ಕಲಬುರಗಿಯಲ್ಲಿ ಎರಡು ವರ್ಷದ ಮಗುವಿಗೆ ಕೊರೋನಾ ಪಾಸಿಟಿವ್

0
558

ಕಲಬುರಗಿ: ಎರಡು ವರ್ಷದ ಮಗುವಿಗೆ ಕೊರೋನಾ ಪಾಸಿಟಿವ್ ಇದೆ ಎಂಬುದು ಜಿಲ್ಲೆಯ ಜನರನ್ನು ತೀವ್ರ ಆತಂಕಕ್ಕೀಡು ಮಾಡಿದೆ. ಚಿತ್ತಾಪುರ ತಾಲ್ಲೂಕಿನ ವಾಡಿಯಲ್ಲಿ ಬಾಡಿಗೆ ಮನೆಯಲ್ಲಿ ವಾಸಿಸುತ್ತಿದ್ದ ಉತ್ತರ ಪ್ರದೇಶ ಮೂಲದ ವ್ಯಕ್ತಿಯ ಎರಡು ವರ್ಷದ ಮಗುವಿಗೆ ಕೊರೋನಾ ಸೋಂಕು ಹರಡಿದೆ ಎಂಬುದನ್ನು ಅರಿತ ಕ್ಷೇತ್ರದ ಶಾಸಕರಾದ ಪ್ರೀಯಾಂಕ್ ಖರ್ಗೆ ಸೋಂಕು ಪೀಡಿತ ಪ್ರದೇಶದಲ್ಲಿ ಮುನ್ನೆಚರಿಕೆ ಕ್ರಮ ಕೈಗೊಳ್ಳಲು ಸ್ಥಳೀಯ ಅಧಿಕಾರಿಗಳೊಂದಿಗೆ ವಿಡಿಯೋ ಕಾನ್ಫರೆನ್ ನಡೆಸಿದರು.

ಈ ಬಗ್ಗೆ ಶಾಸಕ ಖರ್ಗೆ ಅವರು ಇಂದು ತಮ್ಮ ಟ್ವೀಟರ್ ನಲ್ಲಿ ಟ್ವೀಟ್ ಮಾಡುವ ಮೂಲಕ ಈ ವಿಷಯವನ್ನು ಹಂಚಿಕೊಂಡಿದ್ದಾರೆ.

Contact Your\'s Advertisement; 9902492681

ವಿಷಯಕ್ಕೆ ಸಂಬಂಧಿಸಿದಂತೆ ಕಲಬುರಗಿ ಜಿಲ್ಲಾಧಿಕಾರಿಗಳಾದ ಶರತ್ ಬಿ ಅವರು It is Screening Positive. Confirmation Test result is awaited… ಎಂದು ಇ-ಮೀಡಿಯಾ ಲೈನ್ ಜೊತೆ ಪ್ರತಿಕ್ರಿಯಿಸಿದ್ದಾರೆ.

ನಿನ್ನೆ ಸಂಜೆ ಮನೆ ಮುಂದೆ ಆಟವಾಡಿಕೊಂಡಿದ್ದ ಮಗು ಬಿದ್ದು ರಕ್ತ ಮಾಡಿಕೊಂಡಿದ್ದರಿಂದ ಕಲಬುರಗಿ ಜಿಲ್ಲಾಸ್ಪತ್ರೆಯಲ್ಲಿ ಪರೀಕ್ಷಿಸಲು ಕೊರೋನಾ ಪಸಿಟಿವ್ ಇರುವುದಾಗಿ ತಿಳಿದುಬಂದಿದೆ.

ಮುಂಜಾಗ್ರತಾ ಕ್ರಮವಾಗಿ ತಹಸೀಲ್ದಾರ್ ಉಮಾಕಾಂತ, ತಾಲ್ಲೂಕು ವೈದ್ಯಾಧಿಕಾರಿ ಮೇಕನ್, ಡಿವೈಎಸ್ಪಿ ವೆಂಕನಗೌಡ ಪಾಟೀಲ, ಸಿಪಿಐ ಪಂಚಾಕ್ಷರಿ ಸಾಲಿಮಠ ಅವರುಗಳು ತಮ್ಮ ಸಿಬ್ಬಂದಿಯೊಂದಿಗೆ ಆಗಮಿಸಿ ಮನೆಯ ಇತರ ಸದಸ್ಯರಿಗೆ ವಿಚಾರಣೆ ನಡೆಸಿ ಸುತ್ತಲೂ ಬ್ಯಾರಿಕೇಡ್ ಹಾಕಿ ಬಿಗಿ ಬಂದೋಬಸ್ತ್ ಏರ್ಪಡಿಸಿದ್ದಾರೆ.

ಎಸ್ಪಿ ಯಡಾ ಮಾರ್ಟಿನ್ ಭೇಟಿ ನೀಡಿ ಪರಿಶೀಲನೆ ನಡೆಸಿ ಅಗತ್ಯ ಕ್ರಮ ಕೈಗೊಳ್ಳುವಂತೆ ಸೂಚಿಸಿದ್ದಾರೆ ಎಂದು ತಿಳಿದುಬಂದಿದೆ.

ಜಿಲ್ಲೆಯಲ್ಲಿ ವೈರಸ್ ಪೀಡಿತರ ಸಂಖ್ಯೆ ದಿನೇ ದಿನೇ ಹೆಚ್ಚು ಜಿಲ್ಲೆಯಲ್ಲಿ ಆತಂಕದ ವಾತವರಣ ನಿರ್ಮಾಣವಾಗಿದೆ. ಪೀಡಿತ ರೋಗಿಗಳಿಗೆ ಪ್ರಸ್ತುತ ಇ.ಎಸ್.ಐ.ಸಿ. ಆಸ್ಪತ್ರೆಯ ಐಸೋಲೇಷನ್ ವಾರ್ಡ್ ನಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಜಿಲ್ಲೆಯ ಇಬ್ಬರು ಸೋಂಕಿನಿಂದ ಮೃತಪಟ್ಟಿದ್ದಾರೆ.

ಪ್ರತ್ಯುತ್ತರ ಬಿಟ್ಟು

Please enter your comment!
Please enter your name here