ಕಲಬುರಗಿ: ಕೊರೋನಾ ಸಾಂಕ್ರಾಮಿಕ ಸೋಂಕು ತಡೆಗಟ್ಟುವ ನಿಟ್ಟಿನಲ್ಲಿ ಗುರುವಾರ ಏಪ್ರಿಲ್-9ರಂದು ಜಿಲ್ಲೆಯಾದ್ಯಂತ ಮುಸ್ಲಿಂ ಬಾಂಧವರಿಂದ ಯಾವುದೇ ಖಬ್ರಸ್ಥಾನ ಮತ್ತು ಮಸೀದಿಗಳಲ್ಲಿ ಜರುಗುವ (ಶಬ್-ಎ-ಬಾರಾತ್) ಧಾರ್ಮಿಕ ಕಾರ್ಯಕ್ರಮವನ್ನು ನಿಷೇಧಿಸಲಾಗಿದೆ ಎಂದು ಕಲಬುರಗಿ ಜಿಲ್ಲಾ ದಂಡಾಧಿಕಾರಿ ಹಾಗೂ ಜಿಲ್ಲಾಧಿಕಾರಿ ಶರತ್ ಬಿ. ಅವರು ತಿಳಿಸಿದ್ದಾರೆ.
ಜಿಲ್ಲೆಯ ಆಯಾ ತಾಲೂಕುಗಳ ವ್ಯಾಪ್ತಿಗೊಳಪಡುವ ಎಲ್ಲ ಧಾರ್ಮಿಕ ಸ್ಥಳಗಳಾದ ಖಬರಸ್ಥಾನ ಹಾಗೂ ಮಸೀದಿಗಳಲ್ಲಿ ಮೇಲ್ಕಂಡ ದಿನದಂದು ಮುಸ್ಲಿಂ ಸಮುದಾಯದ ಮುಖಂಡರು ಶಬ್-ಎ-ಬರಾತ್ ಧಾರ್ಮಿಕ ಕಾರ್ಯಕ್ರಮವನ್ನು ಆಚರಿಸದಂತೆ ತಕ್ಷಣವೇ ಪೊಲೀಸ್ ಸಿಬ್ಬಂದಿಗಳನ್ನು ನಿಯೋಜಿಸಬೇಕೆಂದು ಸಂಬಂಧಪಟ್ಟ ಅಧಿಕಾರಿಗಳಿಗೆ ಅವರು ತಿಳಿಸಿದ್ದಾರೆ.