ಶಾಲಾ ಮಕ್ಕಳಿಗೆ ಬಿಸಿಯೂಟ ಆಹಾರ ಪದಾರ್ಥ ವಿತರಣೆ

0
144

ಶಹಾಬಾದ: ದೇಶ ಲಾಕ್ ಡೌನ್ ಮಾಡಿದ್ದರಿಂದ ಆಹಾರ ಸಮಸ್ಯೆ ಉಂಟಾಗದಿರಲಿ ಎಂಬ ಉದ್ದೇಶದಿಂದ ಬಿಸಿಯೂಟದ ಎರಡು ತಿಂಗಳ ಆಹಾರ ಧಾನ್ಯವನ್ನು ಶಾಲಾ ಮಕ್ಕಳಿಗೆ ಒಟ್ಟಿಗೆ ನೀಡಲಾಗುತ್ತಿದೆ ಎಂದು ಸಿಆರ್‌ಸಿ ಶಿವಪುತ್ರ ಕರಣಿಕ್ ಹೇಳಿದರು.

ಅವರು ಮಂಗಳವಾರ ನಗರದ ವಡ್ಡರಗೇರಾ ಸರಕಾರಿ ಪ್ರಾಥಮಿಕ ಶಾಲೆಯಲ್ಲಿ ಆಯೋಜಿಸಲಾದ ಬಿಸಿಯೂಟ ಆಹಾರ ಪದಾರ್ಥಗಳನ್ನು ಶಾಲಾ ಮಕ್ಕಳಿಗೆ ವಿತರಿಸಿ ಮಾತನಾಡಿದರು.

Contact Your\'s Advertisement; 9902492681

ಬಿಜೆಪಿ ಮುಖಂಡ ಭೀಮರಾವ ಸಾಳುಂಕೆ ಮಾತನಾಡಿ, ಇಡೀ ಜಗತ್ತಿಗೆ ಮಹಾಮಾರಿ ರೋಗವಾದ ಕೊರೊನಾ ವ್ಯಾಪಕವಾಗಿ ಹರಡುತ್ತಿದೆ.ಇದರಿಂದ ಸಾವಿರಾರು ಜನರು ಪ್ರಾಣ ಕಳೆದುಕೊಂಡಿದ್ದಾರೆ.ಈ ಬಗ್ಗೆ ನಿರ್ಲಕ್ಷ್ಯ ತೋರಿದರೆ ಮುಂದೆ ಗಡಾಂತರ ಎದುರಿಸಬೇಕಾಗುತ್ತದೆ.ಆದ್ದರಿಂದ ಪ್ರತಿಯೊಬ್ಬರು ಸಾಮಾಜಿಕ ಅಂತರ ಕಾಯ್ದುಕೊಳ್ಳುವುದೇ ಪರಿಹಾರ ಎಂದರು.

ದೇವದಾಸ ಜಾಧವ ಮಾತನಾಡಿ, ಕರೊನಾ ಸಾಂಕ್ರಾಮಿಕ ರೋಗವಾಗಿದ್ದು, ಒಬ್ಬರಿಂದ ಒಬ್ಬರಿಗೆ ಹರಡುತ್ತಿದೆ. ಇದರ ಬಗ್ಗೆ ನಿರ್ಲಕ್ಷ್ಯ ತೋರಬೇಡಿ. ಈಗಾಗಲೇ ಬೇರೆ ಬೇರೆ ದೇಶಗಳಲ್ಲಿ ಇದರ ತೀವ್ರತೆ ಹೆಚ್ಚಾಗಿರುವುದನ್ನು ಅರಿತುಕೊಂಡು ಪ್ರತಿಯೊಬ್ಬರೂ ಸ್ವಚ್ಛತೆ ಕಡೆಗೆ ಹೆಚ್ಚಿನ ಗಮನವಹಿಸಬೇಕು.ಯಾರು ಮನೆಯಿಂದ ಅನಾವಶ್ಯಕವಾಗಿ ಹೊರಬರಬೇಡಿ.ಸಾಮೂಹಿಕವಾಗಿ ಸೇರಬೇಡಿ. ಮಾಸ್ಕ್‌ಗಳನ್ನು ಧರಿಸಿಬೇಕು.

ನಗರಸಭೆ ಸದಸ್ಯೆ ತಿಮ್ಮಬಾಯಿ ಕುಸಾಳೆ, ಎಸ್‌ಡಿಎಂಸಿ ಅಧ್ಯಕ್ಷ ತಿಮ್ಮಣ್ಣ ಭರಮಣ್ಣ, ಬಿಜೆಪಿ ನಗರ ಮಾಜಿ ಅಧ್ಯಕ್ಷ ಸುಭಾಷ ಜಾಪೂರ, ಸಿದ್ರಾಮ ಕುಸಾಳೆ, ಶಾಲಾ ಮುಖ್ಯಗುರುಮಾತೆ ಬಾಯಮ್ಮ, ಇತರರು ಇದ್ದರು.

ಪ್ರತ್ಯುತ್ತರ ಬಿಟ್ಟು

Please enter your comment!
Please enter your name here