ಬೆಂಗಳೂರು: ಕರ್ನಾಟಕದಲ್ಲಿ ೧೮ ಜಿಲ್ಲೆಗಳನ್ನು ಕೊರೋನಾ ಹಾಟ್‌ಸ್ಪಾಟ್ ಕೇಂದ್ರಗಳು ಎಂದು ಗುರುತಿಸಲಾಗಿದೆ. ಆದ್ದರಿಂದ ಈ ಎಲ್ಲ ಜಿಲ್ಲೆಗಳಲ್ಲಿಯೂ ಲಾಕ್‌ಡೌನ್ ಮುಂದುವರೆಸುವ ಕುರಿತೂ ಸಚಿವ ಸಂಪುಟ ಸಭೆಯಲ್ಲಿ ಚರ್ಚೆಯಾಗಿದೆ. ಪ್ರಧಾನಿ ನರೇಂದ್ರ ಮೋದಿ ಅವರು ಈ ಕುರಿತು ಏಪ್ರಿಲ್ ೧೧ರಂದು ಕೇಂದ್ರದ ನಿರ್ಧಾರ ಪ್ರಕಟಿಸುತ್ತಾರೆ. ಅದಕ್ಕಾಗಿ ಕಾಯುತ್ತಿದ್ದೇವೆ. ನಂತರ ರಾಜ್ಯ ಸರ್ಕಾರವು ಅಂತಿಮ ನಿರ್ಧಾರ ಕೈಗೊಳ್ಳಲಿದೆ ಎಂದು ರಾಜ್ಯದ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ಬಿ. ಶ್ರೀರಾಮಲು ಅವರು ಇಲ್ಲಿ ಹೇಳಿದರು.
ಗುರುವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಪ್ರಧಾನಿ ನರೇಂದ್ರ ಮೋದಿ ಅವರು ಏನೇ ನಿರ್ಧಾರ ಪ್ರಕಟಿಸಿದರೂ ರಾಜ್ಯದ ನಾಲ್ಕು ಜಿಲ್ಲೆಗಳಲ್ಲಿ ಮಾತ್ರ ಲಾಕ್‌ಡೌನ್ ಮುಂದುವರಿಸಬೇಕೆಂದು ಸಚಿವ ಸಂಪುಟ ಸಭೆಯಲ್ಲಿ ತೀರ್ಮಾನ ಮಾಡಲಾಗಿದೆ ಎಂದರು.
ರಾಜ್ಯದ ೧೭ ಜಿಲ್ಲೆಗಳಿಗೆ ಈಗಾಗಲೇ ಭೇಟಿ ನೀಡಿದ್ದೇನೆ. ಬೇರೆ ರಾಜ್ಯಗಳಿಗೆ ಹೋಲಿಸಿದಲ್ಲಿ ನಮ್ಮ ಕರ್ನಾಟಕ ಸುಧಾರಿಸಿದೆ. ಏನೇ ಆಗಲಿ ರಾಜ್ಯದ ನಾಲ್ಕು ಜಿಲ್ಲೆಗಳಾದ ಮೈಸೂರು, ಬೆಂಗಳೂರು, ಕಲಬುರಗಿ ಮತ್ತು ಬೀದರ್‌ನಲ್ಲಿ ಲಾಕ್‌ಡೌನ್ ಮುಂದುವರೆಸುವ ಸಾಧ್ಯತೆ ಇದೆ ಎಂದು ಅವರು ಹೇಳಿದರು.
ಸಧ್ಯ ೫೦೦೦ ರ‍್ಯಾಪಿಡ್ ಕಿಟ್‌ಗಳನ್ನು ಖರೀದಿ ಮಾಡಲಾಗಿದೆ. ರ‍್ಯಾಪಿಡ್ ಪರೀಕ್ಷೆಯನ್ನು ಆರಂಭಿಸಲಾಗಿದೆ. ಇಡೀ ರಾಜ್ಯದಲ್ಲಿ ನಾಲ್ಕು ಜಿಲ್ಲೆಗಳು ಮಾತ್ರ ಡೇಂಜರ್ ಎನ್ನಬಹುದು. ನಮ್ಮ ನಿರ್ಧಾರವೂ ಪ್ರಧಾನಿಯವರ ಆಧೆಶದ ಮೇಲೆ ನಿಂತಿದೆ. ಮುಂದೆಯೂ ರಾಜ್ಯದ ನಾಲ್ಕು ಡೇಂಜರ್ ಜೋನ್ ಜಿಲ್ಲೆಗಳಲ್ಲಿ ಲಾಕ್‌ಡೌನ್ ಮುಂದುವರೆಸುವ ಕುರಿತು ಅಭಿಪ್ರಾಯ ಕೇಳಿಬಂದಿದೆ ಎಂದು ಅವರು ತಿಳಿಸಿದರು.
ಕಲಬುರಗಿ: ಕಲಬುರಗಿ ದಕ್ಷಿಣ ಮತಕ್ಷೇತ್ರದ ಶಾಸಕ ಅಲ್ಲಮಪ್ರಭು ಪಾಟೀಲ ಅವರು ಶನಿವಾರ ಸಂಜೆ ಕ್ಷೇತ್ರದ ಭೀಮಳ್ಳಿ ಗ್ರಾಮದ ರೈತರ ಹೊಲಗಳಿಗೆ…
ಕಲಬುರಗಿ: ಕಷ್ಟಗಳು ಬಂದಾಗ ಕುಗ್ಗದೆ, ಆ ಕಷ್ಟಗಳನ್ನು ಸವಾಲಾಗಿ ಸ್ವೀಕರಿಸಿ ಮೇಲೇಳಬೇಕು ಎಂದು ತಾಜ್ ನಗರದ ಆರೋಗ್ಯ ಕೇಂದ್ರದ ಹಿರಿಯ…
ಪರೋಪಕಾರ ಸೇವೆಯಿಂದ ಆತ್ಮತೃಪ್ತಿ: ಹಿರೇಮಠ ಕಲಬುರಗಿ: ನಗರ ಹೊರವಲಯದ ಸೈಯದ್ ಚಿಂಚೋಳಿ ರಸ್ತೆಯ ಬಳಿ ಇರುವ ಕೆವಿಪಿ ದಣ್ಣೂರ ಪಿಯು…
ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…
ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…
ಚಿಂಚೋಳಿ: ಕಾನೂನು ತೊಡಕಿನಿಂದ ಸ್ಥಗಿತಗೊಂಡ ಸಿದ್ದಸಿರಿ ಎಥೆನಾಲ್ ಕಾರ್ಖಾನೆ ಪ್ರಾರಂಭಕ್ಕೆ ಕರ್ನಾಟಕ ಮಾಲಿನ್ಯ ನಿಯಂತ್ರಣ ಮಂಡಳಿ ಅನುಮತಿ ನೀಡಬೇಕೆಂದು ಒತ್ತಾಯಿಸಿ…