ಕಲಬುರಗಿ: ಲಾಕ್ ಡೌನ್ ಪರಿಣಾಮ ಬೆಳೆದ ಕಲ್ಲಂಗಡಿಯನ್ನು ಮಾರಾಟವಾಗದ ಹಿನ್ನೆಲೆಯಲ್ಲಿ ಕಳೆದ ಮಾರ್ಚ್ ೩೧ ರಂದು ಆತ್ಮಹತ್ಯೆಗೆ ಶರಣಾದ ಜಿಲ್ಲೆಯ ಆಳಂದ ತಾಲೂಕಿನ ಲಾಡ್ ಚಿಂಚೋಳಿ ಗ್ರಾಮದ ರೈತ ಚಂದ್ರಕಾಂತ ನಾಗೀಂದ್ರಪ್ಪ ಬಿರಾದರ ಅವರ ಮನೆಗೆ ಮಂಗಳವಾರ ಭೇಟಿ ನೀಡಿದ ಕೃಷಿ ಸಚಿವ ಬಿ.ಸಿ.ಪಾಟೀಲ ಅವರು ಸರ್ಕಾರದಿಂದ ೫ ಲಕ್ಷ ರೂ.ಗಳ ಪರಿಹಾರ ಧನದ ಆದೇಶವನ್ನು ಮೃತ ರೈತನ ಪತ್ನಿಗೆ ನೀಡಿದರು.
ಸಚಿವರು ಮೃತ ರೈತನ ಕುಟುಂಬಸ್ಥರಿಗೆ ಸಾಂತ್ವನ ಹೇಳಿದಲ್ಲದೆ ರೈತ ಸಮುದಾಯಕ್ಕೆ ಆತ್ಮಹತ್ಯೆ ಪರಿಹಾರವಲ್ಲ, ಇದ್ದು ಜಯಿಸಬೇಕು ಕರೆ ನೀಡಿದರು. ರೈತನ ಕುಟಂಬಕ್ಕೆ ಸರ್ಕಾರದಿಂದ ಸಿಗಬೇಕಾದ ಎಲ್ಲಾ ರೀತಿಯ ನೆರವನ್ನು ಸ್ಥಳೀಯ ಶಾಸಕರು, ಜನಪ್ರತಿನಿಧಿಗಳು ನೀಡಲಿದ್ದಾರೆ ಧೈರ್ಯದಿಂದಿರಿ ಎಂದು ಕುಟುಂಬಸ್ಥರಿಗೆ ಸಚಿವ ಬಿ.ಸಿ. ಪಾಟೀಲ ಅಭಯ ನೀಡಿದರು.
ಶಾಸಕ ಸುಭಾಷ ಗುತ್ತೇದಾರ ಮಾತನಾಡಿ ಮೃತ ರೈತನಿಗೆ ಪತ್ನಿ ಸೇರಿದಂತೆ ಇಬ್ಬರು ಗಂಡು ಮಕ್ಕಳು ಇದ್ದಾರೆ ಎಂದು ಸಚಿವರಿಗೆ ಮಾಹಿತಿ ನೀಡಿದರು. ಇದಲ್ಲದೆ ರಾಷ್ಟ್ರೀಯ ಕೌಟುಂಬಿಕ ನೆರವು ಯೋಜನೆಯಡಿ ೨೦ ಸಾವಿರ ರೂ. ಮತ್ತು ಅಂತ್ಯಸಂಸ್ಕಾರದ ವೆಚ್ಚ ೫ ಸಾವಿರ ರೂ. ಸಹ ಕುಟುಂಬಕ್ಕೆ ನೀಡಲಾಯಿತು. ಪಿಂಚಣಿ ಆದೇಶ: ಮೃತ ರೈತನ ಪತ್ನಿ ಜಗದೇವಿ ಚಂದ್ರಕಾಂತ ಅವರಿಗೆ ಮಾಹೆಯಾನ ೨೦೦೦ ರೂ. ಒದಗಿಸುವ ವಿಧವಾ ಪಿಂಚಣಿ ಆದೇಶದ ಪ್ರತಿಯನ್ನು ಸಹ ಸಚಿವ ಬಿ.ಸಿ.ಪಾಟೀಲ ಇದೇ ಸಂದರ್ಭದಲ್ಲಿ ವಿತರಣೆ ಮಾಡಿದರು. ವೈಯಕ್ತಿಕ ಒಂದು ಲಕ್ಷ ರೂ. ನೀಡಿದ ಸಚಿವರು: ಕೃಷಿ ಸಚಿವ ಬಿ.ಸಿ.ಪಾಟೀಲ ಅವರು ವೈಯಕ್ತಿಕವಾಗಿ ರೈತನ ಕುಟುಂಬಕ್ಕೆ ಒಂದು ಲಕ್ಷ ರೂ. ಮೊತ್ತ ನಗದನ್ನು ಇದೇ ಸಂದರ್ಭದಲ್ಲಿ ನೀಡಿ ರೈತನ ಕುಟಂಬಕ್ಕೆ ನೆರವಾದರು.
ಈ ಸಂದರ್ಭದಲ್ಲಿ ಜಿಲ್ಲಾ ಪಂಚಾಯತ್ ಅಧ್ಯಕ್ಷೆ ಸುವರ್ಣಾ ಹಣಮಂತರಾಯ ಮಾಲಾಜಿ, ಲೋಕಸಭಾ ಸದಸ್ಯ ಡಾ. ಉಮೇಶ ಜಾಧವ, ಶಾಸಕ ಬಸವರಾಜ ಮತ್ತಿಮೂಡ, ಮಾಜಿ ಶಾಸಕ ದೊಡ್ಡಪ್ಪಗೌಡ ಪಾಟೀಲ ನರಿಬೋಳ, ಜಿಲ್ಲಾ ಪಂಚಾಯತ್ ಕೃಷಿ ಮತ್ತು ಕೈಗಾರಿಕೆ ಸ್ಥಾಯಿ ಸಮಿತಿ ಅಧ್ಯಕ್ಷ ಶಿವರಾಜ ಪಾಟೀಲ ರದ್ದೆವಾಡಗಿ, ಜಿಲ್ಲಾಧಿಕಾರಿ ಶರತ್ ಬಿ., ಜಂಟಿ ಕೃಷಿ ನಿರ್ದೇಶಕ ರತೇಂದ್ರನಾಥ ಸುಗೂರು, ತೋಟಗಾರಿಕೆ ಉಪನಿರ್ದೇಶಕ ಸಂತೋ? ಸಪ್ಪಂಡಿ, ಆಳಂದ ತಹಶೀಲ್ದಾರ ದಯಾನಂದ ಪಾಟೀಲ, ತಾಲೂಕು ಪಂಚಾಯತ್ ಕಾರ್ಯನಿರ್ವಾಹಕ ಅಧಿಕಾರಿ ಸಂಜೀವ ರೆಡ್ಡಿ, ಸಹಾಯಕ ಕೃಷಿ ನಿರ್ದೇಶಕ ಶರಣಗೌಡ ಪಾಟೀಲ, ಸಹಾಯಕ ತೋಟಗಾರಿಕೆ ನಿರ್ದೇಶಕ ಸುರೇಂದ್ರನಾಥ, ನಿಂಬರ್ಗಾ ರೈತ ಸಂಪರ್ಕ ಕೇಂದ್ರದ ಕೃಷಿ ಅಧಿಕಾರಿ ಅಪ್ಪಾಸಾಹೇಬ್ ಜಗಶೆಟ್ಟಿ ಸೇರಿದಂತೆ ಇನ್ನಿತರರು ಇದ್ದರು.
ಕಲಬುರಗಿ ಕೇಂದ್ರ ಕಾರಾಗೃಹದಲ್ಲಿರುವ ಸಂವಿಧಾನ ದಿನವನ್ನು ಸರ್ಕಾರದ ಸುತ್ತೋಲೆ ಆದೇಶದಂತೆ ಕಾರಾಗೃಹದ ಲಿಪಿಕ/ ಕಾನಿನಿರ್ವಹಕ ಅಧಿಕಾರಿ/ಸಿಬ್ಬಂದಿಯವರೊಂದಿಗೆ ಡಾ|| ಬಾಬಾ ಸಾಹೇಬ್…
ಕಲಬುರಗಿ; ಸಂವಿಧಾನವನ್ನು ರಕ್ಷಿಸಲು ಮತ್ತು ಜನರಲ್ಲಿ ಸಂವಿಧಾನದ ಮೇಲಿನ ನಂಬಿಕೆಯನ್ನು ಬಲಪಡಿಸಲು ಜಾಗೃತ ಶಕ್ತಿಯಾಗಿ ಕಾರ್ಯನಿರ್ವಹಿಸುವ ಗುರುತರವಾದ ಜವಾಬ್ದಾರಿಯನ್ನು ದೇಶದ…
ಕಲಬುರಗಿ: ನಗರದ ಪ್ರತಿಷ್ಠಿತ ಹೈದ್ರಾಬಾದ ಕರ್ನಾಟಕ ಶಿಕ್ಷಣ ಸಂಸ್ಥೆಯ, ಶ್ರೀಮತಿ ವೀರಮ್ಮ ಗಂಗಸಿರಿ ಮಹಿಳಾ ಪದವಿ-ಪೂರ್ವ ಕಾಲೇಜಿನಲ್ಲಿ ಸಂವಿಧಾನ ದಿನ…
ಶಹಾಬಾದ: ಮಾನವೀಯ ಮೌಲ್ಯಗಳು ವಿದ್ಯಾರ್ಥಿ ಯುವಜನರ ಬೆಳೆಸಿಕೊಂಡು ಉತ್ತಮ ನಾಗರಿಕರಾಗಬೇಕೆಂದು ಎಸ್ಎಸ್ ಮರುಗೋಳ ಕಾಲೇಜಿನ ಪ್ರಾಚಾರ್ಯರಾದ ಪ್ರೊ. ಕೆ.ಬಿ. ಬಿಲ್ಲವ…
ಶಹಾಪುರ : 26 : ಚಿಕ್ಕ ವಯಸ್ಸಿನಲ್ಲಿಯೆ ಹಿರಿದಾದ ಜ್ಞಾನವನ್ನು ಹೊಂದಿದ್ದ ಚೆನ್ನಬಸವಣ್ಣ ಷಟಸ್ಥಲ ಜ್ಞಾನಿ ಎಂದು ಕರೆಯಿಸಿಕೊಂಡರು. ಬಸವಣ್ಣನವರ…
ಶಹಾಬಾದ: ನಗರಸಭೆಯ ವಾರ್ಡ ನಂ.3 ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ವಾಜೀದ್ ಖಾನ್ ಜಮಾದಾರ ಅವರು ಗೆಲುವು ಸಾಧಿಸಿದ್ದಾರೆ. ನಗರದ…