸ್ಥೆಗಳು ಸಾದಕರನ್ನು ಗುರುತಿಸಿ ಪ್ರಶಸ್ತಿ ಪುರಸ್ಕಾರಗಳನ್ನು ನೀಡುವ ಮುಖಾಂತರಾ ಅವರ ಜವಾಬ್ದಾರಿ ಹೆಚ್ಚಿಸುವುದರಜೋತೆಯಲ್ಲಿ ಸಾಮಾಜಿಕ ಕೆಲಸಗಳನ್ನು ಮಾಡುತ್ತಿರುವುದು ಸಮಾಜಕ್ಕೆ…

10 hours ago

ಹೊಸ ಹೊಸ ಉದ್ಯೋಗ ಸೃಷ್ಟಿಸಲು HKE ಸಂಸ್ಥೆ ಕಾರ್ಯ ಶ್ಲಾಘನೀಯ

ಕಲಬುರಗಿ; ಹೈದ್ರಾಬಾದ್- ಕರ್ನಾಟಕ ಶಿಕ್ಷಣ ಸಂಸ್ಥೆಯ PDACE ಸಭಾಂಗಣದಲ್ಲಿ ನಡೆದ ಕಲ್ಯಾಣ ಕರ್ನಾಟಕ startup conclave ಇಂದು ದಕ್ಷಣ ಶಾಸಕ…

10 hours ago

ಸ್ವಾಭಿಮಾನದ ಬದುಕಿಗೆ ಸಂಗೀತ ಪೂರಕ

ಕಲಬುರಗಿ : ಒತ್ತಡದ ಬದುಕಿನಲ್ಲಿ ಸಂಗೀತ ಆಲಿಸುವುದರಿಂದ ಮಾನಸಿಕ ನೆಮ್ಮದಿ, ಶಾಂತಿ ದೊರೆಯಲು ಸಾಧ್ಯವಿದೆ. ಅನೇಕ ಜನ ಸಂಗೀತ ಕಲಾವಿದರಿಂದು…

10 hours ago