ಸುರಪುರ: ಜಗತ್ತಿಗೆ ಮಹಾ ಮಾರಕವಾಗಿ ಪರಿಣಮಿಸಿರುವ ಕೊರನಾ ವೈರಸ್ ನಿರ್ಮೂಲನೆಗಾಗಿ ನಾಡಿನ ಅನೇಕ ಮಠಾಧೀಶರು ಮತ್ತು ಇಷ್ಟಲಿಂಗಧಾರಿಗಳು ಸೋಮವಾರ ಸಂಜೆ ೭ ಗಂಟೆಗೆ ಇಷ್ಟಲಿಂಗ ಪೂಜೆಯ ಮೂಲಕ ಕೊರೊನಾ ನಿರ್ಮೂಲನೆಗೆ ಪ್ರಾರ್ಥಿಸಲಾಗುವುದು ಎಂದು ವೀರಶೈವ ಲಿಂಗಾಯತ ಯುವ ವೇದಿಕೆ ಮುಖಂಡರು ತಿಳಿಸಿದ್ದಾರೆ.
ಈ ಕುರಿತು ಪತ್ರಿಕಾ ಹೇಳಿಕೆ ನೀಡಿದ್ದು,ಸೋಮವಾರ ಸಂಜೆ ೭ಕ್ಕೆ ಎಲ್ಲಾ ವೀರಶೈವ ಲಿಂಗಾಯತರು ತಮ್ಮ ಮನೆಗಳಲ್ಲಿಯೇ ಇಷ್ಟಲಿಂಗ ಪೂಜೆ ನಡೆಸಿ ಕೊರೊನಾ ವೈರಸ್ ನಿರ್ಮೂಲನೆಯಾಗಲೆಂದು ಪ್ರಾರ್ಥಿಸೋಣ,ಈ ಅಭಿಯಾನದಲ್ಲಿ ನಾಡಿನ ಅನೇಕ ಜನ ಮಠಾಧೀಶರಾ ಸುತ್ತೂರು ಶ್ರೀಗಳು,ಚಿತ್ರದುರ್ಗ ಶ್ರೀಗಳು,ಸಿದ್ದಗಂಗಾ ಶ್ರೀಗಳು,ನಾಗನೂರು ಶ್ರೀಗಳು,ಕೂಡಲ ಸಂಗಮ ಪಂಚಮಸಾಲಿ ಪೀಠದ ಶ್ರೀಗಳು ಹೀಗೆ ನಾಡಿನ ಎಲ್ಲಾ ಮಠಾಧೀಶರು ಈ ಅಭಿಯಾನದಲ್ಲಿ ಭಾಗಿಯಾಗಲಿದ್ದಾರೆ.ನಾವುಗಳು ಎಲ್ಲರು ಇಷ್ಟಲಿಂಗ ಧಾನ್ಯದೊಂದಿಗೆ ಜಗತ್ತಿನಿಂದ ಕೊರೊನಾ ನಿರ್ಮೂಲನೆಗೆ ಪ್ರಾರ್ಥಿಸೋಣ ಎಂದು ತಿಳಿಸಿದ್ದಾರೆ.
ಕಲಬುರಗಿ: ಮಹಿಳೆಯರ ಸಹಭಾಗಿತ್ವ ಮತ್ತು ಕೊಡುಗೆಯಿಲ್ಲದೆ ದೇಶದ ಸರ್ವಾಂಗೀಣ ಅಭಿವೃದ್ಧಿ ಅಸಾಧ್ಯ ಎಂದು ಶರಣಬಸವೇಶ್ವರ ವಿದ್ಯಾವರ್ಧಕ ಸಂಘದ ಅಧ್ಯಕ್ಷೆ ಮಾತೋಶ್ರೀ…
ಕಲಬುರಗಿ: ಕಲಬುರಗಿ ದಕ್ಷಿಣ ಮತಕ್ಷೇತ್ರದ ಶಾಸಕ ಅಲ್ಲಮಪ್ರಭು ಪಾಟೀಲ ಅವರು ಶನಿವಾರ ಸಂಜೆ ಕ್ಷೇತ್ರದ ಭೀಮಳ್ಳಿ ಗ್ರಾಮದ ರೈತರ ಹೊಲಗಳಿಗೆ…
ಕಲಬುರಗಿ: ಕಷ್ಟಗಳು ಬಂದಾಗ ಕುಗ್ಗದೆ, ಆ ಕಷ್ಟಗಳನ್ನು ಸವಾಲಾಗಿ ಸ್ವೀಕರಿಸಿ ಮೇಲೇಳಬೇಕು ಎಂದು ತಾಜ್ ನಗರದ ಆರೋಗ್ಯ ಕೇಂದ್ರದ ಹಿರಿಯ…
ಪರೋಪಕಾರ ಸೇವೆಯಿಂದ ಆತ್ಮತೃಪ್ತಿ: ಹಿರೇಮಠ ಕಲಬುರಗಿ: ನಗರ ಹೊರವಲಯದ ಸೈಯದ್ ಚಿಂಚೋಳಿ ರಸ್ತೆಯ ಬಳಿ ಇರುವ ಕೆವಿಪಿ ದಣ್ಣೂರ ಪಿಯು…
ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…
ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…