ಕಲಬರುಗಿ: ಮನುಕುಲಕ್ಕೆ ಕಂಟಕವಾಗಿರುವ ಕೂರೋನಾ ವೈರಸ್ ತಡೆಗಟ್ಟುವ ನಿಟ್ಟಿನಲ್ಲಿ ಮತ್ತು ರೋಗದ ಕುರಿತು ಜಾಗೃತಿ ಮೂಡಿಸುವಲ್ಲಿ ಹಗಲಿರುಳು ಶ್ರಮಿಸುತ್ತಿರುವ ವೈದ್ಯರು ಮತ್ತು ವೈದ್ಯಕೀಯ ಸಿಬ್ಬಂದಿ ವರ್ಗದವರು ಪೌರಕಾರ್ಮಿಕರು ಮತ್ತು ಪೊಲೀಸ್ ಇಲಾಖೆಯವರು ಹಾಗೂ ಮಾಧ್ಯಮದವರ ಕಾರ್ಯ ನಿಜಕ್ಕೂ ಶ್ಲಾಘನೀಯವಾಗಿದೆ ಎಂದು ಶ್ರೀನಿವಾಸ ಸರಡಗಿಯ ಶ್ರೀ ಗುರು ಚಿಕ್ಕ ವೀರೇಶ್ವರ ಸಂಸ್ಥಾನ ಹಿರೇಮಠದ ಪೂಜ್ಯ ಶ್ರೀ ರೇವಣಸಿದ್ದ ಶಿವಾಚಾರ್ಯ ಮಹಾಸ್ವಾಮಿಗಳು ನುಡಿದರು.
ಸರ್ಮಥ ಗೃಹ ಉದ್ಯೋಗ ಸಂಸ್ಥೆ ವತಿಯಿಂದ ಕಲಬರುಗಿ ನಗರದ ಸರ್ದಾರ್ ವಲ್ಲಭಭಾಯ್ ಪಟೇಲ್ ವೃತ್ತದಲ್ಲಿ ಕರ್ತವ್ಯದಲ್ಲಿದ್ದ ಪೋಲಿಸ್ ಸಿಬ್ಬಂದಿವರಿಗೆ ಆಯೋಜಿಸಿದ ಬೆಳಗಿನ ಉಪಹಾರ ವಿತರಣೆ ಮಾಡಿ ಮಾತಾನಾಡಿದ ಅವರು ಇಡೀ ವಿಶ್ವವೇ ಈ ವೈರಸ್ಗೆ ತತ್ತರಿಸಿ ಹೋಗಿದೆ ರೋಗ ಹತೋಟಿಗೆ ತರುವ ನಿಟ್ಟಿನಲ್ಲಿ ಕೇಂದ್ರ ಮತ್ತು ರಾಜ್ಯ ಸರಕಾರಗಳು ಆರ್ಹನಶಿ ಶ್ರಮಿಸುತ್ತಿವೆ ಸರ್ಕಾರ ಸೂಚಿಸಿದ ಮಾರ್ಗ ಸೂಚಿಸುವಂತೆ ಜನತೆ ತುರ್ತು ಸಂದರ್ಭಗಳಲ್ಲಿ ಹೊರಗಡೆ ಓಡಾಡುವುದನ್ನು ಬಿಟ್ಟು ಮನೆಯಲ್ಲಿಯೇ ಇರಬೇಕು ಮತ್ತು ಸಾಮಾಜಿಕ ಅಂತರ ಕಾಪಾಡಿಕೊಳ್ಳಬೇಕು ಎಂದು ಹೇಳಿದರು
ಮನೆ ಮಠ ಬಿಟ್ಟು ನಮ್ಮ ಸೇವೆಯಲ್ಲಿ ತೊಡಗಿಸಿಕೊಂಡಿರುವ ವೈದ್ಯರು ಮತ್ತು ವೈದ್ಯಕೀಯ ಸಿಬ್ಬಂದಿ ವರ್ಗದವರ ಪೌರ ಕಾರ್ಮಿಕರ ಪೋಲಿಸ್ ಸಿಬ್ಬಂದಿಗಳು ಮತ್ತು ಮಾಧ್ಯಮದವರ ಸೇವೆ ಸಮಾಜ ಎಂದಿಗೂ ಮರೆಯುವುದಿಲ್ಲ ಎಂದು ಪೂಜ್ಯರು ಹೇಳಿದರು
ಈ ಸಂದರ್ಭದಲ್ಲಿ ಸಂಸ್ಥೆಯ ಅಧ್ಯಕ್ಷೆ ಶ್ರೀಮತಿ ಅನ್ನಪೂರ್ಣ ಆರ್. ಸಂಗೋಳಗಿ.ರಾಚಣ್ಣಾ ಸಂಗಳೋಗಿ. ನಾಗಲಿಂಗಯ್ಯ ಮಠಪತಿ. ಸುರೇಶ ತಂಗಾ.ನಾಗರಾಜ ಸುತಾರ ಸೇರಿದಂತೆ ಅನೇಕರು ಉಪಸ್ಥಿತರಿದ್ದರು
ಕಲಬುರಗಿ: ಕಲಬುರಗಿ ದಕ್ಷಿಣ ಮತಕ್ಷೇತ್ರದ ಶಾಸಕ ಅಲ್ಲಮಪ್ರಭು ಪಾಟೀಲ ಅವರು ಶನಿವಾರ ಸಂಜೆ ಕ್ಷೇತ್ರದ ಭೀಮಳ್ಳಿ ಗ್ರಾಮದ ರೈತರ ಹೊಲಗಳಿಗೆ…
ಕಲಬುರಗಿ: ಕಷ್ಟಗಳು ಬಂದಾಗ ಕುಗ್ಗದೆ, ಆ ಕಷ್ಟಗಳನ್ನು ಸವಾಲಾಗಿ ಸ್ವೀಕರಿಸಿ ಮೇಲೇಳಬೇಕು ಎಂದು ತಾಜ್ ನಗರದ ಆರೋಗ್ಯ ಕೇಂದ್ರದ ಹಿರಿಯ…
ಪರೋಪಕಾರ ಸೇವೆಯಿಂದ ಆತ್ಮತೃಪ್ತಿ: ಹಿರೇಮಠ ಕಲಬುರಗಿ: ನಗರ ಹೊರವಲಯದ ಸೈಯದ್ ಚಿಂಚೋಳಿ ರಸ್ತೆಯ ಬಳಿ ಇರುವ ಕೆವಿಪಿ ದಣ್ಣೂರ ಪಿಯು…
ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…
ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…
ಚಿಂಚೋಳಿ: ಕಾನೂನು ತೊಡಕಿನಿಂದ ಸ್ಥಗಿತಗೊಂಡ ಸಿದ್ದಸಿರಿ ಎಥೆನಾಲ್ ಕಾರ್ಖಾನೆ ಪ್ರಾರಂಭಕ್ಕೆ ಕರ್ನಾಟಕ ಮಾಲಿನ್ಯ ನಿಯಂತ್ರಣ ಮಂಡಳಿ ಅನುಮತಿ ನೀಡಬೇಕೆಂದು ಒತ್ತಾಯಿಸಿ…