ಬಿಸಿ ಬಿಸಿ ಸುದ್ದಿ

ಹಸನಾಪುರದಲ್ಲಿ ಟೀಂ ಎನ್‌ಆರ್‌ಜಿ ವತಿಯಿಂದ ಜನತೆಗೆ ಆಹಾರ ಧಾನ್ಯಗಳ ವಿತರಣೆ

ಸುರಪುರ: ಕ್ಷೇತ್ರದ ಹಾಗು ನಾಡಿನ ಜನತೆ ಬಗ್ಗೆ ಅಪಾರವಾದ ಕಾಳಜಿ ಮತ್ತು ಜನರ ಸೌಖ್ಯವನ್ನು ಬಯಸುವ ನಮ್ಮ ಕ್ಷೇತ್ರದ ಜನಪ್ರೀಯ ಶಾಸಕರಾದ ರಾಜುಗೌಡರ ಮಾರ್ಗದರ್ಶನದಂತೆ ಟೀಂ ಎನ್‌ಆರ್‌ಜಿ ವತಿಯಿಂದ ನಗರದಲ್ಲಿಯ ಬಡವರು ನಿರ್ಗತಿಕರು ಮತ್ತು ವಲಸಿಗರಿಗಾಗಿ ನಿತ್ಯವು ಅನ್ನ ಆಹಾರ ಮತ್ತು ಅಕ್ಕಿ ಬೇಳೆ ತರಕಾರಿ ಮತ್ತಿತರೆ ವಸ್ತುಗಳನ್ನು ಉಚಿತವಾಗಿ ವಿತರಿಸಲಾಗುತ್ತಿದೆ ಎಂದು ರಾಜುಗೌಡರ ಅಭಿಮಾನಿ ಮುಖಂಡ ಶರಣು ಹಸನಾಪುರ ಮಾತನಾಡಿದರು.

ನಗರದ ಹಸನಾಪುರದ ಜನತೆಗೆ ಆಹಾರ ಧಾನ್ಯಗಳ ವಿತರಿಸಿ ಮಾತನಾಡಿ,ಕೊರೊನಾ ಭಿತಿಯಿಂದ ಜನರು ಕೆಲಸವಿಲ್ಲದೆ ಮನೆಯಲ್ಲಿಯೆ ಇರುವ ಮೂಲಕ ಜೀವನ ಸಾಗಿಸುವುದು ಕಷ್ಟಕರವಾಗಿದೆ,ಇದನ್ನು ಅರಿತ ಶಾಸಕರು ನಮಗೆಲ್ಲ ಮಾರ್ಗದರ್ಶನ ಮಾಡಿದ್ದರಿಂದ ಇಂದು ಎಲ್ಲೆಡೆ ಉಚಿತ ಆಹಾರ ಧಾನ್ಯ ಮತ್ತಿತರೆ ವಸ್ತುಗಳ ವಿತರಿಸಲಾಗುತ್ತಿದೆ.

ಜನರು ಇವುಗಳನ್ನು ಉಪಯೋಗಪಡಿಸಿಕೊಂಡು ದಯವಿಟ್ಟು ಭಾರತ ಲಾಕ್‌ಡೌನ್ ಇರುವುದರಿಂದ ಮನೆಯಲ್ಲಿಯೆ ಇದ್ದು ಕೊರೊನಾ ನಿರ್ಮೂಲನೆಗೆ ಸಹಕರಿಸುವಂತೆ ಮನವಿ ಮಾಡಿದರು.ನಗರದ ಸುಮಾರು ನಲವತ್ತಕ್ಕು ಹೆಚ್ಚು ಕುಟುಂಬಗಳಿಗೆ ಆಹಾರ ಧಾನ್ಯಗಳ ವಿತರಿಸಿದರು.ಈ ಸಂದರ್ಭದಲ್ಲಿ ಸೂಗು ಸಜ್ಜನ್,ಮಹೇಶ ಹಸನಾಪುರ ಸೇರಿದಂತೆ ಅನೇಕರಿದ್ದರು.

emedialine

Recent Posts

ಮಹಿಳಾ ಸಹಭಾಗಿತ್ವ ಇಲ್ಲದೆ ದೇಶದ ಅಭಿವೃದ್ಧಿ ಅಸಾಧ್ಯ: ಮಾತೋಶ್ರೀ ಡಾ. ಅವ್ವಾಜಿ

ಕಲಬುರಗಿ: ಮಹಿಳೆಯರ ಸಹಭಾಗಿತ್ವ ಮತ್ತು ಕೊಡುಗೆಯಿಲ್ಲದೆ ದೇಶದ ಸರ್ವಾಂಗೀಣ ಅಭಿವೃದ್ಧಿ ಅಸಾಧ್ಯ ಎಂದು ಶರಣಬಸವೇಶ್ವರ ವಿದ್ಯಾವರ್ಧಕ ಸಂಘದ ಅಧ್ಯಕ್ಷೆ ಮಾತೋಶ್ರೀ…

41 mins ago

ತೊಗರಿ ಬೆಳೆ‌ ಹಾನಿ ಪ್ರದೇಶ ವೀಕ್ಷಿಸಿದ ಶಾಸಕ ಅಲ್ಲಮಪ್ರಭು ಪಾಟೀಲ

ಕಲಬುರಗಿ: ಕಲಬುರಗಿ ದಕ್ಷಿಣ ಮತಕ್ಷೇತ್ರದ ಶಾಸಕ ಅಲ್ಲಮಪ್ರಭು ಪಾಟೀಲ ಅವರು ಶನಿವಾರ ಸಂಜೆ ಕ್ಷೇತ್ರದ ಭೀಮಳ್ಳಿ ಗ್ರಾಮದ ರೈತರ ಹೊಲಗಳಿಗೆ…

11 hours ago

ಕಷ್ಟಗಳಿಗೆ ಕುಗ್ಗದೇ ಸವಾಲಾಗಿ ಸ್ವಿಕರಿಸಿ

ಕಲಬುರಗಿ: ಕಷ್ಟಗಳು ಬಂದಾಗ ಕುಗ್ಗದೆ, ಆ ಕಷ್ಟಗಳನ್ನು ಸವಾಲಾಗಿ ಸ್ವೀಕರಿಸಿ ಮೇಲೇಳಬೇಕು ಎಂದು ತಾಜ್ ನಗರದ ಆರೋಗ್ಯ ಕೇಂದ್ರದ ಹಿರಿಯ…

11 hours ago

ಕಲಬುರಗಿ: ಹಾಸ್ಯ ಕಲಾವಿದ ರೇವಣಸಿದ್ಧ ಸ್ವಾಮಿ ದಂಪತಿಗೆ ಗೆಳೆಯರ ಬಳಗದಿಂದ ಸತ್ಕರಿಸಲಾಯಿತು.

ಪರೋಪಕಾರ ಸೇವೆಯಿಂದ ಆತ್ಮತೃಪ್ತಿ: ಹಿರೇಮಠ ಕಲಬುರಗಿ: ನಗರ ಹೊರವಲಯದ ಸೈಯದ್ ಚಿಂಚೋಳಿ ರಸ್ತೆಯ ಬಳಿ ಇರುವ ಕೆವಿಪಿ ದಣ್ಣೂರ ಪಿಯು…

11 hours ago

ಸಾವಿರ ಸೀರೆ ವಿತರಿಸಿ ಸಚಿವ ಪ್ರಿಯಾಂಕ್ ಜನ್ಮದಿನ ಆಚರಣೆ

  ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…

1 day ago

ಮೂರೂ ಕ್ಷೇತ್ರದಲ್ಲಿ ಕಾಂಗ್ರೆಸ್ ಗೆಲುವು: ಕಾರ್ಯಕರ್ತರಿಂದ ವಿಜಯೋತ್ಸವ

ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…

1 day ago