ಬಿಸಿ ಬಿಸಿ ಸುದ್ದಿ

ಕೊರೋನಾ ಭೀತಿ: ಕೋಮುಗ್ರಸ್ಥಗೊಳಿಸುವುದಕ್ಕೆ ಕಮ್ಯುನಿಸ್ಟ್ರ ವಿರೋಧ

ಕಲಬುರಗಿ: ಕೋವಿಡ್-೧೯ರ ವಿರುದ್ಧ ಭಾರತದ ಸಮರವನ್ನು ಕೋಮುಗ್ರಸ್ತಗೊಳಿಸುವುದನ್ನು ನಿಲ್ಲಿಸಬೇಕು ಎಂದು ಭಾರತ್ ಕಮ್ಯುನಿಸ್ಟ್ (ಮಾರ್ಕ್‌ಸಿಸ್ಟ್) ಪಕ್ಷದ ಪಾಲಿಟ್‌ಬ್ಯುರೋ ಒತ್ತಾಯಿಸಿದೆ ಎಂದು ಪಕ್ಷದ ಜಿಲ್ಲಾ ಕಾರ್ಯದರ್ಶಿ ಶರಣಬಸಪ್ಪ ಮಮಶೆಟ್ಟಿ ಅವರು ತಿಳಿಸಿದ್ದಾರೆ.

ದೆಹಲಿಯಲ್ಲಿ ತಬ್ಲೀಘಿ ಜಮಾತ್‌ನ ಒಂದು ಸಭೆಯಲ್ಲಿ ಹಾಜರಿದ್ದ ಬಹಳಷ್ಟು ಜನಗಳು ದೇಶದ ವಿವಿಧ ಭಾಗಗಳಿಗೆ ಹೋಗಿದ್ದು, ಅವರಲ್ಲಿ ಹಲವರಿಗೆ ಕೊರೋನಾ ಸೋಂಕು ತಗುಲಿದೆ ಎಂದು ಪತ್ತೆಯಾಗಿರುವುದು ಒಂದು ಗಂಭೀರ ಆತಂಕದ ಸಂಗತಿ ಎಂದು ಅವರು ಹೇಳಿಕೆಯಲ್ಲಿ ಕಳವಳ ವ್ಯಕ್ತಪಡಿಸಿದ್ದಾರೆ.

ಮಾರ್ಚ್ ಮಧ್ಯಭಾಗದಲ್ಲಿ ಸಭೆ, ಸಮಾರಂಭಗಳ ಸಂಖ್ಯೆಯ ಮೇಲೆ ನಿರ್ಬಂಧಗಳಿದ್ದಾಗ ಇಂತಹ ಒಂದು ಸಭೆಯನ್ನು ನಡೆಸುವುದು ಜಮಾತ್ ಮುಖಂಡತ್ವದ ಬೇಜವಾಬ್ದಾರಿತನ. ಆದಾಗ್ಯೂ, ಮಾರ್ಚ್ ೨೦,೨೧ರಂದು ಮತ್ತೊಂದು ಸಮಾರಂಭಕ್ಕೆ ಅಧಿಕಾರಿಗಳು ಹೇಗೆ ಅವಕಾಶ ನೀಡಿದರು ಎಂಬುದು ಅರ್ಥವಾಗದ ಸಂಗತಿ ಎಂದು ಅವರು ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಇದಕ್ಕೆ ಒಂದು ಕೋಮುವಾದಿ ಬಣ್ಣ ಕೊಡಲು ಮತ್ತು ಒಂದು ನಿರ್ದಿಷ್ಟ ಸಮುದಾಯವನ್ನು ಗುರಿ ಮಾಡುವ ಪ್ರಯತ್ನಗಳನ್ನು, ಸಾಮಾಜಿಕ ಮಾಧ್ಯಮಗಳಲ್ಲಿ ಇಂತಹ ಪ್ರಚಾರವನ್ನು ಮಾಡಲಾಗುತ್ತಿದೆ ಎಂದು ಅವರು ಆರೋಪಿಸಿದ್ದಾರೆ.

ಕೊರೋನಾ ಸೋಂಕು ಧರ್ಮದ ಆಧಾರದಲ್ಲಿ ಬೇಧ ಮಾಡುವುದಿಲ್ಲ. ಈ ಪ್ರಶ್ನೆಯನ್ನು ಕೋಮುಗ್ರಸ್ತಗೊಳಿಸುವ ಎಲ್ಲ ಪ್ರಯತ್ನಗಳಿಗೆ ತಕ್ಕ ಪ್ರತ್ಯುತ್ತರ ನೀಡಬೇಕು. ಮಾರ್ಚ್ ೧೩ರಂದು ೨೦೦ಕ್ಕಿಂತ ಹೆಚ್ಚು ಜನಗಳಿರುವ ಸಾಮಾಜಿಕ, ಧಾರ್ಮಿಕ, ರಾಜಕೀಯ ಸಭೆ, ಸಮಾರಂಭಗಳನ್ನು ನಿಷೇಧಿಸಿದ ನಂತರ ದೇಶದ ಹಲವು ಭಾಗಗಳಲ್ಲಿ ನಡೆದಿರುವ ಎಲ್ಲ ದೊಡ್ಡ ಸಮಾರಂಭಗಳ ಆಮೂಲಾಗ್ರ ತನಿಖೆ ಕೈಗೊಳ್ಳಬೇಕು ಹಾಗೂ ಅವುಗಳಲ್ಲಿ ಪಾಲ್ಗೊಂಡವರಿಗೆ ಪತ್ತೆ ಹಚ್ಚಿ ತಪಾಸಣೆಗೆ ಒಳಪಡಿಸಬೇಕು ಎಂದು ಅವರು ಒತ್ತಾಯಿಸಿದ್ದಾರೆ.

ದಕ್ಷಿಣ ಕೋರಿಯಾ ಮತ್ತು ಸಿಂಗಾಪೂರದಲ್ಲಿ ದೊಡ್ಡ ಗೋಷ್ಠಿಗಳಲ್ಲಿ ಭಾಗವಹಿಸಿದ ಎಲ್ಲರನ್ನೂ ಅತ್ಯಂತ ಜಾಗರೂಕತೆಯಿಂದ ಪತ್ತೆ ಹಚ್ಚಿ, ತೀವ್ರ ತಪಾಸಣೆಯ ನಂತರ ಅವರನ್ನು ಪ್ರತ್ಯೇಕಗೊಳಿಸಿ ಕೋವಿಡ್-೧೯ರ ಸಾಮುದಾಯಿಕ ಪ್ರಸರಣ ನಡೆಯದಂತೆ ತಡೆದಿವೆ. ಆದರಿಂದ ಎಲ್ಲರೂ ಪಾಠ ಕಲಿಯಬೇಕು. ಭಾರತದ ತಪಾಸಣಾ ದರ ತುಂಬಾ ಕೆಳಗಿದೆ. ದಕ್ಷಿಣ ಕೋರಿಯಾದ್ದು ನಮ್ಮ ದರದ ೨೪೧ ಪಟ್ಟು. ಅದನ್ನು ತುರ್ತಾಗಿ ಸರಿಪಡಿಸಬೇಕು ಎಂದು ಅವರು ಆಗ್ರಹಿಸಿದ್ದಾರೆ.

ಇದು ಕೋವಿಡ್-೧೯ರ ವಿರುದ್ಧ ಭಾರತದ ಸಮರ. ಅದನ್ನು ಕೋಮುಗ್ರಸ್ತಗೊಳಿಸುವ ಎಲ್ಲ ಪ್ರಯತ್ನಗಳೂ ಈ ಸೋಂಕನ್ನು ತಡೆಯುವಲ್ಲಿ ನಮ್ಮ ವಿಜಯವನ್ನು ಶಿಥಿಲಗೊಳಿಸುತ್ತವೆ. ಇದು ನಮ್ಮನ್ನು ನಾವೇ ಸೋಲಿಸುವ ಒಂದು ಕೆಲಸವಾಗುತ್ತದೆ. ಸರ್ಕಾರ ಇಂತಹ ಅಪಾಯಕಾರೀ ಕೋಮುವಾದಿ ದ್ರುವೀಕರಣ ಹರಡುವುದನ್ನು ನಿಲ್ಲಿಸಲು ಸರ್ವ ಪ್ರಯತ್ನಗಳನ್ನು ಕೈಗೊಳ್ಳಬೇಕು ಎಂದು ಅವರು ಒತ್ತಾಯಿಸಿದ್ದಾರೆ.

ಪ್ರಚೋದನೆಗಳಿಗೆ ಬಲಿ ಬೀಳಬಾರದು. ಈ ಮಹಾಮಾರಿಯ ವಿರುದ್ಧ ನಮ್ಮ ಐಕ್ಯ ಪ್ರಯತ್ನಗಳನ್ನು ಬಲಪಡಿಸಬೇಕು ಎಂದು ಅವರು ಎಲ್ಲರಲ್ಲಿಯೂ ಮನವಿ ಮಾಡಿದ್ದಾರೆ.

emedialine

Recent Posts

ಮಹಿಳಾ ಸಹಭಾಗಿತ್ವ ಇಲ್ಲದೆ ದೇಶದ ಅಭಿವೃದ್ಧಿ ಅಸಾಧ್ಯ: ಮಾತೋಶ್ರೀ ಡಾ. ಅವ್ವಾಜಿ

ಕಲಬುರಗಿ: ಮಹಿಳೆಯರ ಸಹಭಾಗಿತ್ವ ಮತ್ತು ಕೊಡುಗೆಯಿಲ್ಲದೆ ದೇಶದ ಸರ್ವಾಂಗೀಣ ಅಭಿವೃದ್ಧಿ ಅಸಾಧ್ಯ ಎಂದು ಶರಣಬಸವೇಶ್ವರ ವಿದ್ಯಾವರ್ಧಕ ಸಂಘದ ಅಧ್ಯಕ್ಷೆ ಮಾತೋಶ್ರೀ…

3 hours ago

ತೊಗರಿ ಬೆಳೆ‌ ಹಾನಿ ಪ್ರದೇಶ ವೀಕ್ಷಿಸಿದ ಶಾಸಕ ಅಲ್ಲಮಪ್ರಭು ಪಾಟೀಲ

ಕಲಬುರಗಿ: ಕಲಬುರಗಿ ದಕ್ಷಿಣ ಮತಕ್ಷೇತ್ರದ ಶಾಸಕ ಅಲ್ಲಮಪ್ರಭು ಪಾಟೀಲ ಅವರು ಶನಿವಾರ ಸಂಜೆ ಕ್ಷೇತ್ರದ ಭೀಮಳ್ಳಿ ಗ್ರಾಮದ ರೈತರ ಹೊಲಗಳಿಗೆ…

13 hours ago

ಕಷ್ಟಗಳಿಗೆ ಕುಗ್ಗದೇ ಸವಾಲಾಗಿ ಸ್ವಿಕರಿಸಿ

ಕಲಬುರಗಿ: ಕಷ್ಟಗಳು ಬಂದಾಗ ಕುಗ್ಗದೆ, ಆ ಕಷ್ಟಗಳನ್ನು ಸವಾಲಾಗಿ ಸ್ವೀಕರಿಸಿ ಮೇಲೇಳಬೇಕು ಎಂದು ತಾಜ್ ನಗರದ ಆರೋಗ್ಯ ಕೇಂದ್ರದ ಹಿರಿಯ…

13 hours ago

ಕಲಬುರಗಿ: ಹಾಸ್ಯ ಕಲಾವಿದ ರೇವಣಸಿದ್ಧ ಸ್ವಾಮಿ ದಂಪತಿಗೆ ಗೆಳೆಯರ ಬಳಗದಿಂದ ಸತ್ಕರಿಸಲಾಯಿತು.

ಪರೋಪಕಾರ ಸೇವೆಯಿಂದ ಆತ್ಮತೃಪ್ತಿ: ಹಿರೇಮಠ ಕಲಬುರಗಿ: ನಗರ ಹೊರವಲಯದ ಸೈಯದ್ ಚಿಂಚೋಳಿ ರಸ್ತೆಯ ಬಳಿ ಇರುವ ಕೆವಿಪಿ ದಣ್ಣೂರ ಪಿಯು…

13 hours ago

ಸಾವಿರ ಸೀರೆ ವಿತರಿಸಿ ಸಚಿವ ಪ್ರಿಯಾಂಕ್ ಜನ್ಮದಿನ ಆಚರಣೆ

  ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…

1 day ago

ಮೂರೂ ಕ್ಷೇತ್ರದಲ್ಲಿ ಕಾಂಗ್ರೆಸ್ ಗೆಲುವು: ಕಾರ್ಯಕರ್ತರಿಂದ ವಿಜಯೋತ್ಸವ

ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…

1 day ago