ಯಾದಗಿರಿ: ಕರ್ನಾಟಕ ರಾಜ್ಯ ರೈತ ಸಂಘ ಹಸಿರು ಸೇನೆ ಜಿಲ್ಲಾ ಘಟಕ ಹಾಗೂ ಬಣಜಿಗರ ಕ್ಷೇಮಾಭಿವೃದ್ಧಿ ಸುರಪೂರ ತಾಲ್ಲೂಕು ಸಮಿತಿ ಸಂಘದ ಸಂಯುಕ್ತಾಶ್ರಯದಲ್ಲಿ ಜಿಲ್ಲೆಯಲ್ಲಿ ಸತತ ಮೂರನೇ ದಿನವಾದ ಶನಿವಾರ ನಿರಾಶ್ರಿತರಿಗೆ ಆಹಾರ ವಿತರಣೆ ಮಾಡಲಾಯಿತು.
ರೈತ ಸಂಘದ ಜಿಲ್ಲಾ ಕಾರ್ಯಾಧ್ಯಕ್ಷ ದೇವಿಂದ್ರಪ್ಪಗೌಡ ಪೊಲೀಸ್ ಪಾಟೀಲ್ ನೇತೃತ್ವದಲ್ಲಿ ಗುರುವಾರ ಶುಕ್ರವಾರ ಹಾಗೂ ಶನಿವಾರ ಅನುಕ್ರಮವಾಗಿ ಸುರಪೂರ, ಶಹಾಪೂರ ಹಾಗೂ ಇಂದು ಯಾದಗಿರಿ ತಾಲ್ಲೂಕುಗಳಲ್ಲಿ ಆಹಾರ ವಿತರಿಸಲಾಯಿತು.
ನಗರದ ಹೊಸಳ್ಳಿ ಕ್ರಾಸ್ ಬಳಿಯ ಅಲೆಮಾರಿ ಶಿಳ್ಳೆಕ್ಯಾತರ ಜನಾಂಗದ ಪ್ರದೇಶದಲ್ಲಿನ ಜನತೆಗೆ ಆಹಾರದ ಪೊಟ್ಟಣಗಳನ್ನು ವಿತರಿಸಿದರು.
ಅಂತಾರಾಷ್ಟ್ರೀಯ ಹಾಸ್ಯ ಕಲಾವಿದ ಬಸವರಾಜ ಮಹಾಮನಿ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು. ಈ ಸಂದರ್ಭದಲ್ಲಿ ಬಣಜಿಗ ಕ್ಷೇಮಾಭಿವೃದ್ದಿ ಸಂಘದ ಜಿಲ್ಲಾ ಉಪಾದ್ಯಕ್ಷ ಇಂದುಧರ ಸಿನ್ನೂರ, ಸುರಪೂರ ತಾಲ್ಲೂಕು ಅಧ್ಯಕ್ಷ ಅಂಬರಿಷ ದೇಸಾಯಿ, ಮುಖಂಡರಾದ ಸುಗೂರೇಶ ವಾರದ, ಶಿವುಗೌಡ ಸುಗೂರ, ನಾಗಭೂಷಣ ಯಾಳಗಿ, ಶರಣಬಸವ ಅರಕೇರಿ, ರವಿ ದೇವಾಪೂರ, ರೈತ ಸಂಘದ ಜಿಲ್ಲಾಧ್ಯಕ್ಷ ಶರಣು ಮಂದರವಾಡ, ಮುಖಂಡ ಮಲ್ಕಣ್ಣ ಚಿಂತಿ ಇನ್ನಿತರರು ಇದ್ದರು.
ಕಲಬುರಗಿ: ಮಹಿಳೆಯರ ಸಹಭಾಗಿತ್ವ ಮತ್ತು ಕೊಡುಗೆಯಿಲ್ಲದೆ ದೇಶದ ಸರ್ವಾಂಗೀಣ ಅಭಿವೃದ್ಧಿ ಅಸಾಧ್ಯ ಎಂದು ಶರಣಬಸವೇಶ್ವರ ವಿದ್ಯಾವರ್ಧಕ ಸಂಘದ ಅಧ್ಯಕ್ಷೆ ಮಾತೋಶ್ರೀ…
ಕಲಬುರಗಿ: ಕಲಬುರಗಿ ದಕ್ಷಿಣ ಮತಕ್ಷೇತ್ರದ ಶಾಸಕ ಅಲ್ಲಮಪ್ರಭು ಪಾಟೀಲ ಅವರು ಶನಿವಾರ ಸಂಜೆ ಕ್ಷೇತ್ರದ ಭೀಮಳ್ಳಿ ಗ್ರಾಮದ ರೈತರ ಹೊಲಗಳಿಗೆ…
ಕಲಬುರಗಿ: ಕಷ್ಟಗಳು ಬಂದಾಗ ಕುಗ್ಗದೆ, ಆ ಕಷ್ಟಗಳನ್ನು ಸವಾಲಾಗಿ ಸ್ವೀಕರಿಸಿ ಮೇಲೇಳಬೇಕು ಎಂದು ತಾಜ್ ನಗರದ ಆರೋಗ್ಯ ಕೇಂದ್ರದ ಹಿರಿಯ…
ಪರೋಪಕಾರ ಸೇವೆಯಿಂದ ಆತ್ಮತೃಪ್ತಿ: ಹಿರೇಮಠ ಕಲಬುರಗಿ: ನಗರ ಹೊರವಲಯದ ಸೈಯದ್ ಚಿಂಚೋಳಿ ರಸ್ತೆಯ ಬಳಿ ಇರುವ ಕೆವಿಪಿ ದಣ್ಣೂರ ಪಿಯು…
ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…
ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…