ಬಿಸಿ ಬಿಸಿ ಸುದ್ದಿ

ಲಾಕ್ ಡೌನ್: ಬಡ ಕಾರ್ಮಿಕರ ತೊಂದರೆ ಪರಿಹಾರಕ್ಕೆ ಎ.ಐ.ಯು.ಟಿ.ಯು.ಸಿ ಒತ್ತಾಯ

ಕಲಬುರಗಿ: ಅಸಂಘಟಿತ  ಅಲೆಮಾರಿ ಕಾರ್ಮಿಕರ ಸಮಸ್ಯೆಗಳನ್ನು ಪರಿಹಾರಿಸಬೇಕೆಂದು ಇಂದು ಎ.ಐ.ಯು.ಟಿ.ಯು.ಸಿ ಕಾರ್ಮಿಕ ಸಂಘಟನೆಯ ಜಿಲ್ಲಾ ಸಮಿತಿ ವತಿಯಿಂದ ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆಯ ಜಂಟಿ ನಿರ್ದೇಶಕರಿಗೆ ಆಗ್ರಹಿಸಿ ಮನವಿ ಸಲ್ಲಿಸಲಾಯಿತು.

ಸಂಘದ ಜಿಲ್ಲಾ ಕಾರ್ಯದರ್ಶಿಗಳಾದ ಎಸ್.ಎಂ ಶರ್ಮಾ ಮನವಿ ಪತ್ರ ನೀಡಿ ಮಾತನಾಡಿದ ಅವರು ಕೊರೋನಾ ವೈರಸ್ ನಿಂದ ಭಾರತ್ ಲಾಕ್ ಡೌನ್ ನಿಂದ ಕಾರ್ಮಿಕರು ಆಹಾರ ಮತ್ತು ದಿನನಿತ್ಯದ ಖರ್ಚಿಗಾಗಿ ಪರದಾಡುತ್ತಿದ್ದಾರೆ. ಅಲ್ಲದೇ ಜೀವನ ನಿರ್ವಹಣೆ ಕಷ್ಠವಾಗುತ್ತಿದೆ. ಸರಕಾರವು ಕೆಲವು ಕಡೆ ಕಾರ್ಮಿಕರಿಗೆ ಪರಿಹಾರದ ರೂಪದಲ್ಲಿ ದಿನಸಿ ಸಾಮಾನುಗಳು, ಆಹಾರದ ಪಾಕೆಟಗಳು ವಿತರಿಸುತ್ತಿದ್ದು, ಬಹಳಷ್ಷು ಗ್ರಾಮೀಣ, ನಗರ,  ಸ್ಲಂ ಬಡಾವಣೆಗಳಲ್ಲಿ ಬಡಕೂಲಿಕಾರ್ಮಿಕರಿಗೆ ಸರಿಯಾದ ರೀತಿಯಲ್ಲಿ ಪರಿಹಾರ ತಲುಪುತ್ತಿಲ್ಲ ಎಂದು ಕಳವಳ ವ್ಯಕ್ತಪಡಿಸಿದರು.

ಬಿ.ಪಿ.ಎಲ್. ಕಾರ್ಡು ಇಲ್ಲದವರಿಗೂ ಸಹ ಎಲ್ಲಾ ರೀತಿಯ ಆಹಾರ ಸಾಮಾಗ್ರಿಗಳನ್ನು ಒದಗಿಸಬೇಕು. ತಾಲ್ಲೂಕುಗಳಲ್ಲಿ ಬಡ ಕಾರ್ಮಿಕರಿಗೆ ಶೀಘ್ರ ಆಹಾರ ಸಾಮಾಗ್ರಿ ಪೂರೈಸಿ, ನಗರ ಮತ್ತು ಹಳ್ಳಿಗಳಲ್ಲಿ ಸ್ವಚ್ಛತೆ ಕಾಪಾಡಿವ ನಿಟ್ಟಿನಲ್ಲಿ ಕ್ರಮ ಕೈಗೊಳಬೇಕು, ರೇಷನ್ ತೆಗೆದುಕೊಳ್ಳುವಲ್ಲಿನ ಅನಾವಶ್ಯಕ ತೊಂದರೆಗಳನ್ನು ತಡೆಗಟ್ಟಬೇಕೆಂದು ಸಂಘದ   ಜಿಲ್ಲಾ ಉಪಾಧ್ಯಾಕ್ಷರಾದ  ರಾಘವೇಂದ್ರ ಎಂ.ಜಿ. ಮನವಿ ಮಾಡಿದರು.

emedialine

Recent Posts

ಆತ್ಮವಿಶ್ವಾಸವಿದ್ದರೆ ಜೀವನದಲ್ಲಿ ಏನನ್ನಾದರೂ ಸಾಧಿಸಬಹುದು : ಶಂಕರಗೌಡ

ಕಲಬುರಗಿ: ಜೀವನದಲ್ಲಿ ಹತ್ತನೇ ಮತ್ತು ಪಿಯುಸಿ ಬಹಳ ಮಹತ್ವದ ಘಟ್ಟಗಳು. ಇವೆರಡು ನಮ್ಮ ಭವಿಷ್ಯವನ್ನು ನಿರ್ಧರಿಸುತ್ತವೆ. ವಿದ್ಯಾರ್ಥಿಗಳು ಅಚಲವಾದ ಆತ್ಮವಿಶ್ವಾಸದಿಂದ…

5 hours ago

ಬೌದ್ಧಿಕ ವಿಕಾಸದಿಂದ ತನ್ನತನದ ಶೋಧ

ಸೇಡಂ : ತಮ್ಮ ಬೌದ್ಧಿಕ ವಿಕಾಸದಲ್ಲಿಯೇ ಮಹಿಳೆಯರ ಅಸ್ತಿತ್ವವಿದೆ ಎಂದು ಕೇಂದ್ರ ಸಾಹಿತ್ಯ ಅಕಾಡೆಮಿ ಸದಸ್ಯ ಡಾ.ಬಸವರಾಜ ಸಾದರ ಹೇಳಿದರು.…

5 hours ago

ನಿಧನ ವಾರ್ತೆ; ಆನಂದಪ್ಪ ಉಮ್ಮನಗೋಳ್

ಕಲಬುರಗಿ: ಅಫಜಲಪುರ ತಾಲೂಕಿನ ಸೊನ್ನ ಗ್ರಾಮದ ನಿವಾಸಿ ಆನಂದಪ್ಪ ಶರಣಪ್ಪ ಉಮ್ಮನಗೋಳ್(೮೦) ಅವರು ಸೋಮವಾರ ಬೆಳಗ್ಗೆ ವಯೋಸಹಜವಾಗಿ ನಿಧನರಾದರು. ಮೃತರು…

7 hours ago

ಸಂಘಸಂಸ್ಥೆಗಳು ಸಮಾಜಕ್ಕೆ ನೀಡಿದ ಕೋಡುಗೆ ಅಪಾರ ಪಾಳಾಶ್ರೀ

ಕಲಬುರಗಿ: ಸಂಘಸಂಸ್ಥೆಗಳು ಸಾದಕರನ್ನು ಗುರುತಿಸಿ ಪ್ರಶಸ್ತಿ ಪುರಸ್ಕಾರಗಳನ್ನು ನೀಡುವ ಮುಖಾಂತರಾ ಅವರ ಜವಾಬ್ದಾರಿ ಹೆಚ್ಚಿಸುವುದರಜೋತೆಯಲ್ಲಿ ಸಾಮಾಜಿಕ ಕೆಲಸಗಳನ್ನು ಮಾಡುತ್ತಿರುವುದು ಸಮಾಜಕ್ಕೆ…

7 hours ago

ಹೊಸ ಹೊಸ ಉದ್ಯೋಗ ಸೃಷ್ಟಿಸಲು HKE ಸಂಸ್ಥೆ ಕಾರ್ಯ ಶ್ಲಾಘನೀಯ

ಕಲಬುರಗಿ; ಹೈದ್ರಾಬಾದ್- ಕರ್ನಾಟಕ ಶಿಕ್ಷಣ ಸಂಸ್ಥೆಯ PDACE ಸಭಾಂಗಣದಲ್ಲಿ ನಡೆದ ಕಲ್ಯಾಣ ಕರ್ನಾಟಕ startup conclave ಇಂದು ದಕ್ಷಣ ಶಾಸಕ…

7 hours ago

ಸ್ವಾಭಿಮಾನದ ಬದುಕಿಗೆ ಸಂಗೀತ ಪೂರಕ

ಕಲಬುರಗಿ : ಒತ್ತಡದ ಬದುಕಿನಲ್ಲಿ ಸಂಗೀತ ಆಲಿಸುವುದರಿಂದ ಮಾನಸಿಕ ನೆಮ್ಮದಿ, ಶಾಂತಿ ದೊರೆಯಲು ಸಾಧ್ಯವಿದೆ. ಅನೇಕ ಜನ ಸಂಗೀತ ಕಲಾವಿದರಿಂದು…

8 hours ago