63 ವರ್ಷದ ವೈದ್ಯ ಕೊರೋನಾ ಸೋಂಕಿನಿಂದ ಗುಣಮುಖ: ಡಿ.ಸಿ. ಶರತ್‌ ಬಿ.

0
97

ಕಲಬುರಗಿ: ಕೊರೋನಾ‌ ಸೋಂಕಿನಿಂದ ಮೃತರಾದ ಕಲಬುರಗಿಯ ವಯೋವೃದ್ಧನಿಗೆ ಚಿಕಿತ್ಸೆ ನೀಡಿದ 63 ವರ್ಷದ ವೈದ್ಯ ಕೊರೋನಾ ಸೋಂಕಿನಿಂದ ಗುಣಮುಖರಾಗಿದ್ದಾರೆ ಎಂದು ಡಿ.ಸಿ. ಶರತ್‌ಬಿ. ತಿಳಿಸಿದ್ದಾರೆ.

ಮೃತ ವೃದ್ಧನ ನೇರ ಸಂಪರ್ಕದಲ್ಲಿ ಬಂದಿದ್ದರಿಂದ ಇವರನ್ನು ಕೋವಿಡ್-19 ಪರೀಕ್ಷೆಗೆ ಒಳಪಡಿಸಿದಾಗ ಕೊರೋನಾ ಪಾಸಿಟಿವ್ ದೃಢವಾದ ಹಿನ್ನೆಲೆಯಲ್ಲಿ ಕಲಬುರಗಿ ಇ.ಎಸ್.ಐ.ಸಿ ಮೆಡಿಕಲ್ ಕಾಲೇಜಿನ ಐಸೋಲೇಷನ್ ವಾರ್ಡ್ ನಲ್ಲಿಟ್ಟು ತೀವ್ರ ನಿಗಾದಡಿ ಚಿಕಿತ್ಸೆ ನೀಡಲಾಗುತ್ತಿದೆ.

Contact Your\'s Advertisement; 9902492681

ಚಿಕಿತ್ಸೆಯ 14 ದಿನಗಳ ನಂತರ ಸದರಿ ವ್ಯಕ್ತಿಗೆ ಕೋವಿಡ್-19 ಪರೀಕ್ಷೆ ಮಾಡಿದಾಗ ನೆಗೆಟಿವ್ ಕಂಡುಬಂದಿದೆ. 24 ಗಂಟೆ‌ ನಂತರ‌ ಮತ್ತೊಮ್ಮೆ ಪರೀಕ್ಷಿಸಿದಾಗ ಸಹ ನೆಗೆಟಿವ್ ವರದಿ ಬಂದಿರುತ್ತದೆ ಎಂದು ಡಿ.ಸಿ. ಶರತ್ ಬಿ. ಅವರು ಮಂಗಳವಾರ ತಿಳಿಸಿದ್ದಾರೆ.

ಪ್ರತ್ಯುತ್ತರ ಬಿಟ್ಟು

Please enter your comment!
Please enter your name here