ಹೈದರಾಬಾದ್ ಕರ್ನಾಟಕ

ಗಂಗಮ್ಮನ ಸಾವಿಗೆ ನೈತಿಕ ಹೊಣೆ ಹೊತ್ತು ಸೂಕ್ತ ಪರಿಹಾರಕ್ಕೆ ಶಿವಕುಮಾರ ಮ್ಯಾಗಳಮನಿ ಆಗ್ರಹ

ರಾಯಚೂರು: ಲಾಕ್ ಡೌನ್ ನಿಂದ ಕೆಂಗೆಟ್ಟ ಸಿಂಧನೂರಿನ ವೆಂಕಟೇಶ್ವರ ಕಾಲೋನಿಯ ನಿವಾಸಿಯಾದ ಗಂಗಮ್ಮ ತನ್ನ ಊರು ಸೇರಿಕೊಳ್ಳಲು ಬೆಂಗಳೂರಿನಿಂದ ತನ್ನೂರು ಸಿಂಧನೂರಿಗೆ ಕಾಲ್ನಡಿಗೆ ಯಲ್ಲಿ ನಡೆದು ಬರುವ ಮಾರ್ಗ ಮಧ್ಯೆ ಹಸಿವು ಮತ್ತು ಅನಾರೋಗ್ಯಕ್ಕೆ ತುತ್ತಾಗಿ ಮೃತಪಟ್ಟರುತ್ತಾಳೆ. ಈ ಸಾವಿಗೆ ರಾಜ್ಯ, ಕೇಂದ್ರ ಸರ್ಕಾರ ಭಾಗದ ಜನಪ್ರತಿನಿಧಿ ಹಾಗೂ ಜಿಲ್ಲಾಡಳಿತವೆ ನೇರ ಹೊಣೆ ಹೊತ್ತು ಕುಟುಂಬಕ್ಕೆ ಸೂಕ್ತ ಪರಿಹಾರ ನೀಡಬೇಕೆಂದು SFI ರಾಜ್ಯ ಉಪಾಧ್ಯಕ್ಷರಾದ ಶಿವಕುಮಾರ ಮ್ಯಾಗಳಮನಿ ಒತ್ತಾಯಿಸಿದ್ದಾರೆ.

ಈ ಕುರಿತು ಪತ್ರಕಾ ಪ್ರಕಟಣೆ ನೀಡಿದ ಅವರು, ಜನತೆಯ ಆರೋಗ್ಯದ ಹಿತ ದೃಷ್ಟಿಯಿಂದ ಸಾಮಾಜಿಕ ಅಂತರಕ್ಕಾಗಿ ಲಾಕ್ ಡೌನ್ ನಿರ್ಧಾರ ಒಳ್ಳೆಯದೆ ಆದರೆ ಇದನ್ನು ಘೋಷಣೆ ಮಾಡುವ ಮುನ್ನ ಸಂಬಂಧಿಸಿದ ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಈ ದೇಶದ ಕೋಟ್ಯಾಂತರ ವಲಸೆ ಕಾರ್ಮಿಕರು,‌ ಅಲೆಮಾರಿಗಳು ಗಳು, ದಿನಗೂಲಿ ನೌಕರರು ಸೇರಿದಂತೆ ಇತರೆ ದುಡಿಯುವ ಜನತೆಯನ್ನು ಗಮನದಲ್ಲಿಟ್ಟುಕೊಂಡು ಅವರಿಗೆ ಆಗತ್ಯ ಇರುವ ಎಲ್ಲಾ ರೀತಿಯ ಪರ್ಯಾಯ ವ್ಯವಸ್ಥೆಯನ್ನು ಕಲ್ಪಿಸಿ ಲಾಕ್ ಡೌನ್ ಘೋಷಣೆ ಮಾಡಬೇಕಿತ್ತು. ಸರಿಯಾದ ಪೂರ್ವ ಸಿದ್ದತೆ ಗಳಿಲ್ಲದೆ ಏಕಾಏಕಿ ದೇಶವನ್ನು ಲಾಕ್ ಡೌನ್ ಮಾಡಿದ ಪರಿಣಾಮ ದೇಶದ ಕೋಟ್ಯಾನುಗಟ್ಟಲೆ ಜನತೆಯ ಬದುಕನ್ನು ಸರ್ಕಾರ ಬೀದಿಗೆ ತಂದು ನಿಲ್ಲಿಸಿದಂತಾಗಿದೆ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ದೇಶವ್ಯಾಪ್ತಿ ಎಲ್ಲೆಡೆಯೂ ಕೊರೋನಾ ವೈರಸ್ ಕ್ಕಿಂತಲೂ ಹಸಿವು, ಅನಾರೋಗ್ಯ ನೀರಿನ ದಾಹ ಮತ್ತು ಇತ್ಯಾದಿ ಜೀವನಕ್ಕೆ ಸಂಬಂಧಿಸಿದ ಗಂಭೀರ ಸಮಸ್ಯೆಗಳಿಗೆ ಸಿಲುಕಿದ ನೂರಾರು ಮಂದಿ ಈಗಾಗಲೇ ತಮ್ಮ ಪ್ರಾಣವನ್ನು ಕಳೆದುಕೊಳ್ಳುತ್ತಿದ್ದಾರೆ. ಅದಕ್ಕೆ ನಮ್ಮ ಕಣ್ಣ ಮುಂದೆ ಇರುವ ಉದಾಹರಣೆ ಎಂದರೆ ನಮ್ಮದೆ ಜಿಲ್ಲೆಯ ಸಿಂಧನೂರಿನ ನಿವಾಸಿ ಗಂಗಮ್ಮಳ ಸಾವು ಈ ಸಾವಿಗೆ ಸರ್ಕಾರದ ನಿರ್ಲಕ್ಷ್ಯ ಮತ್ತು ಈ ನೀತಿಗಳೆ ನೇರ ಕಾರಣ ಕೂಡಲೇ ಗಂಗಮ್ಮಳ ಕುಟುಂಬಕ್ಕೆ ಸೂಕ್ತ ಪರಿಹಾರ ವನ್ನು ನೀಡಬೇಕು. ಮತ್ತು ಇಂತಹ ಪರಿಸ್ಥಿತಿ ಯಲ್ಲಿ ಸಿಲುಕಿಕೊಂಡಿರುವ ಅಸಂಖ್ಯಾತ ಜನ ಸಮುದಾಯವನ್ನು ಪಾರು ಮಾಡುವ ನಿಟ್ಟಿನಲ್ಲಿ ಜಿಲ್ಲಾಡಳಿತ, ಸ್ಥಳೀಯಾಡಳಿತ, ಅಧಿಕಾರಿಗಳು, ಜನಪ್ರತಿನಿಧಿಗಳು ಸೇರಿ ರಾಜ್ಯ ಮತ್ತು ಕೇಂದ್ರ ಸರ್ಕಾರ ಮುಂದಾಗಬೇಂದು ಆಗ್ರಹಿದ್ದಾರೆ.

emedialine

Recent Posts

ಸಚಿವ ಪ್ರೀಯಾಂಕ್ ಖರ್ಗೆ ಹುಟ್ಟುಹಬ್ಬ ನಿಮಿತ್ತ ಬಾಲಕಿಯರ ಕ್ರಿಕೇಟ್

ಕಲಬುರಗಿ: ಗ್ರಾಮೀಣಾಭಿವೃದ್ಧಿ ಪಂಚಾಯತ್ ರಾಜ್, ಐಟಿ, ಬಿಟಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಪ್ರೀಯಾಂಕ್ ಖರ್ಗೆ ಅವರ 46ನೇ ವರ್ಷದ…

37 seconds ago

ಯತ್ನಾಳ ಹೋರಾಟಕ್ಕೆ ಬೆಂಬಲವಿಲ್ಲ : ಆನಂದ ಕಣಸೂರ

ಕಲಬುರಗಿ: ವಕ್ಫ್ ಬೋರ್ಡ್ ವಿರುದ್ಧ ಹೋರಾಟ ಮಾಡುತ್ತಿರುವ ಯತ್ನಾಳ ಟೀಮ್ ಗೆ ಬೆಂಬಲವಿಲ್ಲ ಭಾರತೀಯ ಜನತಾ ಪಕ್ಷದ ಯುವ ಮುಖಂಡ…

3 mins ago

ವಕ್ಫ್ ಮಸೂದೆ ತಿದ್ದುಪಡಿಗೆ ಮುಸ್ಲೀಮ ವೈಯಕ್ತಿಕ ಕಾನೂನು ಮಂಡಳಿ ವಿರೋಧ

ಕಲಬುರಗಿ: ನ.25- ಕೇಂದ್ರ ಸರ್ಕಾರ ವಕ್ಫ್ ತಿದ್ದುಪಡಿ ಮಸೂದೆ-2024 ಜಾರಿಗೆ ತರಲು ಮುಂದಾಗಿದ್ದನ್ನು ಆಲ್ ಇಂಡಿಯಾ ಮುಸ್ಲೀಮ ವೈಯಕ್ತಿಕ ಕಾನೂನು…

15 mins ago

ಮಹಿಳಾ ಸಹಭಾಗಿತ್ವ ಇಲ್ಲದೆ ದೇಶದ ಅಭಿವೃದ್ಧಿ ಅಸಾಧ್ಯ: ಮಾತೋಶ್ರೀ ಡಾ. ಅವ್ವಾಜಿ

ಕಲಬುರಗಿ: ಮಹಿಳೆಯರ ಸಹಭಾಗಿತ್ವ ಮತ್ತು ಕೊಡುಗೆಯಿಲ್ಲದೆ ದೇಶದ ಸರ್ವಾಂಗೀಣ ಅಭಿವೃದ್ಧಿ ಅಸಾಧ್ಯ ಎಂದು ಶರಣಬಸವೇಶ್ವರ ವಿದ್ಯಾವರ್ಧಕ ಸಂಘದ ಅಧ್ಯಕ್ಷೆ ಮಾತೋಶ್ರೀ…

23 hours ago

ತೊಗರಿ ಬೆಳೆ‌ ಹಾನಿ ಪ್ರದೇಶ ವೀಕ್ಷಿಸಿದ ಶಾಸಕ ಅಲ್ಲಮಪ್ರಭು ಪಾಟೀಲ

ಕಲಬುರಗಿ: ಕಲಬುರಗಿ ದಕ್ಷಿಣ ಮತಕ್ಷೇತ್ರದ ಶಾಸಕ ಅಲ್ಲಮಪ್ರಭು ಪಾಟೀಲ ಅವರು ಶನಿವಾರ ಸಂಜೆ ಕ್ಷೇತ್ರದ ಭೀಮಳ್ಳಿ ಗ್ರಾಮದ ರೈತರ ಹೊಲಗಳಿಗೆ…

1 day ago

ಕಷ್ಟಗಳಿಗೆ ಕುಗ್ಗದೇ ಸವಾಲಾಗಿ ಸ್ವಿಕರಿಸಿ

ಕಲಬುರಗಿ: ಕಷ್ಟಗಳು ಬಂದಾಗ ಕುಗ್ಗದೆ, ಆ ಕಷ್ಟಗಳನ್ನು ಸವಾಲಾಗಿ ಸ್ವೀಕರಿಸಿ ಮೇಲೇಳಬೇಕು ಎಂದು ತಾಜ್ ನಗರದ ಆರೋಗ್ಯ ಕೇಂದ್ರದ ಹಿರಿಯ…

1 day ago