ಅಸ್ಸಾಂ: ಗೌಹಾಟಿಯಲ್ಲಿ ಶಾಪಿಂಗ್ ಮಾಲ್ ಹೊರಬಾಗದಲ್ಲಿ ಗ್ರೆನೇಟ್ ಸ್ಪೋಟಗೊಂಡ ಘಟನೆ ನಡೆದಿದ್ದು, ಘಟನೆಯಲ್ಲಿ 6 ಮಂದಿಗೆ ಗಂಭೀರ ಗಾಯಗಳಾಗಿದ್ದು, ಗಾಯಾಳುಗಳಿಗೆ ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ.
ಗೌಹಾಟಿಯ ಝೂ ಎರಿಯಾ ಬಡಾವಣೆಯಲ್ಲಿರುವ ಶಾಪಿಂಗ್ ಮಾಲ್ ಹೊರಗಡೆ ಈ ಘಟನೆ ಸಂಭವಿಸಿದ್ದು, ಘಟನೆಯಲ್ಲಿ 6 ಮಂದಿ ಗಂಭೀರ ಗಾಯಗೊಂಡಿದ್ದಾರೆ. ಗಾಯಾಳುಗಳಿಗೆ ಸ್ಥಳಿಯ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಘಟನಾ ಸ್ಥಳಕ್ಕೆ ಪೊಲೀಸರು ಆಗಮಿಸಿ ಪರಿಶೀಲಿಸುತ್ತಿದ್ದು, ಕೃತ್ಯದ ಕುರಿತು ಅಸ್ಸಾಂ ಮುಖ್ಯಮಂತ್ರಿ ಸರಬಂದಾ ಸೋನೋವಾಲ್ ಅವರು ಕೃತ್ಯವನ್ನು ಖಂಡಿಸಿ, ಗೌಹಾಟಿಯ ಡಿಜಿಪಿ ಕುಲಧರ ಸೈಕಿಯಾ ಅವರೊಂದಿಗೆ ಮಾತನಾಡಿ ಕೃತ್ಯದ ಕುರಿತು ತನಿಖೆಗೆ ಆದೇಶ ನೀಡಿದ್ದಾರೆ ಎಂದು ತಿಳಿದುಬಂದಿದೆ.
ಪೊಲೀಸರು ಸ್ಥಳಕ್ಕಾಗಮಿಸಿ ತನಿಖೆ ನಡೆಸುತ್ತಿದ್ದು, ಕೃತ್ಯಕ್ಕೆ ಸಂಬಂಧಿಸಿದಂತೆ ಸದ್ಯ ಯಾವುದೇ ಮಾಹಿತಿ ಸಿಕ್ಕಿಲ್ಲ. ಈ ಕುರಿತು ಸ್ಥಳೀಯ ಪೊಲೀಸರು ತನಿಖೆ ನಡೆಸುತ್ತಿದ್ದು, ಸ್ಫೋಟದ ಕುರಿತು ಮಾಹಿತಿ ಕಲೆಹಾಕುತ್ತಿದ್ದಾರೆ.
ಕಲಬುರಗಿ: ಕಲ್ಯಾಣ ಕರ್ನಾಟಕದ ಶೈಕ್ಷಣಿಕ ಗುಣಮಟ್ಟ ಸುಧಾರಣೆಗಾಗಿ ಕೆ.ಕೆ.ಆರ್.ಡಿ.ಬಿ ಯು ಸಮಿತಿಯೊಂದನ್ನು ರಚಿಸಿ, ಗುರುರಾಜ ಕರ್ಜಗಿ ಅವರನ್ನು ಅಧ್ಯಕ್ಷರನ್ನಾಗಿ ಮಾಡಿರುವ…
ಕಲಬುರಗಿ; ಕನಾ೯ಟಕ ರಾಜ್ಯ ತಳವಾರ ಮಹಾಸಭಾ ಕಲಬುರಗಿ ಜಿಲ್ಲಾಧ್ಯಕ್ಷರಾದ ಚಂದ್ರಕಾಂತ ದಶರಥ ತಳವಾರ ಅವರ ಅಧ್ಯಕ್ಷತೆಯಲ್ಲಿ ಇಂದು ಆನಂದ ನಿಲಯ…
ಕಲಬುರಗಿ; ಜಿಲ್ಲಾಧಿಕಾರಿ ಬಿ. ಫೌಜಿಯಾ ತರನ್ನುಮ್ ಅವರು ಶನಿವಾರ ಶಹಾಬಾದ ರಸ್ತೆಯಲ್ಲಿರುವ ನಂದೂರ-ಕೆಸರಟಗಿ ಮತ್ತು ಹುಮನಾಬಾದ ರಸ್ತೆಯಲ್ಲಿರುವ ಕಪನೂರ ಕೈಗಾರಿಕಾ…
ಶಹಾಬಾದ: ಕರ್ನಾಟಕದ ಬಹುಮತ ಸರಕಾರವನ್ನು ಬೀಳಿಸಲು ಇಲ್ಲಸಲ್ಲದ ಆರೋಪ ಮಾಡುವ ಮೂಲಕ ಸಿಎಂ ರಾಜೀನಾಮೆಗೆ ಒತ್ತಾಯ ಮಡುತ್ತಿರುವ ಬಿಜೆಪಿ ಹಾಗೂ…
ಶಹಾಬಾದ:ಪ್ರತಿ ಮನೆಗೂ ನೀರು ದೊರಿಸಿಕೊಡುವ ಉದ್ದೇಶದಿಂದ ನಡೆಯುವ ಜೆಜೆಎಂ ಕಾಮಗಾರಿ ಗುಣಮಟ್ಟದಿಂದ ಕೂಡಿರಬೇಕೆಂದು ಕಾಂಗ್ರೆಸ್ ಮುಖಂಡ ಮೃತ್ಯುಂಜಯ್ ಹಿರೇಮಠ ಹೇಳಿದರು.…
ಶಹಾಬಾದ :ನಗರದ ಬೌದ್ಧ ವಿಹಾರದಲ್ಲಿ ರವಿವಾರ ಹಮ್ಮಿಕೊಂಡ 68ನೇ ಧಮ್ಮಚಕ್ರ ಪ್ರವರ್ತನಾ ದಿನದ ಅಂಗವಾಗಿ ಕಲಬುರ್ಗಿಯಲ್ಲಿ ಅ.13 ಮತ್ತು 14…