ಶಹಾಬಾದ: ನಗರದಲ್ಲಿ ತಹಸೀಲ್ದಾರ ಸುರೇಶ ವರ್ಮಾ ನೇತೃತ್ವದಲ್ಲಿ ಕೋವಿಡ್-೧೯ ವೈರಸ್ ಹರಡುವುದನ್ನು ತಡೆಗಟ್ಟುವಿಕೆಗಾಗಿ ಮತ್ತು ಲಾಕ್‌ಡೌನ್ ಸಂಪೂರ್ಣವಾಗಿ ಅನುಷ್ಠಾನಗೊಳಿಸಲು ಹೋಬಳಿವಾರು ಸೆಕ್ಟರ್ ಮೆಜಿಸ್ಟ್ರೇಟ್ ನೇಮಕ ಮಾಡುವ ಸಭೆ ನಡೆಯಿತು.
ಈ ಸಂದರ್ಭದಲ್ಲಿ ತಹಸೀಲ್ದಾರ ಸುರೇಶ ವರ್ಮಾ ಮಾತನಾಡಿ, ಶಹಾಬಾದ ನಗರ ಸೆಕ್ಟರ್ ಮೆಜಿಸ್ಟ್ರೇಟ್ ಅಧಿಕಾರಿಯಾಗಿ ನಗರಸಭೆಯ ಪೌರಾಯುಕ್ತ ವೆಂಕಟೇಶ ಅವರನ್ನು ನೇಮಕ ಮಾಡಿದ್ದು, ಇವರ ತಂಡದಲ್ಲಿ ಪೊಲೀಸ್ ಸಿಬ್ಬಂದಿ ಬಸಪ್ಪ, ಸಿಡಿಪಿಓ ಇಲಾಖೆಯ ಜಗನ್ನಾಥರೆಡ್ಡಿ, ನಗರಸಭೆಯ ಸಿಬ್ಬಂದಿ ರಾಜೇಶ ಇರಲಿದ್ದಾರೆ. ಅಲ್ಲದೇ ಶಹಾಬಾದ ಗ್ರಾಮೀಣ ವಲಯದಸೆಕ್ಟರ್ ಮೆಜಿಸ್ಟ್ರೇಟ್ ಅಧಿಕಾರಿಯಾಗಿ ವಾಣಿಜ್ಯ ತೆರಿಗೆ ಇಲಾಖೆಯ ಸಹಾಯಕ ಆಯುಕ್ತೆ ನೀಲಗಂಗಾ, ಅವರನ್ನು ನೇಮಕ ಮಾಡಿದ್ದು, ಇವರ ತಂಡದಲ್ಲಿ ಪೊಲೀಸ್ ಸಿಬ್ಬಂದಿ ಶಂಕರಗೌಡ, ಸಿಡಿಪಿಓ ಇಲಾಖೆಯ ಸಾಯಬಣ್ಣ ಹಾಗೂ ಪಶು ಆರೋಗ್ಯ ಕೇಂದ್ರದ ಸಿಬ್ಬಂದಿ ಭೀಮರಾವ ಇರಲಿದ್ದಾರೆ. ಈ ಇಬ್ಬರ ತಂಡ ಕೋವಿಡ್-೧೯ ವೈರಸ್ ಹರಡುವುದನ್ನು ತಡೆಗಟ್ಟುವಿಕೆಗಾಗಿ ಮತ್ತು ಲಾಕ್‌ಡೌನ್ ಸಂಪೂರ್ಣವಾಗಿ ಅನುಷ್ಠಾನಗೊಳಿಸಲು ಸಾಕಷ್ಟು ಶ್ರಮವಹಿಸಬೇಕು. ಅಲ್ಲದೇ ಸಾರ್ವಜನಿಕರು ಹೊರಬರದಂತೆ ಜಾಗೃತಿ ಮೂಡಿಸಬೇಕು. ಲಾಕ್‌ಡೌನ್ ಉಲ್ಲಂಘಿಸುವವರ ವಿರುದ್ಧ ಕ್ರಮಕೈಗೊಳ್ಳುವ ಎಲ್ಲಾ ಅಧಿಕಾರ ಹೊಂದಿದ್ದು, ಮುಲಾಇಲ್ಲದೇ ಕ್ರಮಕೈಗೊಳ್ಳಿ ಎಂದು ಹೇಳಿದರು.
ಈ ಸಂದರ್ಭದಲ್ಲಿ ಕಲಬುರಗಿ ವಾಣಿಜ್ಯ ತೆರಿಗೆ ಇಲಾಖೆಯ ಸಹಾಯಕ ಆಯುಕ್ತೆ ನೀಲಗಂಗಾ.ಎಸ್.ಬಬಲಾದ, ನಗರಸಭೆಯ ಪೌರಾಯುಕ್ತ ವೆಂಕಟೇಶ, ತಾಪಂ ಇಓ ಲಕ್ಷ್ಮಣ ಶೃಂಗೇರಿ ಸೇರಿದಂತೆ ವಿವಿಧ ಇಲಾಖೆಯ ಅಧಿಕಾರಿಗಳು ಇದ್ದರು.
ಕಲಬುರಗಿ: ಮಹಿಳೆಯರ ಸಹಭಾಗಿತ್ವ ಮತ್ತು ಕೊಡುಗೆಯಿಲ್ಲದೆ ದೇಶದ ಸರ್ವಾಂಗೀಣ ಅಭಿವೃದ್ಧಿ ಅಸಾಧ್ಯ ಎಂದು ಶರಣಬಸವೇಶ್ವರ ವಿದ್ಯಾವರ್ಧಕ ಸಂಘದ ಅಧ್ಯಕ್ಷೆ ಮಾತೋಶ್ರೀ…
ಕಲಬುರಗಿ: ಕಲಬುರಗಿ ದಕ್ಷಿಣ ಮತಕ್ಷೇತ್ರದ ಶಾಸಕ ಅಲ್ಲಮಪ್ರಭು ಪಾಟೀಲ ಅವರು ಶನಿವಾರ ಸಂಜೆ ಕ್ಷೇತ್ರದ ಭೀಮಳ್ಳಿ ಗ್ರಾಮದ ರೈತರ ಹೊಲಗಳಿಗೆ…
ಕಲಬುರಗಿ: ಕಷ್ಟಗಳು ಬಂದಾಗ ಕುಗ್ಗದೆ, ಆ ಕಷ್ಟಗಳನ್ನು ಸವಾಲಾಗಿ ಸ್ವೀಕರಿಸಿ ಮೇಲೇಳಬೇಕು ಎಂದು ತಾಜ್ ನಗರದ ಆರೋಗ್ಯ ಕೇಂದ್ರದ ಹಿರಿಯ…
ಪರೋಪಕಾರ ಸೇವೆಯಿಂದ ಆತ್ಮತೃಪ್ತಿ: ಹಿರೇಮಠ ಕಲಬುರಗಿ: ನಗರ ಹೊರವಲಯದ ಸೈಯದ್ ಚಿಂಚೋಳಿ ರಸ್ತೆಯ ಬಳಿ ಇರುವ ಕೆವಿಪಿ ದಣ್ಣೂರ ಪಿಯು…
ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…
ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…