ಶಹಾಬಾದ: ದೇಶ ಲಾಕ್ ಡೌನ್ ಮಾಡಿದ್ದರಿಂದ ಆಹಾರ ಸಮಸ್ಯೆ ಉಂಟಾಗದಿರಲಿ ಎಂಬ ಉದ್ದೇಶದಿಂದ ಬಿಸಿಯೂಟದ ಎರಡು ತಿಂಗಳ ಆಹಾರ ಧಾನ್ಯವನ್ನು ಶಾಲಾ ಮಕ್ಕಳಿಗೆ ಒಟ್ಟಿಗೆ ನೀಡಲಾಗುತ್ತಿದೆ ಎಂದು ಸಿಆರ್‌ಸಿ ಶಿವಪುತ್ರ ಕರಣಿಕ್ ಹೇಳಿದರು.
ಅವರು ಮಂಗಳವಾರ ನಗರದ ವಡ್ಡರಗೇರಾ ಸರಕಾರಿ ಪ್ರಾಥಮಿಕ ಶಾಲೆಯಲ್ಲಿ ಆಯೋಜಿಸಲಾದ ಬಿಸಿಯೂಟ ಆಹಾರ ಪದಾರ್ಥಗಳನ್ನು ಶಾಲಾ ಮಕ್ಕಳಿಗೆ ವಿತರಿಸಿ ಮಾತನಾಡಿದರು.
ಬಿಜೆಪಿ ಮುಖಂಡ ಭೀಮರಾವ ಸಾಳುಂಕೆ ಮಾತನಾಡಿ, ಇಡೀ ಜಗತ್ತಿಗೆ ಮಹಾಮಾರಿ ರೋಗವಾದ ಕೊರೊನಾ ವ್ಯಾಪಕವಾಗಿ ಹರಡುತ್ತಿದೆ.ಇದರಿಂದ ಸಾವಿರಾರು ಜನರು ಪ್ರಾಣ ಕಳೆದುಕೊಂಡಿದ್ದಾರೆ.ಈ ಬಗ್ಗೆ ನಿರ್ಲಕ್ಷ್ಯ ತೋರಿದರೆ ಮುಂದೆ ಗಡಾಂತರ ಎದುರಿಸಬೇಕಾಗುತ್ತದೆ.ಆದ್ದರಿಂದ ಪ್ರತಿಯೊಬ್ಬರು ಸಾಮಾಜಿಕ ಅಂತರ ಕಾಯ್ದುಕೊಳ್ಳುವುದೇ ಪರಿಹಾರ ಎಂದರು.
ದೇವದಾಸ ಜಾಧವ ಮಾತನಾಡಿ, ಕರೊನಾ ಸಾಂಕ್ರಾಮಿಕ ರೋಗವಾಗಿದ್ದು, ಒಬ್ಬರಿಂದ ಒಬ್ಬರಿಗೆ ಹರಡುತ್ತಿದೆ. ಇದರ ಬಗ್ಗೆ ನಿರ್ಲಕ್ಷ್ಯ ತೋರಬೇಡಿ. ಈಗಾಗಲೇ ಬೇರೆ ಬೇರೆ ದೇಶಗಳಲ್ಲಿ ಇದರ ತೀವ್ರತೆ ಹೆಚ್ಚಾಗಿರುವುದನ್ನು ಅರಿತುಕೊಂಡು ಪ್ರತಿಯೊಬ್ಬರೂ ಸ್ವಚ್ಛತೆ ಕಡೆಗೆ ಹೆಚ್ಚಿನ ಗಮನವಹಿಸಬೇಕು.ಯಾರು ಮನೆಯಿಂದ ಅನಾವಶ್ಯಕವಾಗಿ ಹೊರಬರಬೇಡಿ.ಸಾಮೂಹಿಕವಾಗಿ ಸೇರಬೇಡಿ. ಮಾಸ್ಕ್‌ಗಳನ್ನು ಧರಿಸಿಬೇಕು.
ನಗರಸಭೆ ಸದಸ್ಯೆ ತಿಮ್ಮಬಾಯಿ ಕುಸಾಳೆ, ಎಸ್‌ಡಿಎಂಸಿ ಅಧ್ಯಕ್ಷ ತಿಮ್ಮಣ್ಣ ಭರಮಣ್ಣ, ಬಿಜೆಪಿ ನಗರ ಮಾಜಿ ಅಧ್ಯಕ್ಷ ಸುಭಾಷ ಜಾಪೂರ, ಸಿದ್ರಾಮ ಕುಸಾಳೆ, ಶಾಲಾ ಮುಖ್ಯಗುರುಮಾತೆ ಬಾಯಮ್ಮ, ಇತರರು ಇದ್ದರು.
ಕಲಬುರಗಿ: ಕಾಂಗ್ರೆಸ್ ಪಕ್ಷದ ಅಂಗ ಸಂಖ್ಯೆ ಸೇವಾದಳ ಯಂಗ್ ಬ್ರಿಗೇಡ್ ಸದಸ್ಯತ್ವ ಅಭಿಯಾನ ನ.20ರಿಂದ ರಾಜ್ಯವ್ಯಾಪಿ ಆರಂಭ ಮಾಡಲಾಗಿದ್ದು, ಆಸಕ್ತರು…
ಕಲಬುರಗಿ: ಜೀವನದಲ್ಲಿ ಹತ್ತನೇ ಮತ್ತು ಪಿಯುಸಿ ಬಹಳ ಮಹತ್ವದ ಘಟ್ಟಗಳು. ಇವೆರಡು ನಮ್ಮ ಭವಿಷ್ಯವನ್ನು ನಿರ್ಧರಿಸುತ್ತವೆ. ವಿದ್ಯಾರ್ಥಿಗಳು ಅಚಲವಾದ ಆತ್ಮವಿಶ್ವಾಸದಿಂದ…
ಸೇಡಂ : ತಮ್ಮ ಬೌದ್ಧಿಕ ವಿಕಾಸದಲ್ಲಿಯೇ ಮಹಿಳೆಯರ ಅಸ್ತಿತ್ವವಿದೆ ಎಂದು ಕೇಂದ್ರ ಸಾಹಿತ್ಯ ಅಕಾಡೆಮಿ ಸದಸ್ಯ ಡಾ.ಬಸವರಾಜ ಸಾದರ ಹೇಳಿದರು.…
ಕಲಬುರಗಿ: ಅಫಜಲಪುರ ತಾಲೂಕಿನ ಸೊನ್ನ ಗ್ರಾಮದ ನಿವಾಸಿ ಆನಂದಪ್ಪ ಶರಣಪ್ಪ ಉಮ್ಮನಗೋಳ್(೮೦) ಅವರು ಸೋಮವಾರ ಬೆಳಗ್ಗೆ ವಯೋಸಹಜವಾಗಿ ನಿಧನರಾದರು. ಮೃತರು…
ಕಲಬುರಗಿ: ಸಂಘಸಂಸ್ಥೆಗಳು ಸಾದಕರನ್ನು ಗುರುತಿಸಿ ಪ್ರಶಸ್ತಿ ಪುರಸ್ಕಾರಗಳನ್ನು ನೀಡುವ ಮುಖಾಂತರಾ ಅವರ ಜವಾಬ್ದಾರಿ ಹೆಚ್ಚಿಸುವುದರಜೋತೆಯಲ್ಲಿ ಸಾಮಾಜಿಕ ಕೆಲಸಗಳನ್ನು ಮಾಡುತ್ತಿರುವುದು ಸಮಾಜಕ್ಕೆ…
ಕಲಬುರಗಿ; ಹೈದ್ರಾಬಾದ್- ಕರ್ನಾಟಕ ಶಿಕ್ಷಣ ಸಂಸ್ಥೆಯ PDACE ಸಭಾಂಗಣದಲ್ಲಿ ನಡೆದ ಕಲ್ಯಾಣ ಕರ್ನಾಟಕ startup conclave ಇಂದು ದಕ್ಷಣ ಶಾಸಕ…