ಕಲಬುರಗಿ: ಮಹಾಮಾರಿ ಕೊರೋನಾ ನಿಯಂತ್ರಣಕ್ಕಾಗಿ ಹೋರಾಡುತ್ತಿರುವ ಸೇವಾ ಕಾರ್ಯಕರ್ತರಿಗೆ ಬಿಜೆಪಿ ಯುವ ಮೋರ್ಚಾ ಜಿಲ್ಲಾ ಉಪಾಧ್ಯಕ್ಷ ವೀರೇಂದ್ರ ಪಾಟೀಲ್ ರಾಯಕೋಡ್ ಮತ್ತು ಸಮಾಜ ಸೇವಕ ಪೃಥ್ವಿ ಅವರು ವಿನೂತನ ರೀತಿಯ ಗುಣಮಟ್ಟದ ಮಾಸ್ಕ್‌ಗಳನ್ನು (ಫೇಸ್ ಶೀಲ್ಡ್) ಗುರುವಾರ ವಿತರಿಸಿದರು.
ಮಹಾಮಾರಿ ಕೊರೋನಾ ವಿರುದ್ಧ ತಮ್ಮ ಪ್ರಾಣ ಒತ್ತೆ ಇಟ್ಟು ಹೋರಾಡುತ್ತಿರುವ ಪೋಲಿಸರು, ವೈದ್ಯರು ಹಾಗೂ ಪೌರ ಕಾರ್ಮಿಕರಿಗೆ ಗುಣಮಟ್ಟದ ಮಾಸ್ಕ್‌ಗಳನ್ನು ವಿತರಿಸಲಾಯಿತು.
ಈ ಸಂದರ್ಭದಲ್ಲಿ ಡಾ. ಬಸವರಾಜ್ ಪಾಟೀಲ್ ರಾಯಕೋಡ್ ಅವರು ಮಾತನಾಡಿ, ಈಗಾಗಲೇ ೧೦೦ ಮುಖ ಕವಚಗಳನ್ನು ತಯಾರಿಸಲಾಗಿದೆ. ಒಂದು ಮುಖ ಕವಚಕ್ಕೆ ೧೦೦ರೂ.ಗಳು ವೆಚ್ಚ ಆಗುತ್ತಿದ್ದು, ದಿನಕ್ಕೆ ೪೦ ಮಾಸ್ಕ್‌ಗಳನ್ನು ತಯಾರಿಸಲಾಗುತ್ತಿದೆ. ತಯಾರಿಸಲಾದ ಮಾಸ್ಕ್‌ಗಳಲ್ಲಿ ಬಸವೇಶ್ವರ್ ಆಸ್ಪತ್ರೆಗೆ ೪೦ ಹಾಗೂ ಪೋಲಿಸ್ ಇಲಾಖೆಗೆ ೫೦ ಮಾಕ್‌ಗಳನ್ನು ವಿತರಿಸಲಾಗಿದೆ. ಮುಂದಿನ ದಿನಗಳಲ್ಲಿ ಪೌರ ಕಾರ್ಮಿಕರಿಗೂ ಮಾಸ್ಕ್‌ಗಳನ್ನು ವಿತರಿಸಲಾಗುವುದು ಎಂದರು.
ಈ ಸಂದರ್ಭದಲ್ಲಿ ನಗರ ಪೋಲಿಸ್ ಆಯುಕ್ತ ಎನ್. ಸತೀಶಕುಮಾರ್ ಅವರು ಉಪಸ್ಥಿತರಿದ್ದು, ಸೇವಾ ಕಾರ್ಯಕ್ಕೆ ಮೆಚ್ಚುಗೆ ವ್ಯಕ್ತಪಡಿಸಿದರು. ಕೊರೋನಾ ಸೋಂಕು ನಿರ್ಮೂಲನೆಯಾಗುವವರೆಗೂ ಜಾಗೃತಿ ಮೂಡಿಸಲಾಗುವುದು ಎಂದು ವೀರೇಂದ್ರ ಪಾಟೀಲ್ ರಾಯಕೋಡ್ ಅವರು ಇದೇ ಸಂದರ್ಭದಲ್ಲಿ ಹೇಳಿದರು.
ಕಲಬುರಗಿ: ಕಲಬುರಗಿ ದಕ್ಷಿಣ ಮತಕ್ಷೇತ್ರದ ಶಾಸಕ ಅಲ್ಲಮಪ್ರಭು ಪಾಟೀಲ ಅವರು ಶನಿವಾರ ಸಂಜೆ ಕ್ಷೇತ್ರದ ಭೀಮಳ್ಳಿ ಗ್ರಾಮದ ರೈತರ ಹೊಲಗಳಿಗೆ…
ಕಲಬುರಗಿ: ಕಷ್ಟಗಳು ಬಂದಾಗ ಕುಗ್ಗದೆ, ಆ ಕಷ್ಟಗಳನ್ನು ಸವಾಲಾಗಿ ಸ್ವೀಕರಿಸಿ ಮೇಲೇಳಬೇಕು ಎಂದು ತಾಜ್ ನಗರದ ಆರೋಗ್ಯ ಕೇಂದ್ರದ ಹಿರಿಯ…
ಪರೋಪಕಾರ ಸೇವೆಯಿಂದ ಆತ್ಮತೃಪ್ತಿ: ಹಿರೇಮಠ ಕಲಬುರಗಿ: ನಗರ ಹೊರವಲಯದ ಸೈಯದ್ ಚಿಂಚೋಳಿ ರಸ್ತೆಯ ಬಳಿ ಇರುವ ಕೆವಿಪಿ ದಣ್ಣೂರ ಪಿಯು…
ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…
ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…
ಚಿಂಚೋಳಿ: ಕಾನೂನು ತೊಡಕಿನಿಂದ ಸ್ಥಗಿತಗೊಂಡ ಸಿದ್ದಸಿರಿ ಎಥೆನಾಲ್ ಕಾರ್ಖಾನೆ ಪ್ರಾರಂಭಕ್ಕೆ ಕರ್ನಾಟಕ ಮಾಲಿನ್ಯ ನಿಯಂತ್ರಣ ಮಂಡಳಿ ಅನುಮತಿ ನೀಡಬೇಕೆಂದು ಒತ್ತಾಯಿಸಿ…