ಕಲಬುರಗಿ: ಲಾಕ್ ಡೌನ್ ಪರಿಣಾಮ ಯಾರು ಅನ್ನಕ್ಕಾಗಿ ಹಸಿವಿನಿಂದ ಬಳಲಬಾರದು. ಜಿಲ್ಲೆಯಲ್ಲಿ ಹೊಸದಾಗಿ ಪಡಿತರ ಚೀಟಿಗಾಗಿ ಅರ್ಜಿ ಸಲ್ಲಿಸಿದ ೧೫೭೯೩ ಅರ್ಜಿದಾರರಿಗೆ ತಾತ್ಕಲಿಕ ಪಡಿತರ ಚೀಟಿ ನೀಡಿ ಕೊರೋನಾ ಸಮಸ್ಯೆ ಮುಗಿಯುವರರೆಗೂ ಅಹಾರಧಾನ್ಯ ನೀಡಬೇಕು ಎಂದು ರಾಜ್ಯದ ಉಪಮುಖ್ಯಮಂತ್ರಿಗಳು, ಲೊಕೋಪಯೋಗಿ ಮತ್ತು ಸಮಾಜ ಕಲ್ಯಾಣ ಹಾಗೂ ಕಲಬುರಗಿ ಜಿಲ್ಲಾ ಉಸ್ತುವಾರಿ ಸಚಿವ ಗೋವಿಂದ ಎಂ. ಕಾರಜೋಳ ಅವರು ಆಹಾರ ಇಲಾಖೆಯ ಜಂಟಿ ನಿರ್ದೇಶಕರಿಗೆ ಸೂಚಿಸಿದರು.
ಶನಿವಾರ ಇಲ್ಲಿನ ಜಿಲ್ಲಾಧಿಕಾರಿಗಳ ಸಭಾಂಗಣದಲ್ಲಿ ಜಿಲ್ಲಾ ಮಟ್ಟದ ಅಧಿಕಾರಿಗಳ ಜೊತೆಗೆ ಕೊರೋನಾ ಸೋಂಕು ತಡೆಗಟ್ಟುವ ನಿಟ್ಟಿನಲ್ಲಿ ಕೈಗೊಂಡ ಕ್ರಮಗಳ ಕುರಿತು ಮತ್ತು ಕೊರೋನಾ ಸೋಂಕಿನ ಕಾರಣ ಸಾರ್ವಜನಿಕರಿಗೆ ಆಗುತ್ತಿರುವ ತೊಂದರೆ ಕುರಿತು ಚರ್ಚೆ ನಡೆಸಿದ ಸಭೆಯಲ್ಲಿ ಮಾತನಾಡುತ್ತ, ತಾತ್ಕಲಿಕ ಪಡಿತರ ಚೀಟಿಯನ್ನು ಜಿಲ್ಲಾಧಿಕಾರಿಗಳ ಅನುಮೋದನೆ ಪಡೆದು ವಿತರಿಸಬೇಕು ಎಂದರು.
ಇನ್ನೂ ಜಿಲ್ಲೆಯಲ್ಲಿ ಪಡಿತರ ಚೀಟಿ ಇಲ್ಲದ ಜೋಪಡಿ, ಟೆಂಟ್ ಹಾಕಿಕೊಂಡು ಅಲ್ಲಲ್ಲಿ ಸುಮಾರು ೨೪೦೦ ಅಲೆಮಾರಿ ಕುಟುಂಬಗಳು ವಾಸಿಸುತ್ತಿದ್ದು, ಅವರಿಗೂ ಸಹ ಕೊರೋನಾ ಸಮಸ್ಯೆ ಮುಗಿಯುವವರೆಗೂ ಆಹರಧಾನ್ಯ ವಿತರಣೆಗೆ ಕ್ರಮ ವಹಿಸಬೇಕು ಎಂದು ಜಿಲ್ಲಾ ಉಸ್ತುವಾರಿ ಸಚಿವರು ಅಧಿಕಾರಿಗಳಿಗೆ ನಿರ್ದೇಶನ ನೀಡಿದರು.
ಸಭೆಯಲ್ಲಿ ಜಿಲ್ಲಾ ಪಂಚಾಯತ್ ಅಧ್ಯಕ್ಷೆ ಸುವರ್ಣಾ ಹಣಮಂತರಾಯ ಮಾಲಾಜಿ, ಲೋಕಸಭಾ ಸದಸ್ಯ ಡಾ.ಉಮೇಶ ಜಾಧವ, ಕರ್ನಾಟಕ ರಾಜ್ಯ ಮಹಿಳಾ ಅಭಿವೃದ್ಧಿ ನಿಗಮದ ಅಧ್ಯಕ್ಷೆ ಶಶಿಕಲಾ ವಿ. ಟೆಂಗಳಿ, ಶಾಸಕರಾದ ಸುಭಾ? ಗುತ್ತೇದಾರ್, ಎಂ.ವೈ. ಪಾಟೀಲ, ಬಸವರಾಜ ಮತ್ತಿಮೂಡ, ಕನೀಜ್ ಪಾತಿಮಾ, ಅವಿನಾಶ್ ಜಾಧವ್, ವಿಧಾನ ಪರಿ?ತ್ ಸದಸ್ಯರಾದ ಬಿ.ಜಿ. ಪಾಟೀಲ್, ತಿಪ್ಪಣಪ್ಪ ಕಮಕನೂರ, ಕಲಬುರಗಿ ನಗರ ಪೊಲೀಸ್ ಆಯುಕ್ತ ಎನ್. ಸತೀಶ್ ಕುಮಾರ್, ಜಿಲ್ಲಾ ಪಂಚಾಯತ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಡಾ.ಪಿ.ರಾಜಾ, ಜಿಲ್ಲಾ ಪೊಲೀಸ್ ವರಿ?ಧಿಕಾರಿ ಯಡಾ ಮಾರ್ಟಿನ್ ಮಾರ್ಬನ್ಯಾಂಗ್, ಡಿಸಿಪಿ ಕಿಶೋರ ಬಾಬು ಸೇರಿದಂತೆ ಜಿಲ್ಲಾ ಮಟ್ಟದ ಅಧಿಕಾರಿಗಳು ಇದ್ದರು.