ಜೇವರ್ಗಿ: ಕೊರೋನಾ ಮಹಾಮಾರಿಯಿಂದ ತತ್ತರಿಸಿರುವ ಬಡ ಜನತೆಗಾಗಿ ಬಿಜೆಪಿ ಪಕ್ಷದ ಹಿರಿಯ ನಾಯಕರಾದ ಅಶೋಕ ಸಾಹುಕಾರ ಗೋಗಿಯವರ ನೇತೃತ್ವದಲ್ಲಿ ತಾಲೂಕಿನ ಸುಮಾರು ಎರಡು ಸಾವಿರ ಕಡು-ಬಡವರಿಗೆ ಹಾಗೂ ನಿರಾಶ್ರಿತ ಕುಟುಂಬಗಳಿಗೆ ರಾಜ್ಯದ ಉಪಮುಖ್ಯಮಂತ್ರಿಗಳಾದ ಹಾಗೂ ಕಲಬುರ್ಗಿ ಜಿಲ್ಲಾ ಉಸ್ತುವಾರಿ ಸಚಿವರಾದ ಗೋವಿಂದ ಕಾರಜೋಳ ಅವರ ಮುಖಾಂತರ ದಿನಸಿ ಸಾಮಗ್ರಿಗಳನ್ನು (ಆಹಾರ ಪದಾರ್ಥಗಳನ್ನು) ವಿತರಣೆ ಮಾಡುವುದರ ಮೂಲಕ ಚಾಲನೆ ನೀಡಿದರು.
ಈ ಸಂದರ್ಭದಲ್ಲಿ ಮಾಜಿ ಶಾಸಕರಾದ ದೊಡ್ಡಪ್ಪಗೌಡ ಪಾಟೀಲ್ ನರಿಬೋಳˌ ಬಿಜೆಪಿ ಗ್ರಾಮಾಂತರ ಜಿಲ್ಲಾ ಅಧ್ಯಕ್ಷರಾದ ಶಿವರಾಜ್ ಪಾಟೀಲ್ ರದ್ದೇವಾಡಗಿ ರವರು ಸೇರಿದಂತೆ ಬಿಜೆಪಿಯ ಮುಖಂಡರುಗಳು ಉಪಸ್ಥಿತರಿದ್ದರು.