ಬಿಸಿ ಬಿಸಿ ಸುದ್ದಿ

ನವದಂಪತಿಗಳಿಂದ ಅಂಬೇಡ್ಕರ್ ಜಯಂತಿ ಭಿತ್ತಿ ಪತ್ರ ಬಿಡುಗಡೆ

ಸುರಪುರ: ಈ ತಿಂಗಳ 20ನೇ ತಾರೀಖಿನಂದು ಸುರಪುರದಲ್ಲಿ ಹಮ್ಮಿಕೊಳ್ಳಲಾದ ಬುದ್ಧ ಬಸವಣ್ಣನವರ ಸ್ಮರಣೆಯಲ್ಲಿ ಡಾ: ಬಾಬಾ ಸಾಹೇಬ್ ಅಂಬೇಡ್ಕರರ 128 ನೇಯ ಜಯಂತೋತ್ಸವ ಆಚರಣೆಯ ಕಾರ್ಯಕ್ರಮದ ಭಿತ್ತಿ ಪತ್ರಗಳನ್ನು ಹಸೆಮಣೆ ಏರಿದ ನವದಂಪತಿಗಳಿಂದ ವಿಶೇಷವಾಗಿ ಬಿಡುಗಡೆ ಗೊಳಿಸಿದರು.

ಇಂದು ಬೆಳಿಗ್ಗೆ ಕಾರ್ಯಕ್ರಮ ಪ್ರಚಾರ ಸಮಿತಿಯೂ ತಾಲೂಕಿನಲ್ಲಿ ಪ್ರತಿಯೊಂದು ಹಳ್ಳಿಗಳಲ್ಲಿ ಜಯಂತೋತ್ಸವಕ್ಕೆ ಜನತೆಯ ಆಹ್ವಾನಕ್ಕಾಗಿ ಜಯಂತ್ಯೊತ್ಸವ ಸಮಿತಿ ಅಧ್ಯಕ್ಷ ವೆಂಕಟೇಶ ಹೊಸ್ಮನಿ ನೇತೃತ್ವದಲ್ಲಿ ಅನೇಕ ಮುಖಂಡರು ವಿವಿಧ ಗ್ರಾಮಗಳಿಗೆ ತೆರಳಿದಾಗ ಕೊಡೇಕಲ್ ಸಮೀಪದ ಹುಲಕೇರಿ ಗ್ರಾಮದಲ್ಲಿ ನಡೆದ ಮದುವೆ ಸಮಾರಂಭದಲ್ಲಿ ಹಸೆಮಣೆ ಏರಿದ್ದ ನವಜೋಡಿಗಳು ವಿಶೇಷವಾಗಿ ಕಾರ್ಯಕ್ರಮದ ಭಿತ್ತಿಪತ್ರಗಳ ಬಿಡುಗಡೆ ಮಾಡಿ ಅಂಬೇಡ್ಕರರ ಕುರಿತ ಅಭಿಮಾನ ಮೆರೆದರು.

ಈ ಸಂದರ್ಭದಲ್ಲಿ  ಅಧ್ಯಕ್ಷ ವೆಂಕಟೇಶ ಹೊಸಮನಿ, ಪ್ರಚಾರ ಸಮಿತಿ ಅಧ್ಯಕ್ಷ ಭೀಮರಾಯ ಸಿಂಧಗೇರಿ, ಉಪಾಧ್ಯಕ್ಷ ನಾಗಣ್ಣ ಕಲ್ಲದೇವನಹಳ್ಳಿ,ನಿಂಗಣ್ಣ ದೇವರಗೋನಾಲ,ವೀರಭದ್ರಪ್ಪ ತಳವರಗೇರಾ,ಮಾನಪ್ಪ ಕಟ್ಟಿಮನಿ,ಅಂಬ್ರೇಶ ಶೆಳ್ಳಿಗಿ,ಶಿವುಕುಮಾರ ಬೊಮ್ಮನಹಳ್ಳಿ, ಗೌತಮ್ ಬಡಿಗೇರ,ಆಕಾಶ ಕಟ್ಟಮನಿ,ಶೇಖರ ಜೀವಣಗಿ,ಅಮ್ಮಪ್ಪ ಬಿಜಾಸ್ಪೂರ,ಆನಂದ ಅರಕೇರಿ, ಭೀಮಣ್ಣ ಪಾಳದಕೇರಾ,ರಮೇಶ ಬಡಿಗೇರ್ ಸೇರಿದಂತೆ ಅನೇಕರಿದ್ದರು.

emedialine

Recent Posts

ತೊಗರಿ ಬೆಳೆ‌ ಹಾನಿ ಪ್ರದೇಶ ವೀಕ್ಷಿಸಿದ ಶಾಸಕ ಅಲ್ಲಮಪ್ರಭು ಪಾಟೀಲ

ಕಲಬುರಗಿ: ಕಲಬುರಗಿ ದಕ್ಷಿಣ ಮತಕ್ಷೇತ್ರದ ಶಾಸಕ ಅಲ್ಲಮಪ್ರಭು ಪಾಟೀಲ ಅವರು ಶನಿವಾರ ಸಂಜೆ ಕ್ಷೇತ್ರದ ಭೀಮಳ್ಳಿ ಗ್ರಾಮದ ರೈತರ ಹೊಲಗಳಿಗೆ…

7 mins ago

ಕಷ್ಟಗಳಿಗೆ ಕುಗ್ಗದೇ ಸವಾಲಾಗಿ ಸ್ವಿಕರಿಸಿ

ಕಲಬುರಗಿ: ಕಷ್ಟಗಳು ಬಂದಾಗ ಕುಗ್ಗದೆ, ಆ ಕಷ್ಟಗಳನ್ನು ಸವಾಲಾಗಿ ಸ್ವೀಕರಿಸಿ ಮೇಲೇಳಬೇಕು ಎಂದು ತಾಜ್ ನಗರದ ಆರೋಗ್ಯ ಕೇಂದ್ರದ ಹಿರಿಯ…

9 mins ago

ಕಲಬುರಗಿ: ಹಾಸ್ಯ ಕಲಾವಿದ ರೇವಣಸಿದ್ಧ ಸ್ವಾಮಿ ದಂಪತಿಗೆ ಗೆಳೆಯರ ಬಳಗದಿಂದ ಸತ್ಕರಿಸಲಾಯಿತು.

ಪರೋಪಕಾರ ಸೇವೆಯಿಂದ ಆತ್ಮತೃಪ್ತಿ: ಹಿರೇಮಠ ಕಲಬುರಗಿ: ನಗರ ಹೊರವಲಯದ ಸೈಯದ್ ಚಿಂಚೋಳಿ ರಸ್ತೆಯ ಬಳಿ ಇರುವ ಕೆವಿಪಿ ದಣ್ಣೂರ ಪಿಯು…

11 mins ago

ಸಾವಿರ ಸೀರೆ ವಿತರಿಸಿ ಸಚಿವ ಪ್ರಿಯಾಂಕ್ ಜನ್ಮದಿನ ಆಚರಣೆ

  ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…

17 hours ago

ಮೂರೂ ಕ್ಷೇತ್ರದಲ್ಲಿ ಕಾಂಗ್ರೆಸ್ ಗೆಲುವು: ಕಾರ್ಯಕರ್ತರಿಂದ ವಿಜಯೋತ್ಸವ

ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…

19 hours ago

ಸಿದ್ದಸಿರಿ ಹೋರಾಟ ಪ್ರಾಯೋಜಿತ: ಶರಣು ಪಾಟೀಲ್

ಚಿಂಚೋಳಿ: ಕಾನೂನು ತೊಡಕಿನಿಂದ ಸ್ಥಗಿತಗೊಂಡ ಸಿದ್ದಸಿರಿ ಎಥೆನಾಲ್ ಕಾರ್ಖಾನೆ ಪ್ರಾರಂಭಕ್ಕೆ ಕರ್ನಾಟಕ ಮಾಲಿನ್ಯ ನಿಯಂತ್ರಣ ಮಂಡಳಿ ಅನುಮತಿ ನೀಡಬೇಕೆಂದು ಒತ್ತಾಯಿಸಿ…

1 day ago