ಬಿಸಿ ಬಿಸಿ ಸುದ್ದಿ

ಬೀಸಾಕಲ್ಲು ಮಾಡುವ ಭೋವಿ ಕುಟುಂಬಗಳಿಗೆ ಆಹಾರ ಪದಾರ್ಥ ವಿತರಣೆ

ಶಹಾಬಾದ: ನಗರದ ಹಳೆ ಪೊಲೀಸ್ ಠಾಣೆಯ ಪಕ್ಕದಲ್ಲಿ ಊಟದ ಸಮಸ್ಯೆಯಿಂದ ಪರದಾಡುತ್ತಿದ್ದ ಬೀಜಾಪೂರದಿಂದ ಬಂದು ಬೀಸಾಕಲ್ಲು ಮಾಡುವ ಭೋವಿ ಕುಟುಂಬಗಳಿಗೆ ಬಿಜೆಪಿ ಮುಖಂಡ ಗಿರಿರಾಜ ಪವಾರ ಹಾಗೂ ಸಂಗಡಿಗರು ಆಹಾರದ ಪದಾರ್ಥಗಳನ್ನು ವಿತರಿಸಿದರು.

ಇದೇ ಸಂದರ್ಭದಲ್ಲಿ ಗಿರಿರಾಜ ಪವಾರ ಮಾತನಾಡಿದ ಅವರು, ಕರೋನಾ ವೈರಸ್ ವ್ಯಾಪಕವಾಗಿ ಹರಡುತ್ತಿರುವುದರಿಂದ ದೇಶವನ್ನೇ ಲಾಕ್‌ಡೌನ್ ಮಾಡಲಾಗಿದೆ.ಕೆಲಸಕ್ಕಾಗಿ ದೂರದಿಂದ ಬಂದ ಜನರಿಗೆ ದುಡಿಯಲು ಕೆಲಸವಿಲ್ಲ. ಬಿಸಾಕಲ್ಲು ನಿರ್ಮಾಣ ಮಾಡಿದರೂ ಕೊಳ್ಳೊರಿಲ್ಲ.ಇದರಿಂದ ವ್ಯಾಪಾರವಿಲ್ಲದೇ ಕಷ್ಟದ ಬದುಕು ನಿರ್ಮಾಣವಾಗಿದೆ. ಅಲ್ಪಸ್ವಲ್ಪ ಇದ್ದ ದುಡ್ಡು ಖಾಲಿಯಾಗಿದೆ.

ಇಂತಹ ಅನೇಕ ಕುಟುಂಬಗಳಿಗೆ ಆಹಾರ ತಯ್ಯಾರು ಮಾಡಿ ನೀಡಿದರೇ ಒಂದು ದಿನದ ಮಟ್ಟಿಗೆ ಆಗಬಹುದು.ಅದರ ಬದಲಿಗೆ ಇದ್ದವರು ಸ್ವಲ್ಪ ಆಹಾರ ಪದಾರ್ಥಗಳನ್ನು ನೀಡಿದರೇ ಅವರೇ ಆಹಾರವನ್ನು ಮಾಡಿಕೊಂಡು ಊಟ ಮಾಡುತ್ತಾರೆ. ಈ ಸಂದರ್ಭದಲ್ಲಿ ಕೇವಲ ಪಟ್ಟಣ ಪ್ರದೇಶದಲ್ಲಿ ಕೊಡುವುದಕ್ಕಿಂತ ಗ್ರಾಮೀಣ ಪ್ರದೇಶದ ಬಡ ರೈತರಿಗೂ ದಾಸೋಹ ಮಾಡುವ ಕೈಗಳು ಹೆಚ್ಚಾದರೆ, ಅನ್ನದಾತನಿಗೆ ಸ್ವಲ್ಪ ಋಣ ತೀರಿಸಿದಂತಾಗುತ್ತದೆ.ಆದ್ದರಿಂದ ದಾಸೋಹ ಮಾಡುವ ಜನರು ಹೆಚ್ಚಾಗಲಿ ಎಂದು ಮನವಿ ಮಾಡುತ್ತೆನೆ ಎಂದರು.

emedialine

Recent Posts

ಮಹಿಳಾ ಸಹಭಾಗಿತ್ವ ಇಲ್ಲದೆ ದೇಶದ ಅಭಿವೃದ್ಧಿ ಅಸಾಧ್ಯ: ಮಾತೋಶ್ರೀ ಡಾ. ಅವ್ವಾಜಿ

ಕಲಬುರಗಿ: ಮಹಿಳೆಯರ ಸಹಭಾಗಿತ್ವ ಮತ್ತು ಕೊಡುಗೆಯಿಲ್ಲದೆ ದೇಶದ ಸರ್ವಾಂಗೀಣ ಅಭಿವೃದ್ಧಿ ಅಸಾಧ್ಯ ಎಂದು ಶರಣಬಸವೇಶ್ವರ ವಿದ್ಯಾವರ್ಧಕ ಸಂಘದ ಅಧ್ಯಕ್ಷೆ ಮಾತೋಶ್ರೀ…

6 hours ago

ತೊಗರಿ ಬೆಳೆ‌ ಹಾನಿ ಪ್ರದೇಶ ವೀಕ್ಷಿಸಿದ ಶಾಸಕ ಅಲ್ಲಮಪ್ರಭು ಪಾಟೀಲ

ಕಲಬುರಗಿ: ಕಲಬುರಗಿ ದಕ್ಷಿಣ ಮತಕ್ಷೇತ್ರದ ಶಾಸಕ ಅಲ್ಲಮಪ್ರಭು ಪಾಟೀಲ ಅವರು ಶನಿವಾರ ಸಂಜೆ ಕ್ಷೇತ್ರದ ಭೀಮಳ್ಳಿ ಗ್ರಾಮದ ರೈತರ ಹೊಲಗಳಿಗೆ…

16 hours ago

ಕಷ್ಟಗಳಿಗೆ ಕುಗ್ಗದೇ ಸವಾಲಾಗಿ ಸ್ವಿಕರಿಸಿ

ಕಲಬುರಗಿ: ಕಷ್ಟಗಳು ಬಂದಾಗ ಕುಗ್ಗದೆ, ಆ ಕಷ್ಟಗಳನ್ನು ಸವಾಲಾಗಿ ಸ್ವೀಕರಿಸಿ ಮೇಲೇಳಬೇಕು ಎಂದು ತಾಜ್ ನಗರದ ಆರೋಗ್ಯ ಕೇಂದ್ರದ ಹಿರಿಯ…

16 hours ago

ಕಲಬುರಗಿ: ಹಾಸ್ಯ ಕಲಾವಿದ ರೇವಣಸಿದ್ಧ ಸ್ವಾಮಿ ದಂಪತಿಗೆ ಗೆಳೆಯರ ಬಳಗದಿಂದ ಸತ್ಕರಿಸಲಾಯಿತು.

ಪರೋಪಕಾರ ಸೇವೆಯಿಂದ ಆತ್ಮತೃಪ್ತಿ: ಹಿರೇಮಠ ಕಲಬುರಗಿ: ನಗರ ಹೊರವಲಯದ ಸೈಯದ್ ಚಿಂಚೋಳಿ ರಸ್ತೆಯ ಬಳಿ ಇರುವ ಕೆವಿಪಿ ದಣ್ಣೂರ ಪಿಯು…

16 hours ago

ಸಾವಿರ ಸೀರೆ ವಿತರಿಸಿ ಸಚಿವ ಪ್ರಿಯಾಂಕ್ ಜನ್ಮದಿನ ಆಚರಣೆ

  ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…

1 day ago

ಮೂರೂ ಕ್ಷೇತ್ರದಲ್ಲಿ ಕಾಂಗ್ರೆಸ್ ಗೆಲುವು: ಕಾರ್ಯಕರ್ತರಿಂದ ವಿಜಯೋತ್ಸವ

ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…

1 day ago