ಕಲಬುರಗಿ: ಕೊರೋನಾ ಭೀತಿಯನ್ನು ಎದುರಿಸಲು ಪ್ರಧಾನಿ ನರೇಂದ್ರ ಮೋದಿ ಅವರ ನಿರ್ದೇಶನದಂತೆ ರಾಜ್ಯ ಸರ್ಕಾರವು ಜಿಲ್ಲಾಡಳಿತದ ಮೂಲಕ ೨೧ ದಿನಗಳ ಕಾಲ ಲಾಕ್‌ಡೌನ್‌ಗೆ ಕಟ್ಟುನಿಟ್ಟಿನ ಕ್ರಮಗಳನ್ನು ಕೈಗೊಂಡಿದ್ದು, ಜನರು ಮನೆ ಬಿಟ್ಟು ಹೊರಗಡೆ ಬರಲಾರದ್ದನ್ನೇ ಬಂಡವಾಳ ಮಾಡಿಕೊಂಡ ಕಳ್ಳರು ಕಿರಾಣಿ ಅಂಗಡಿಯೊಂದಕ್ಕೆ ಕನ್ನಾ ಹಾಕಿ ಅಗತ್ಯ ದಿನಸಿ ವಸ್ತುಗಳನ್ನು ದೋಚಿ ಪರಾರಿಯಾದ ಘಟನೆ ನಗರದ ಶಾಂತಿನಗರದಲ್ಲಿ ನಡೆದಿದೆ.
ಕಾಂತಿಲಾಲ್ ಮಾರ್ವಾಡಿ ಅವರ ಒಡೆತನದ ಶ್ರೀ ಕೃಷ್ಣ ಜನರಲ್ ಸ್ಟೋರ್ಸ್‌ನಲ್ಲಿಯೇ ಕಳ್ಳತನವಾಗಿದೆ. ಅಂಗಡಿಯ ಹಿಂದಿನ ಪತ್ರಾ ಎತ್ತಿ ಒಳಹೋಗಿರುವ ಕಳ್ಳರು ಸಾಬೂನು, ಬಿಸ್ಕಿಟ್, ಅಡಿಗೆ ಎಣ್ಣೆ ಸೇರಿದಂತೆ ಸುಮಾರು ೨೫೦೦೦ರೂ.ಗಳ ಮೌಲ್ಯದ ದಿನಸಿ ವಸ್ತುಗಳನ್ನು ದೋಚಿಕೊಂಡು ಹೋಗಿದ್ದಾರೆ.
ಸುದ್ದಿ ತಿಳಿದು ಅಶೋಕ್ ನಗರ ಠಾಣೆಯ ಪೋಲಿಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿದರು. ಈ ಸಂದರ್ಭದಲ್ಲಿ ರಾಜ್ಯ ವಿಧಾನ ಪರಿಷತ್ ಮಾಜಿ ಸದಸ್ಯ ಅಲ್ಲಮಪ್ರಭು ಪಾಟೀಲ್ ಅವರೂ ಸಹ ಸ್ಥಳಕ್ಕೆ ಭೇಟಿ ನೀಡಿದರು. ಈ ಕುರಿತು ಪೋಲಿಸರು ಪ್ರಕರಣ ದಾಖಲಿಸಿಕೊಂಡು ತನಿಖೆ ಮುಂದುವರೆಸಿದ್ದಾರೆ.
ಕಲಬುರಗಿ: ಮಹಿಳೆಯರ ಸಹಭಾಗಿತ್ವ ಮತ್ತು ಕೊಡುಗೆಯಿಲ್ಲದೆ ದೇಶದ ಸರ್ವಾಂಗೀಣ ಅಭಿವೃದ್ಧಿ ಅಸಾಧ್ಯ ಎಂದು ಶರಣಬಸವೇಶ್ವರ ವಿದ್ಯಾವರ್ಧಕ ಸಂಘದ ಅಧ್ಯಕ್ಷೆ ಮಾತೋಶ್ರೀ…
ಕಲಬುರಗಿ: ಕಲಬುರಗಿ ದಕ್ಷಿಣ ಮತಕ್ಷೇತ್ರದ ಶಾಸಕ ಅಲ್ಲಮಪ್ರಭು ಪಾಟೀಲ ಅವರು ಶನಿವಾರ ಸಂಜೆ ಕ್ಷೇತ್ರದ ಭೀಮಳ್ಳಿ ಗ್ರಾಮದ ರೈತರ ಹೊಲಗಳಿಗೆ…
ಕಲಬುರಗಿ: ಕಷ್ಟಗಳು ಬಂದಾಗ ಕುಗ್ಗದೆ, ಆ ಕಷ್ಟಗಳನ್ನು ಸವಾಲಾಗಿ ಸ್ವೀಕರಿಸಿ ಮೇಲೇಳಬೇಕು ಎಂದು ತಾಜ್ ನಗರದ ಆರೋಗ್ಯ ಕೇಂದ್ರದ ಹಿರಿಯ…
ಪರೋಪಕಾರ ಸೇವೆಯಿಂದ ಆತ್ಮತೃಪ್ತಿ: ಹಿರೇಮಠ ಕಲಬುರಗಿ: ನಗರ ಹೊರವಲಯದ ಸೈಯದ್ ಚಿಂಚೋಳಿ ರಸ್ತೆಯ ಬಳಿ ಇರುವ ಕೆವಿಪಿ ದಣ್ಣೂರ ಪಿಯು…
ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…
ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…