ಬಿಸಿ ಬಿಸಿ ಸುದ್ದಿ

ಹೊಸದಾಗಿ ಪಡಿತರ ಚೀಟಿಗೆ ಅರ್ಜಿ ಸಲ್ಲಿಸಿದವರೆಲ್ಲರಿಗೂ ಸಿಗಲಿದೆ ಆಹಾರ ಧಾನ್ಯ: ಸಚಿವ ಕಾರಜೋಳ

ಕಲಬುರಗಿ: ಲಾಕ್ ಡೌನ್ ಪರಿಣಾಮ ಯಾರು ಅನ್ನಕ್ಕಾಗಿ ಹಸಿವಿನಿಂದ ಬಳಲಬಾರದು. ಜಿಲ್ಲೆಯಲ್ಲಿ ಹೊಸದಾಗಿ ಪಡಿತರ ಚೀಟಿಗಾಗಿ ಅರ್ಜಿ ಸಲ್ಲಿಸಿದ ೧೫೭೯೩ ಅರ್ಜಿದಾರರಿಗೆ ತಾತ್ಕಲಿಕ ಪಡಿತರ ಚೀಟಿ ನೀಡಿ ಕೊರೋನಾ ಸಮಸ್ಯೆ ಮುಗಿಯುವರರೆಗೂ ಅಹಾರಧಾನ್ಯ ನೀಡಬೇಕು ಎಂದು ರಾಜ್ಯದ ಉಪಮುಖ್ಯಮಂತ್ರಿಗಳು, ಲೊಕೋಪಯೋಗಿ ಮತ್ತು ಸಮಾಜ ಕಲ್ಯಾಣ ಹಾಗೂ ಕಲಬುರಗಿ ಜಿಲ್ಲಾ ಉಸ್ತುವಾರಿ ಸಚಿವ ಗೋವಿಂದ ಎಂ. ಕಾರಜೋಳ ಅವರು ಆಹಾರ ಇಲಾಖೆಯ ಜಂಟಿ ನಿರ್ದೇಶಕರಿಗೆ ಸೂಚಿಸಿದರು.

ಶನಿವಾರ ಇಲ್ಲಿನ ಜಿಲ್ಲಾಧಿಕಾರಿಗಳ ಸಭಾಂಗಣದಲ್ಲಿ ಜಿಲ್ಲಾ ಮಟ್ಟದ ಅಧಿಕಾರಿಗಳ ಜೊತೆಗೆ ಕೊರೋನಾ ಸೋಂಕು ತಡೆಗಟ್ಟುವ ನಿಟ್ಟಿನಲ್ಲಿ ಕೈಗೊಂಡ ಕ್ರಮಗಳ ಕುರಿತು ಮತ್ತು ಕೊರೋನಾ ಸೋಂಕಿನ ಕಾರಣ ಸಾರ್ವಜನಿಕರಿಗೆ ಆಗುತ್ತಿರುವ ತೊಂದರೆ ಕುರಿತು ಚರ್ಚೆ ನಡೆಸಿದ ಸಭೆಯಲ್ಲಿ ಮಾತನಾಡುತ್ತ, ತಾತ್ಕಲಿಕ ಪಡಿತರ ಚೀಟಿಯನ್ನು ಜಿಲ್ಲಾಧಿಕಾರಿಗಳ ಅನುಮೋದನೆ ಪಡೆದು ವಿತರಿಸಬೇಕು ಎಂದರು.

ಇನ್ನೂ ಜಿಲ್ಲೆಯಲ್ಲಿ ಪಡಿತರ ಚೀಟಿ ಇಲ್ಲದ ಜೋಪಡಿ, ಟೆಂಟ್ ಹಾಕಿಕೊಂಡು ಅಲ್ಲಲ್ಲಿ ಸುಮಾರು ೨೪೦೦ ಅಲೆಮಾರಿ ಕುಟುಂಬಗಳು ವಾಸಿಸುತ್ತಿದ್ದು, ಅವರಿಗೂ ಸಹ ಕೊರೋನಾ ಸಮಸ್ಯೆ ಮುಗಿಯುವವರೆಗೂ ಆಹರಧಾನ್ಯ ವಿತರಣೆಗೆ ಕ್ರಮ ವಹಿಸಬೇಕು ಎಂದು ಜಿಲ್ಲಾ ಉಸ್ತುವಾರಿ ಸಚಿವರು ಅಧಿಕಾರಿಗಳಿಗೆ ನಿರ್ದೇಶನ ನೀಡಿದರು.

ಸಭೆಯಲ್ಲಿ ಜಿಲ್ಲಾ ಪಂಚಾಯತ್ ಅಧ್ಯಕ್ಷೆ ಸುವರ್ಣಾ ಹಣಮಂತರಾಯ ಮಾಲಾಜಿ, ಲೋಕಸಭಾ ಸದಸ್ಯ ಡಾ.ಉಮೇಶ ಜಾಧವ, ಕರ್ನಾಟಕ ರಾಜ್ಯ ಮಹಿಳಾ ಅಭಿವೃದ್ಧಿ ನಿಗಮದ ಅಧ್ಯಕ್ಷೆ ಶಶಿಕಲಾ ವಿ. ಟೆಂಗಳಿ, ಶಾಸಕರಾದ ಸುಭಾ? ಗುತ್ತೇದಾರ್, ಎಂ.ವೈ. ಪಾಟೀಲ, ಬಸವರಾಜ ಮತ್ತಿಮೂಡ, ಕನೀಜ್ ಪಾತಿಮಾ, ಅವಿನಾಶ್ ಜಾಧವ್, ವಿಧಾನ ಪರಿ?ತ್ ಸದಸ್ಯರಾದ ಬಿ.ಜಿ. ಪಾಟೀಲ್, ತಿಪ್ಪಣಪ್ಪ ಕಮಕನೂರ, ಕಲಬುರಗಿ ನಗರ ಪೊಲೀಸ್ ಆಯುಕ್ತ ಎನ್. ಸತೀಶ್ ಕುಮಾರ್,  ಜಿಲ್ಲಾ ಪಂಚಾಯತ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಡಾ.ಪಿ.ರಾಜಾ, ಜಿಲ್ಲಾ ಪೊಲೀಸ್ ವರಿ?ಧಿಕಾರಿ ಯಡಾ ಮಾರ್ಟಿನ್ ಮಾರ್ಬನ್ಯಾಂಗ್, ಡಿಸಿಪಿ ಕಿಶೋರ ಬಾಬು ಸೇರಿದಂತೆ ಜಿಲ್ಲಾ ಮಟ್ಟದ ಅಧಿಕಾರಿಗಳು ಇದ್ದರು.

emedialine

Recent Posts

ಮಹಿಳಾ ಸಹಭಾಗಿತ್ವ ಇಲ್ಲದೆ ದೇಶದ ಅಭಿವೃದ್ಧಿ ಅಸಾಧ್ಯ: ಮಾತೋಶ್ರೀ ಡಾ. ಅವ್ವಾಜಿ

ಕಲಬುರಗಿ: ಮಹಿಳೆಯರ ಸಹಭಾಗಿತ್ವ ಮತ್ತು ಕೊಡುಗೆಯಿಲ್ಲದೆ ದೇಶದ ಸರ್ವಾಂಗೀಣ ಅಭಿವೃದ್ಧಿ ಅಸಾಧ್ಯ ಎಂದು ಶರಣಬಸವೇಶ್ವರ ವಿದ್ಯಾವರ್ಧಕ ಸಂಘದ ಅಧ್ಯಕ್ಷೆ ಮಾತೋಶ್ರೀ…

4 hours ago

ತೊಗರಿ ಬೆಳೆ‌ ಹಾನಿ ಪ್ರದೇಶ ವೀಕ್ಷಿಸಿದ ಶಾಸಕ ಅಲ್ಲಮಪ್ರಭು ಪಾಟೀಲ

ಕಲಬುರಗಿ: ಕಲಬುರಗಿ ದಕ್ಷಿಣ ಮತಕ್ಷೇತ್ರದ ಶಾಸಕ ಅಲ್ಲಮಪ್ರಭು ಪಾಟೀಲ ಅವರು ಶನಿವಾರ ಸಂಜೆ ಕ್ಷೇತ್ರದ ಭೀಮಳ್ಳಿ ಗ್ರಾಮದ ರೈತರ ಹೊಲಗಳಿಗೆ…

14 hours ago

ಕಷ್ಟಗಳಿಗೆ ಕುಗ್ಗದೇ ಸವಾಲಾಗಿ ಸ್ವಿಕರಿಸಿ

ಕಲಬುರಗಿ: ಕಷ್ಟಗಳು ಬಂದಾಗ ಕುಗ್ಗದೆ, ಆ ಕಷ್ಟಗಳನ್ನು ಸವಾಲಾಗಿ ಸ್ವೀಕರಿಸಿ ಮೇಲೇಳಬೇಕು ಎಂದು ತಾಜ್ ನಗರದ ಆರೋಗ್ಯ ಕೇಂದ್ರದ ಹಿರಿಯ…

14 hours ago

ಕಲಬುರಗಿ: ಹಾಸ್ಯ ಕಲಾವಿದ ರೇವಣಸಿದ್ಧ ಸ್ವಾಮಿ ದಂಪತಿಗೆ ಗೆಳೆಯರ ಬಳಗದಿಂದ ಸತ್ಕರಿಸಲಾಯಿತು.

ಪರೋಪಕಾರ ಸೇವೆಯಿಂದ ಆತ್ಮತೃಪ್ತಿ: ಹಿರೇಮಠ ಕಲಬುರಗಿ: ನಗರ ಹೊರವಲಯದ ಸೈಯದ್ ಚಿಂಚೋಳಿ ರಸ್ತೆಯ ಬಳಿ ಇರುವ ಕೆವಿಪಿ ದಣ್ಣೂರ ಪಿಯು…

14 hours ago

ಸಾವಿರ ಸೀರೆ ವಿತರಿಸಿ ಸಚಿವ ಪ್ರಿಯಾಂಕ್ ಜನ್ಮದಿನ ಆಚರಣೆ

  ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…

1 day ago

ಮೂರೂ ಕ್ಷೇತ್ರದಲ್ಲಿ ಕಾಂಗ್ರೆಸ್ ಗೆಲುವು: ಕಾರ್ಯಕರ್ತರಿಂದ ವಿಜಯೋತ್ಸವ

ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…

1 day ago