ಕಲಬುರಗಿ: ಕೊರೋನಾ ಸೋಂಕಿನ ಭೀತಿ ಹಿನ್ನೆಲೆಯಲ್ಲಿ ನವದೆಹಲಿಯಲ್ಲಿ ಕಳೆದ ಮಾರ್ಚ್ 14 ರಿಂದ 17ರ ವರೆಗೆ ನಡೆದ ನಿಜಾಮುದ್ದೀನ್ ತಬ್ಲಿಘಿ ಜಮಾಅತ್ ಸಾಮೂಹಿಕ ಪ್ರಾರ್ಥನೆಗೆ ಕಲಬುರಗಿ ಜಿಲ್ಲೆಯಿಂದ ಹೋಗಿ ಮರಳಿದರು ಅಥವಾ ಕುಟುಂಬಸ್ಥರು ಮಾಹಿತಿ ನೀಡಬೇಕು ಎಂದು ಕಲಬುರಗಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಯಡಾ ಮಾರ್ಟಿನ್ ಮಾರ್ಬ್‍ನ್ಯಾಂಗ್ ತಿಳಿಸಿದ್ದಾರೆ.
ಅದೇ ರೀತಿ ಕೊರೋನಾ ಸೋಂಕಿನ ಭೀತಿ ಹಿನ್ನೆಲೆಯಲ್ಲಿ ಇತ್ತೀಚೆಗೆ ಉದ್ಯೋಗ ಮತ್ತು ಪ್ರವಾಸಕ್ಕೆಂದು ವಿದೇಶಕ್ಕೆ ಹೋಗಿ ಕಲಬುರಗಿ ಜಿಲ್ಲೆಗೆ ಮರಳಿದವರು ಅಥವಾ ಕುಟುಂಬಸ್ಥರು ತಕ್ಷಣವೇ ಲಿಖಿತ ಅಥವಾ ಮೌಖಿಕವಾಗಿ ಕಂಟ್ರೋಲ್ ರೂಂ ಸಂಖ್ಯೆ 08472-263604, ಮೊಬೈಲ್ ಸಂಖ್ಯೆ 9480803500ಗೆ ತಪ್ಪದೆ ಮಾಹಿತಿ ನೀಡಬೇಕು ಎಂದು ಕಲಬುರಗಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಯಡಾ ಮಾರ್ಟಿನ್ ಮಾರ್ಬನ್ಯಾಂಗ್ ತಿಳಿಸಿದ್ದಾರೆ.
ಒಂದು ವೇಳೆ ಪ್ರವಾಸದ ಮಾಹಿತಿ ನೀಡದೆ ಮುಚ್ಚಿಟ್ಟು ಪೊಲೀಸ್ ಕಾರ್ಯಾಚರಣೆಯಲ್ಲಿ ಸಿಕ್ಕಿಬಿದ್ದಲ್ಲಿ ಅಂತವರ ವಿರುದ್ಧ ಪ್ರಕರಣ ದಾಖಲಿಸಿ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಎಸ್.ಪಿ. ಯಡಾ ಮಾರ್ಟಿನ್ ಮಾರ್ಬ್‍ನ್ಯಾಂಗ್ ಎಚ್ಚರಿಕೆ ನೀಡಿದ್ದಾರೆ.
ನಂತರ ಮಾತನಾಡಿದ ಅವರು ಕೊರೋನಾ ವೈರಸ್ ಕುರಿತಂತೆ ಜಿಲ್ಲೆಯಲ್ಲಿ ಕೆಲವು ಕಿಡಿಗೇಡಿಗಳು, ಸಮಾಜ ಘಾತುಕ ಶಕ್ತಿಗಳು ಸಾಮಾಜಿಕ ಜಾಲತಾಣದಲ್ಲಿ ಸುಳ್ಳು ಸುದ್ದಿ ಪೋಸ್ಟ್ ಮಾಡುತ್ತಿರುವುದು ಗಮನಕ್ಕೆ ಬಂದಿದ್ದು, ಇದನ್ನು ಗಂಭೀರವಾಗಿ ಪರಿಗಣಿಸಿದೆ. ಇಂತಹ ಕೃತ್ಯ ಎಸಗಿದವರ ಮೇಲೆ ಕಠಿಣ ಕಾನೂನು ಕ್ರಮ ಕೈಗೊಳ್ಳಬೇಕೆಂದು ಕಲಬುರಗಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಯಡಾ ಮಾರ್ಟಿನ್ ಮಾರ್ಬನ್ಯಾಂಗ್ ಅವರು ಎಚ್ಚರಿಕೆ ನೀಡಿದ್ದಾರೆ.