ಕಲಬುರಗಿ: ಜಿಲ್ಲೆಯ ಸೇಡಂ ಮತ್ತು ಚಿಂಚೋಳಿ ತಾಲ್ಲೂಕಿನ ಕೆಲವು ಸಮಾಜ ಘಾತುಕರು ಸಾಮಾಜಿಕ ಜಾಲತಾಣಗಳಾದ ಫೇಸ್ ಬುಕ್, ಇನ್ಸ್ಟಗ್ರಾಮ್ ಹಾಗೂ ಇತರ ಮಾಧ್ಯಮಗಳನ್ನು ಬಳಸುವ ಮೂಲಕ ಮುಸ್ಲಿಂ ಸಮುದಾದಯಕ್ಕೆ ಧಕ್ಕೆ ಉಂಟಾಗುವ ರೀತಿಯಲ್ಲಿ ಪೋಸ್ಟ್ ಮತ್ತು ಕಮೆಂಟ್ ಮಾಡಿ ಚಾಟಿಂಗ್ ನಡೆಸಿ ಕೋಮುಗಲಭೆಗೆ ಕುಮ್ಮಕ್ಕು ನೀಡುತ್ತಿದ್ದಾರೆ. ಇಂತಹ ಕಿಡಿಗೇಡಿಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕೆಂದು ಎಂದು ಕಲಬುರಗಿ ನಗರಾಭಿವೃದ್ಧಿ ಪ್ರಾಧಿಕಾರದ ಮಾಜಿ ಅಧ್ಯಕ್ಷರಾದ ಡಾ. ಮಹಮ್ಮದ್ ಅಸಗರ್ ಚುಲಬುಲ್ ಅವರು ಪೊಲೀಸ್ ಆಯುಕ್ತರಿಗೆ ಒತ್ತಾಯಿಸಿದ್ದಾರೆ.
ಕಲ್ಯಾಣ ಕರ್ನಾಟಕ ಭಾಗದಲ್ಲಿ ಶಾಂತಿ ಮತ್ತು ಸೌಹಾರ್ದತೆಗೆ ಪ್ರಸಿದ್ಧ ಶರಣರ,ಸೂಫಿ ಸಂತರ ನಾಡಾಗಿದ್ದು, ಇಲ್ಲಿ ಶರಣಬಸವೇಶ್ವರ ಹಾಗೂ ಖಾಜಾ ಬಂದೇ ನವಾಜ್ ಪವಿತ್ರ ಸ್ಥಳಗಳನ್ನು ಹೊಂದಿದ್ದು ಭಾವೈಕ್ಯ ಮೂಡಿಸುವ ಕೇಂದ್ರಗಳಾಗಿವೆ. ಈ ನಾಡಿನಲ್ಲಿ ಅಶಾಂತಿ ಮತ್ತು ಕೋಮು ಹರಡಿಸಲು ಹುನ್ನಾರ ನಡೆಸುತ್ತಿರುವ ಸಮಾಜ ಘಾತುಕ ಶಕ್ತಿಗಳನ್ನು ಮಟ್ಟಹಾಕಿ ಅಂತಹವುಗಳ ವಿರುದ್ಧ ಕಾನೂನು ಕ್ರಮ ಜರುಗಿಸಬೇಕೆಂದು ಎಸ್.ಪಿ ಯಡಾ ಮಾರ್ಟಿನ್ ಅವರಿಗೆ ಮನವಿ ಮಾಡಿದ್ದಾರೆ.
ಸಾಮಾಜಿಕ ಜಾಲಾತಾಣದಲ್ಲಿ ಬೇರೆ ಯಾವುದೇ ಧರ್ಮದ ಬಗ್ಗೆ ಮುಸ್ಲಿಂ ಯುವಕರು ಸಹ ತಪ್ಪು ಕಮೆಂಟ್ಸ್ ಮಾಡಿದರೆ ಮುಲಾಜಿಲ್ಲದೇ ಅವರ ವಿರುದ್ಧವೂ ಕಾನೂನು ರೀತಿ ಪ್ರಕರಣ ದಾಖಲಿಸಿಕೊಂಡು ಕ್ರಮ ಕೈಗೊಳ್ಳಬೇಕು ಎಂದು ತಿಳಿಸದ ಅವರು ಜಿಲ್ಲೆಯಲ್ಲಿ ಒಗ್ಗಟ್ಟಾಗಿ ನಾವೆಲ್ಲರೂ ಕೊರೋನಾ ಮಹಾಮಾರಿ ವಿರುದ್ಧ ಹೋರಾಟ ಮಾಡುತ್ತಿದ್ದು, ಈಗಾಗಲೇ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಸರಕಾರದ ಜೊತೆ ಅಲ್ಪಸಂಖ್ಯಾತರು ನಿಂತಿದ್ದು, ಸಾಮೂಹಿಕ ಪ್ರಾರ್ಥನೆಯಾದ ನಮಾಜ್ ನಿಲ್ಲಿಸಿದ್ದೇವೆ. ಸೋಂಕು ತಡೆಯುವ ನಿಟ್ಟಿನಲ್ಲಿ ಮುಸ್ಲಿಂ ಸಮುದಾಯದ ಗಣ್ಯ ಪ್ರಮುಖರು ಹಗಲಿರುಳು ಜಾಗೃತಿ ಮುಡಿಸುತ್ತಿದ್ದಾರೆ. ಅಲ್ಲದೇ, ಸಮುದಾಯದ ಜನರಿಗೆ ತಾಕೀತು ಸಹ ಮಾಡಿದೇವೆ ಎಂದು ಅವರು ಈ ವೇಳೆಯಲ್ಲಿ ತಿಳಿಸಿದರು.
ಆದರು ಸಹ ಕೆಲವು ವಿಷಕಾರುವ ಸುದ್ದಿ ಮಾಧ್ಯಮಗಳು ಮುಸ್ಲಿಂ ಸಮುದಾಯದ ವಿರುದ್ಧ ಅವಹೇಳನದ ಮೂಲಕ ಸಮಾಜದಲ್ಲಿ ಶಾಂತಿ ಕದಡುವ ಪ್ರಯತ್ನ ಮಾಡುಸುತ್ತಿರುವುದು ಕಂಡು ಬರುತ್ತದೆ. ಮಾಧ್ಯಮಗಳು ಕೊರೊನಾ ವೈರಸ್ ನ್ನು ಒಂದು ಜಾತಿ ಮತ್ತು ಧರ್ಮದ ತಲೆಗೆ ಕಟ್ಟುವ ಕುತಂತ್ರ ನಡೆಸುತ್ತಿದ್ದಾರೆ. ಇದರ ಫಲವಾಗಿ ಸಾಮಾಜಿಕ ಜಾಲಾತಾಣದಲ್ಲಿ ಮುಸ್ಲಿಂ ಸಮುದಾಯದ ವಿರುದ್ಧ ಯುವ ಪಿಳಿಗೆ ಇದನ್ನು ಮುಂದುವರೆಸಿದ್ದಾರೆ. ಅಲ್ಲದೇ ಕೆಲವು ಕಡೆಗಳಲ್ಲಿ ಮುಸ್ಲಿಂ ಸಮುದಾಯದ ಮೇಲೆ ಹಲ್ಲೆ ನಡೆಸುವುದು ಮತ್ತು ಸಮುದಾಯವನ್ನು ಅನುಮಾನದಿಂದ ನೋಡುವಂತೆ ಉದ್ವೇಗ ಸೃಷ್ಠಿಸುತ್ತಿದ್ದಾರೆ ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ರಾಜ್ಯದಲ್ಲಿ ಇಂತಹ ಪರಿಸ್ಥಿತಿಗೆ ಅವಕಾಶ ನೀಡಬಾರದು ಇಂತಹ ಘಟನೆಗಳಿಗೆ ಕುಮಕ್ಕು ನೀಡುವವರನ್ನು ಪತೆಹಚ್ಚಿ ಅವರು ಯಾರೇ ಆದರು ಸಹ ಕಾನೂನು ಪ್ರಕಾರ ಕ್ರಮಕೈಗೊಳ್ಳುವ ಮೂಲಕ ಶಾಂತಿ ಮತ್ತು ಸಾಮರಸ್ಯವನ್ನು ಸೃಷ್ಟಿಸುವಂತಹ ಸಂದೇಶ ನೀಡಬೇಕೆಂದು ಅವರು ಈ ಸಂದರ್ಭದಲ್ಲಿ ಮನವಿ ಮಾಡಿದ್ದಾರೆ.
ಕಲಬುರಗಿ: ಮಹಿಳೆಯರ ಸಹಭಾಗಿತ್ವ ಮತ್ತು ಕೊಡುಗೆಯಿಲ್ಲದೆ ದೇಶದ ಸರ್ವಾಂಗೀಣ ಅಭಿವೃದ್ಧಿ ಅಸಾಧ್ಯ ಎಂದು ಶರಣಬಸವೇಶ್ವರ ವಿದ್ಯಾವರ್ಧಕ ಸಂಘದ ಅಧ್ಯಕ್ಷೆ ಮಾತೋಶ್ರೀ…
ಕಲಬುರಗಿ: ಕಲಬುರಗಿ ದಕ್ಷಿಣ ಮತಕ್ಷೇತ್ರದ ಶಾಸಕ ಅಲ್ಲಮಪ್ರಭು ಪಾಟೀಲ ಅವರು ಶನಿವಾರ ಸಂಜೆ ಕ್ಷೇತ್ರದ ಭೀಮಳ್ಳಿ ಗ್ರಾಮದ ರೈತರ ಹೊಲಗಳಿಗೆ…
ಕಲಬುರಗಿ: ಕಷ್ಟಗಳು ಬಂದಾಗ ಕುಗ್ಗದೆ, ಆ ಕಷ್ಟಗಳನ್ನು ಸವಾಲಾಗಿ ಸ್ವೀಕರಿಸಿ ಮೇಲೇಳಬೇಕು ಎಂದು ತಾಜ್ ನಗರದ ಆರೋಗ್ಯ ಕೇಂದ್ರದ ಹಿರಿಯ…
ಪರೋಪಕಾರ ಸೇವೆಯಿಂದ ಆತ್ಮತೃಪ್ತಿ: ಹಿರೇಮಠ ಕಲಬುರಗಿ: ನಗರ ಹೊರವಲಯದ ಸೈಯದ್ ಚಿಂಚೋಳಿ ರಸ್ತೆಯ ಬಳಿ ಇರುವ ಕೆವಿಪಿ ದಣ್ಣೂರ ಪಿಯು…
ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…
ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…