ಚೆನ್ನೈ: ತಮಿಳುನಾಡಿನ ತಿರುಪ್ಪರನಕುಂಡ್ರಂ ವಿಧಾನಸಭೆ ಕ್ಷೇತ್ರದಲ್ಲಿ ಕಮಲ್ ಹಾಸನ್ ಚುನಾವಣೆ ಪ್ರಚಾರ ಸಭೆಯಲ್ಲಿ ಸಾರ್ವಜನಿಕರನ್ನುದ್ದೇಶಿಸಿ ಮಾತನಾಡುತ್ತಿದ್ದಾಗ ಅಪರಿಚಿತ ವ್ಯಕ್ತಿ ಒಬ್ಬ ಕಮಲ್ ಹಾಸನ್ ಮೇಲೆ ಚಪ್ಪಲಿ ಎಸೆದಿರುವ ಘಟನೆ ಸಂಭವಿಸಿದೆ.
ಕಮಲ್ ವೇದಿಕೆ ಮೇಲಿದ್ದ ಕಾರಣ ಚಪ್ಪಲಿ ಜನರ ಗುಂಪಿನ ನಡುವೆ ಬಿದ್ದಿತ್ತು, ಘಟನೆಗೆ ಸಂಬಂಧ ಹನ್ನೊಂದರು ಜನರ ವಿರುದ್ಧ ದೂರು ದಾಖಲಾಗಿದ್ದು, ಬಿಜೆಪಿ ಮತ್ತು ಹನುಮಾನ್ ಸೇನೆಯ ಕಾರ್ಯಕರ್ತರ ವಿರುದ್ಧ ಮಕ್ಕಳ ನಿಧಿ ಮಯ್ಯಂ ಕಮಲ್ ಹಾಸನ್ ಅವರ ಪಕ್ಷದ ಕಾರ್ಯಕರ್ತರು ಪೊಲೀಸರಿಗೆ ದೂರು ನೀಡಿದ್ದಾರೆ. ದೂರಿನ ಆಧರಿಸಿ ಒಬ್ಬ ವ್ಯಕ್ತಿಯನ್ನು ಪೊಲೀಸರು ವಶಕ್ಕೆ ಪಡೆದುಕೊಂಡು ವಿಚಾರಣೆ ನಡೆಸುತ್ತಿದ್ದಾರೆ.
ಸ್ವತಂತ್ರ ಭಾರತದ ಮೊದಲ ಭಯೋತ್ಪಾದಕ ನಾಥುರಾಮ್ ಗೋಡ್ಸೆ ಎಂದಿದ್ದಕ್ಕಾಗಿ ಕಮಲ್ ಮೇಲೆ ಚಪ್ಪಲಿ ಎಸೆಯಲಾಗಿದೆ ಎಂದು ತಿಳಿದು ಬಂದಿದೆ.