ಸುರಪುರ: ಕೊರೊನಾ ಎಂಬುದು ಇಡೀ ಜನಗತ್ತನ್ನೆ ನಡುಗಿಸುತ್ತಿರುವ ವೈರಸ್ ಆಗಿದ್ದು,ಇದರ ಬಗ್ಗೆ ಮುಂಜಾಗ್ರತೆ ವಹಿಸಿದರೆ ಯಾವ ಸೊಂಕು ತಗಲುವುದಿಲ್ಲ.ಆದ್ದರಿಂದ ಬಡ ಜನತೆ ಯಾರೂ ಮನೆಯಿಂದ ಹೊರ ಬರಬೇಡಿ,ನಿಮಗೆ ಬೇಕಾದ ಅಗತ್ಯ ನೆರವು ನಿಮ್ಮ ಮನೆ ಬಾಗಿಲಿಗೆ ತಲುಪಿಸುತ್ತೇವೆ ಎಂದು ಜಿಲ್ಲಾ ಪಂಚಾಯತಿ ಮಾಜಿ ಅಧ್ಯಕ್ಷ ರಾಜಾ ಹನಮಪ್ಪ ನಾಯಕ (ತಾತಾ) ತಿಳಿಸಿದರು.
ತಾಲೂಕಿನ ಹೊಸ ಸಿದ್ದಾಪುರ,ಕವಡಿಮಟ್ಟಿ ಮತ್ತಿತರೆ ಗ್ರಾಮಗಳಲ್ಲಿನ ಬಡ ಕುಟುಂಬಗಳಿಗೆ ಅಗತ್ಯ ವಸ್ತುಗಳ ವಿತರಿಸಿ ಮಾತನಾಡಿ,ಕೊರೊನಾ ಸಂಪೂರ್ಣ ತೊಲಗುವವರೆಗೆ ಮನೆಯಲ್ಲಿಯೆ ಇದ್ದುಬಿಡಿ,ಆಗಾಗ ಕೈಗಳನ್ನು ತೊಳೆದುಕೊಳ್ಳಿ ಚಿಕ್ಕ ಮಕ್ಕಳನ್ನು ಹೊರಗಡೆ ಬಿಡಬೇಡಿ,ಯಾರಿಗಾದರೂ ಕೆಮ್ಮು ನೆಗಡಿ ಜ್ವರ ಕಾಣಿಸಿದರೆ ತಕ್ಷಣ ಆಸ್ಪತ್ರೆಗೆ ಹೋಗುವಂತೆ ಜಾಗೃತಿ ಮೂಡಿಸಿದರು.
ಸುಮಾರು ಇಪ್ಪತ್ತಕ್ಕು ಹೆಚ್ಚು ಕುಟುಂಬಗಳಿಗೆ ಹತ್ತು ದಿನಗಳಿಗೆ ಆಗುವಷ್ಟು ದಿನಸಿ ಹಾಗು ಇತರೆ ವಸ್ತುಗಳನ್ನು ನೀಡಿದರು.ಈ ಸಂದರ್ಭದಲ್ಲಿ ಲಕ್ಷ್ಮೀಕಾಂತ ದೇವರಗೋನಾಲ,ಗಂಗಾಧರ ನಾಯಕ,ಪರಶುರಾಮ ನಾಟೆಕರ್ ಸೇರಿದಂತೆ ಅನೇಕರಿದ್ದರು.
ಕಲಬುರಗಿ: ಕಾಂಗ್ರೆಸ್ ಪಕ್ಷದ ಅಂಗ ಸಂಖ್ಯೆ ಸೇವಾದಳ ಯಂಗ್ ಬ್ರಿಗೇಡ್ ಸದಸ್ಯತ್ವ ಅಭಿಯಾನ ನ.20ರಿಂದ ರಾಜ್ಯವ್ಯಾಪಿ ಆರಂಭ ಮಾಡಲಾಗಿದ್ದು, ಆಸಕ್ತರು…
ಕಲಬುರಗಿ: ಜೀವನದಲ್ಲಿ ಹತ್ತನೇ ಮತ್ತು ಪಿಯುಸಿ ಬಹಳ ಮಹತ್ವದ ಘಟ್ಟಗಳು. ಇವೆರಡು ನಮ್ಮ ಭವಿಷ್ಯವನ್ನು ನಿರ್ಧರಿಸುತ್ತವೆ. ವಿದ್ಯಾರ್ಥಿಗಳು ಅಚಲವಾದ ಆತ್ಮವಿಶ್ವಾಸದಿಂದ…
ಸೇಡಂ : ತಮ್ಮ ಬೌದ್ಧಿಕ ವಿಕಾಸದಲ್ಲಿಯೇ ಮಹಿಳೆಯರ ಅಸ್ತಿತ್ವವಿದೆ ಎಂದು ಕೇಂದ್ರ ಸಾಹಿತ್ಯ ಅಕಾಡೆಮಿ ಸದಸ್ಯ ಡಾ.ಬಸವರಾಜ ಸಾದರ ಹೇಳಿದರು.…
ಕಲಬುರಗಿ: ಅಫಜಲಪುರ ತಾಲೂಕಿನ ಸೊನ್ನ ಗ್ರಾಮದ ನಿವಾಸಿ ಆನಂದಪ್ಪ ಶರಣಪ್ಪ ಉಮ್ಮನಗೋಳ್(೮೦) ಅವರು ಸೋಮವಾರ ಬೆಳಗ್ಗೆ ವಯೋಸಹಜವಾಗಿ ನಿಧನರಾದರು. ಮೃತರು…
ಕಲಬುರಗಿ: ಸಂಘಸಂಸ್ಥೆಗಳು ಸಾದಕರನ್ನು ಗುರುತಿಸಿ ಪ್ರಶಸ್ತಿ ಪುರಸ್ಕಾರಗಳನ್ನು ನೀಡುವ ಮುಖಾಂತರಾ ಅವರ ಜವಾಬ್ದಾರಿ ಹೆಚ್ಚಿಸುವುದರಜೋತೆಯಲ್ಲಿ ಸಾಮಾಜಿಕ ಕೆಲಸಗಳನ್ನು ಮಾಡುತ್ತಿರುವುದು ಸಮಾಜಕ್ಕೆ…
ಕಲಬುರಗಿ; ಹೈದ್ರಾಬಾದ್- ಕರ್ನಾಟಕ ಶಿಕ್ಷಣ ಸಂಸ್ಥೆಯ PDACE ಸಭಾಂಗಣದಲ್ಲಿ ನಡೆದ ಕಲ್ಯಾಣ ಕರ್ನಾಟಕ startup conclave ಇಂದು ದಕ್ಷಣ ಶಾಸಕ…