ಕಲಬುರಗಿ: ಜಿಲ್ಲಾ ಪೊಲೀಸ್ ಅಧೀಕ್ಷಕ ಯಡಾ ಮಾರ್ಟಿನ್ ಮಾರ್ಬನ್ಯಾಂಗ್ ಅವರು ಶನಿವಾರ ಜಿಲ್ಲೆಯ ಶಹಾಬಾದ ಪಟ್ಟಣಕ್ಕೆ ಭೇಟಿ ನೀಡಿ ಲಾಕ್ ಡೌನ್ ಭದ್ರತೆ ಪರಿಶೀಲಿಸಿದರು.
ಪಟ್ಟಣದ ಅಪ್ಪರ್ ಮಡ್ಡಿ ಪ್ರದೇಶದ ಮಹಿಳೆಗೆ ಕೊರೋನಾ ಸೋಂಕು ಕಂಡುಬಂದಿರುವ ಹಿನ್ನೆಲೆಯಲ್ಲಿ ಸದರಿ ಪ್ರದೇಶವನ್ನು ಕಂಟೇನ್ ಮೆಂಟ್ ಝೋನ್ ಎಂದು ಘೋಷಣೆ ಮಾಡಿರುವುದರಿಂದ, ಕಂಟೇನ್ ಮೆಂಟ್ ಝೋನ್ಗೂ ಭೇಟಿ ನೀಡಿ ಅಲ್ಲಿ ಕೈಗೊಂಡಿರುವ ಮುಂಜಾಗ್ರತಾ ಕ್ರಮಗಳ ಬಗ್ಗೆ ಅಧಿಕಾರಿಗಳಿಂದ ಮಾಹಿತಿ ಪಡೆದುಕೊಂಡರು.
ಜಿಲ್ಲೆಯಾದ್ಯಂತ ಲಾಕ್ ಡೌನ್ ಇದ್ದು, ಸಿ.ಆರ್.ಪಿ.ಸಿ. ೧೪೪ ನಿಷೇಧಾಜ್ಞೆ ಜಾರಿಯಲ್ಲಿರುವುದರಿಂದ ಅನಗತ್ಯ ಸಂಚಾರಕ್ಕೆ ಕಡಿವಾಣ ಹಾಕಬೇಕು ಎಂದು ಪೊಲೀಸ್ ಅಧಿಕಾರಿಗಳಿಗೆ ಎಸ್.ಪಿ. ನಿರ್ದೇಶನ ನೀಡಿದರು.
ಕಂಟೇನ್ಮೆಂಟ್ ಝೋನ್ ಪ್ರದೇಶದಲ್ಲಿ ಸಾರ್ವಜನಿಕರಿಗೆ ಅಗತ್ಯ ವಸ್ತುಗಳಾದ ಕಿರಾಣಿ ದಿನಸಿಗಳು, ಹಾಲು, ಹಣ್ಣು, ತರಕಾರಿಗಳನ್ನು ಮನೆ ಬಳಿಯೆ ಸಿಗುವಂತೆ ಅಗತ್ಯ ವ್ಯವಸ್ಥೆ ಮಾಡುವಂತೆ ತಹಶೀಲ್ದಾರ ಸುರೇಶ ವರ್ಮಾ ಅವರಿಗೆ ತಿಳಿಸಿದರು.
ಕೊರೋನಾ ಸೋಂಕು ಪತ್ತೆಯಾಗಿರುವ ಹಿನ್ನೆಲೆಯಲ್ಲಿ ಸದರಿ ವ್ಯಕ್ತಿ ವಾಸದ ಮನೆ ಸೇರಿದಂತೆ ಸಂಪೂರ್ಣ ಕಂಟೇನ್ಮೆಂಟ್ ಝೋನ್ ಪ್ರದೇಶವನ್ನು ಸ್ಯಾನಿಟೈಜೇಷನ್, ಸಾಂಕ್ರಾಮಿಕ ಸೋಂಕು ಹರಡದಂತೆ ಫಾಗಿಂಗ್ ಸಿಂಪರಣೆ ಮಾಡುವಂತೆ ಹಾಗೂ ಇನ್ನೀತರ ಅಗತ್ಯ ಕ್ರಮ ಕೈಗೊಳ್ಳುವಂತೆ ತಾಲೂಕು ಅರೋಗ್ಯಾಧಿಕಾರಿ ಡಾ.ಸುರೇಶ ಮೇಕಿನ ಅವರಿಗೆ ಸೂಚಿಸಿದರು.
ಈ ಸಂದರ್ಭದಲ್ಲಿ ಶಹಾಬಾದ ಡಿವೈ.ಎಸ್.ಪಿ. ವೆಂಕಣಗೌಡ ಪಾಟೀಲ, ಜಿಲ್ಲಾ ಕುಷ್ಠರೋಗ ಅಧಿಕಾರಿ ಡಾ.ರಾಜಕುಮಾರ ಕುಲಕರ್ಣಿ ಇದ್ದರು.
ಚಿಂಚೋಳಿ : ಪ್ರವಾದಿ ಮಹ್ಮದ ಪೈಗಂಬರ್ ಅವರನ್ನು ಅವಮಾನಿಸಿದ ನರಸಿಂಹಾನಂದ ಸರಸ್ವತಿ ಸ್ವಾಮಿಗಳ ವಿರುದ್ಧ ಪ್ರಕರಣ ದಾಖಲಿಸಬೇಕು ಎಂದು ಆಗ್ರಹಿಸಿ…
ಕಲಬುರಗಿ: ಕಲ್ಯಾಣ ಕರ್ನಾಟಕದ ಶೈಕ್ಷಣಿಕ ಗುಣಮಟ್ಟ ಸುಧಾರಣೆಗಾಗಿ ಕೆ.ಕೆ.ಆರ್.ಡಿ.ಬಿ ಯು ಸಮಿತಿಯೊಂದನ್ನು ರಚಿಸಿ, ಗುರುರಾಜ ಕರ್ಜಗಿ ಅವರನ್ನು ಅಧ್ಯಕ್ಷರನ್ನಾಗಿ ಮಾಡಿರುವ…
ಕಲಬುರಗಿ; ಕನಾ೯ಟಕ ರಾಜ್ಯ ತಳವಾರ ಮಹಾಸಭಾ ಕಲಬುರಗಿ ಜಿಲ್ಲಾಧ್ಯಕ್ಷರಾದ ಚಂದ್ರಕಾಂತ ದಶರಥ ತಳವಾರ ಅವರ ಅಧ್ಯಕ್ಷತೆಯಲ್ಲಿ ಇಂದು ಆನಂದ ನಿಲಯ…
ಕಲಬುರಗಿ; ಜಿಲ್ಲಾಧಿಕಾರಿ ಬಿ. ಫೌಜಿಯಾ ತರನ್ನುಮ್ ಅವರು ಶನಿವಾರ ಶಹಾಬಾದ ರಸ್ತೆಯಲ್ಲಿರುವ ನಂದೂರ-ಕೆಸರಟಗಿ ಮತ್ತು ಹುಮನಾಬಾದ ರಸ್ತೆಯಲ್ಲಿರುವ ಕಪನೂರ ಕೈಗಾರಿಕಾ…
ಶಹಾಬಾದ: ಕರ್ನಾಟಕದ ಬಹುಮತ ಸರಕಾರವನ್ನು ಬೀಳಿಸಲು ಇಲ್ಲಸಲ್ಲದ ಆರೋಪ ಮಾಡುವ ಮೂಲಕ ಸಿಎಂ ರಾಜೀನಾಮೆಗೆ ಒತ್ತಾಯ ಮಡುತ್ತಿರುವ ಬಿಜೆಪಿ ಹಾಗೂ…
ಶಹಾಬಾದ:ಪ್ರತಿ ಮನೆಗೂ ನೀರು ದೊರಿಸಿಕೊಡುವ ಉದ್ದೇಶದಿಂದ ನಡೆಯುವ ಜೆಜೆಎಂ ಕಾಮಗಾರಿ ಗುಣಮಟ್ಟದಿಂದ ಕೂಡಿರಬೇಕೆಂದು ಕಾಂಗ್ರೆಸ್ ಮುಖಂಡ ಮೃತ್ಯುಂಜಯ್ ಹಿರೇಮಠ ಹೇಳಿದರು.…