ಬಿಸಿ ಬಿಸಿ ಸುದ್ದಿ

ಹೆಚ್ಚಿಗೆ ಹಣ ಪಡೆದು, ಕಡಿಮೆ ಆಹಾರ ಧಾನ್ಯ ವಿತರಿಸುವ ಪಡಿತರ ಅಂಗಡಿ ಅಮಾನತ್ತು

ಕಲಬುರಗಿ: 5 ಪಡಿತರ ಅಂಗಡಿ ಅಮಾನತ್ತು: ಹೆಚ್ಚಿಗೆ ಹಣ ಪಡೆದು ಅಥವಾ ಕಡಿಮೆ ಪ್ರಮಾಣದಲ್ಲಿ ಆಹಾರ ಧಾನ್ಯ ವಿತರಣೆ ಮಾಡುತ್ತ ಪಡಿತರದಾರರಿಗೆ ಅನಗತ್ಯ ತೊಂದರೆ ನೀಡುತ್ತಿದ್ದಾರೆ ಎಂಬ ಶಾಸಕರ ಅರೋಪದ ಹಿನ್ನೆಲೆಯಲ್ಲಿ ಆಳಂದ ತಾಲೂಕಿನ ಸಾವಳೇಶ್ವರ, ಹಿತ್ತಲಶಿರೂರ ಮತ್ತು ವಾಗ್ಧರಿ, ಜೇವರ್ಗಿ ತಾಲೂಕಿನ ಶಾಖಾಪುರ ಎಸ್.ಎ ಹಾಗೂ ಕಲಬುರಗಿ ತಾಲೂಕಿನ ರಾಜಾಪುರ ಪಡಿತರ ಅಂಗಡಿಗಳನ್ನು ತಕ್ಷಣವೆ ಅಮಾನತ್ತು ಮಾಡಿ ಅಲ್ಲಿ ಕೃಷಿ ಪತ್ತಿನ ಸಹಕಾರ ಸಂಘಗಳ ಮೂಲಕ ಪಡಿತರ ವಿತರಣೆಗೆ ಕ್ರಮ ವಹಿಸಬೇಕು ಎಂದು ಡಿ.ಸಿಎಂ. ಗೋವಿಂದ ಕಾರಜೋಳ ಅವರು ಆಹಾರ ಇಲಾಖೆಯ ಜಂಟಿ ನಿರ್ದೇಶಕ ಡಿ.ಎಂ.ಪಾಣಿ ಅವರಿಗೆ ಸೂಚಿಸಿದರು.

ಜಿಲ್ಲಾಧಿಕಾರಿ ಶರತ್ ಬಿ. ಮಾತನಾಡಿ ಜಿಲ್ಲೆಯಲ್ಲಿ ಇದೂವರೆಗೆ 10 ಕೊರೋನಾ ಪಾಸಿಟಿವ್ ಪತ್ತೆಯಾಗಿದ್ದು, ಇದರಲ್ಲಿ ಇಬ್ಬರು ನಿಧನ ಹೊಂದಿದ್ದರೆ ಎರಡು ರೋಗಿಗಳು ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆ ಹೊಂದಿದ್ದಾರೆ. ಪಾಸಿಟಿವ್ ಪತ್ತೆಯಾದ ಹಿನ್ನೆಲೆಯಲ್ಲಿ ಕಲಬುರಗಿಯಲ್ಲಿ 4 ಮತ್ತು ಶಹಾಬಾದ ಪಟ್ಟಣದಲ್ಲಿ 1 ಕಂಟೇನ್‍ಮೆಂಟ್ ಝೋನ್ ಎಂದು ಘೋಷಿಸಿ ಅಲ್ಲಿ ಸ್ಕ್ರೀನಿಂಗ್, ಮುನ್ನೆಚರಿಕೆ ಕ್ರಮಗಳು ಕೈಗೊಳ್ಳಲಾಗಿದೆ. ಇದೇ ಸಂದರ್ಭದಲ್ಲಿ ಬೆಂಗಳೂರಿನಿಂದ 28320 ಮತು ಹೊರ ರಾಜ್ಯ ಮತ್ತು ಹೊರ ದೇಶದಿಂದ ಜಿಲ್ಲೆಗೆ 31518 ಜನ ಮರಳಿದ್ದು, ಅವರೆಲ್ಲರ ಮೇಲೆ ನಿಗಾ ಇರಿಸಿದೆ ಎಂದ ಸಭೆಗೆ ಮಾಹಿತಿ ನೀಡಿದರು.

ಐಸೋಲೇಷನ್ ವಾರ್ಡ್‍ನಲ್ಲಿ ಕಾರ್ಯನಿರ್ವಹಿಸುತ್ತಿರುವ ಆರೋಗ್ಯ ಸಿಬ್ಬಂದಿಗಳ ರಕ್ಷಣೆಗಾಗಿ 5000 ಪಿ.ಪಿ.ಇ.ಕಿಟ್, 37000 ಎನ್-95 ಮಾಸ್ಕ್ ಲಭ್ಯವಿದ್ದು, ವೈದ್ಯ ಸಿಬ್ಬಂದಿಗಳಿಗೆ ಅಗತ್ಯ ಮೂಲಸೌಕರ್ಯ ಕಲ್ಪಿಸಿದೆ. ಇ.ಎಸ್.ಐ.ಸಿ.ನಲ್ಲಿ 360 ಮತ್ತು ಜಿಮ್ಸ್ ನಲ್ಲಿ 330 ಐಸೋಲೆಷನ್ ಬೆಡ್ ಸ್ಥಾಪಿಸಲಾಗಿದೆ. ಇದಲ್ಲದೆ ಕಲಬುರಗಿಯ್ಲಲಿ 4 ಫೀವರ್ ಕ್ಲಿನಿಕ್ ಸ್ಥಾಪಿಸಲಾಗಿದೆ. ಸರ್ಕಾರದ ಸೂಚನೆ ಪಾಲಿಸದೆ ಕೋವಿಡ್-19 ಶಂಕಿತರನ್ನು ಚಿಕಿತ್ಸೆ ನೀಡಿದ ಕಲಬುರಗಿ ನಗರದ ಬಹಮನಿ ಆಸ್ಪತ್ರೆ ಮತ್ತು ಸ್ಟಾರ್ ಆಸ್ಪತ್ರೆಯನ್ನು ಸೀಲ್ ಮಾಡಲಾಗಿ, ಅವರ ಮೇಲೆ ಪ್ರಕರಣ ದಾಖಲಿಸಿ ಕಾನೂನು ಕ್ರಮ ಕೈಗೊಂಡಿದೆ. ಜಿಮ್ಸ್ ಮತ್ತು ಇ.ಎಸ್.ಯ.ಸಿ. ಆಸ್ಪತ್ರೆಯನ್ನು ಕೋವಿಡ್-19 ರೋಗಿಗಳಿಗೆ ಮೀಸಲಿರಿಸಿದೆ. ಕಲಬುರಗಿ ಪ್ರಯೋಗಾಲಯದಲ್ಲಿ ಪ್ರತಿನಿತ್ಯ 60 ಜನರ ಸ್ಯಾಂಪಲ್ಸ್‍ಗಳನ್ನು ಕೋವಿಡ್-19 ಪರೀಕ್ಷೆಗೆ ಒಳಪಡಿಸಲಾಗುತ್ತಿದೆ ಎಂದರು.

ಸಭೆಯಲ್ಲಿ ಜಿಲ್ಲಾ ಪಂಚಾಯತ್ ಅಧ್ಯಕ್ಷೆ ಸುವರ್ಣಾ ಹಣಮಂತರಾಯ ಮಾಲಾಜಿ, ಲೋಕಸಭಾ ಸದಸ್ಯ ಡಾ.ಉಮೇಶ ಜಾಧವ, ಕರ್ನಾಟಕ ರಾಜ್ಯ ಮಹಿಳಾ ಅಭಿವೃದ್ಧಿ ನಿಗಮದ ಅಧ್ಯಕ್ಷೆ ಶಶಿಕಲಾ ವಿ. ಟೆಂಗಳಿ, ಶಾಸಕರಾದ ಸುಭಾಷ ಗುತ್ತೇದಾರ್, ಎಂ.ವೈ. ಪಾಟೀಲ, ಬಸವರಾಜ ಮತ್ತಿಮೂಡ, ಕನೀಜ್ ಪಾತಿಮಾ, ಅವಿನಾಶ್ ಜಾಧವ್, ವಿಧಾನ ಪರಿಷತ್ ಸದಸ್ಯರಾದ ಬಿ.ಜಿ. ಪಾಟೀಲ್, ತಿಪ್ಪಣಪ್ಪ ಕಮಕನೂರ, ಕಲಬುರಗಿ ನಗರ ಪೆÇಲೀಸ್ ಆಯುಕ್ತ ಎನ್. ಸತೀಶ್ ಕುಮಾರ್, ಜಿಲ್ಲಾ ಪಂಚಾಯತ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಡಾ.ಪಿ.ರಾಜಾ, ಜಿಲ್ಲಾ ಪೊಲೀಸ್ ವರೀಷ್ಠಾಧಿಕಾರಿ ಯಡಾ ಮಾರ್ಟಿನ್ ಮಾರ್ಬನ್ಯಾಂಗ್, ಡಿಸಿಪಿ ಕಿಶೋರ ಬಾಬು ಸೇರಿದಂತೆ ಜಿಲ್ಲಾ ಮಟ್ಟದ ಅಧಿಕಾರಿಗಳು ಇದ್ದರು.

emedialine

Recent Posts

ತೊಗರಿ ಬೆಳೆ‌ ಹಾನಿ ಪ್ರದೇಶ ವೀಕ್ಷಿಸಿದ ಶಾಸಕ ಅಲ್ಲಮಪ್ರಭು ಪಾಟೀಲ

ಕಲಬುರಗಿ: ಕಲಬುರಗಿ ದಕ್ಷಿಣ ಮತಕ್ಷೇತ್ರದ ಶಾಸಕ ಅಲ್ಲಮಪ್ರಭು ಪಾಟೀಲ ಅವರು ಶನಿವಾರ ಸಂಜೆ ಕ್ಷೇತ್ರದ ಭೀಮಳ್ಳಿ ಗ್ರಾಮದ ರೈತರ ಹೊಲಗಳಿಗೆ…

3 hours ago

ಕಷ್ಟಗಳಿಗೆ ಕುಗ್ಗದೇ ಸವಾಲಾಗಿ ಸ್ವಿಕರಿಸಿ

ಕಲಬುರಗಿ: ಕಷ್ಟಗಳು ಬಂದಾಗ ಕುಗ್ಗದೆ, ಆ ಕಷ್ಟಗಳನ್ನು ಸವಾಲಾಗಿ ಸ್ವೀಕರಿಸಿ ಮೇಲೇಳಬೇಕು ಎಂದು ತಾಜ್ ನಗರದ ಆರೋಗ್ಯ ಕೇಂದ್ರದ ಹಿರಿಯ…

3 hours ago

ಕಲಬುರಗಿ: ಹಾಸ್ಯ ಕಲಾವಿದ ರೇವಣಸಿದ್ಧ ಸ್ವಾಮಿ ದಂಪತಿಗೆ ಗೆಳೆಯರ ಬಳಗದಿಂದ ಸತ್ಕರಿಸಲಾಯಿತು.

ಪರೋಪಕಾರ ಸೇವೆಯಿಂದ ಆತ್ಮತೃಪ್ತಿ: ಹಿರೇಮಠ ಕಲಬುರಗಿ: ನಗರ ಹೊರವಲಯದ ಸೈಯದ್ ಚಿಂಚೋಳಿ ರಸ್ತೆಯ ಬಳಿ ಇರುವ ಕೆವಿಪಿ ದಣ್ಣೂರ ಪಿಯು…

3 hours ago

ಸಾವಿರ ಸೀರೆ ವಿತರಿಸಿ ಸಚಿವ ಪ್ರಿಯಾಂಕ್ ಜನ್ಮದಿನ ಆಚರಣೆ

  ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…

19 hours ago

ಮೂರೂ ಕ್ಷೇತ್ರದಲ್ಲಿ ಕಾಂಗ್ರೆಸ್ ಗೆಲುವು: ಕಾರ್ಯಕರ್ತರಿಂದ ವಿಜಯೋತ್ಸವ

ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…

22 hours ago

ಸಿದ್ದಸಿರಿ ಹೋರಾಟ ಪ್ರಾಯೋಜಿತ: ಶರಣು ಪಾಟೀಲ್

ಚಿಂಚೋಳಿ: ಕಾನೂನು ತೊಡಕಿನಿಂದ ಸ್ಥಗಿತಗೊಂಡ ಸಿದ್ದಸಿರಿ ಎಥೆನಾಲ್ ಕಾರ್ಖಾನೆ ಪ್ರಾರಂಭಕ್ಕೆ ಕರ್ನಾಟಕ ಮಾಲಿನ್ಯ ನಿಯಂತ್ರಣ ಮಂಡಳಿ ಅನುಮತಿ ನೀಡಬೇಕೆಂದು ಒತ್ತಾಯಿಸಿ…

1 day ago