ಶಹಾಬಾದ: ಜನರು ಸಾಮಾಜಿಕ ಅಂತರ ಕಾಪಾಡಿಕೊಳ್ಳಬೇಕು ಹಾಗೂ ಅನಾವಶ್ಯವಾಗಿ ಹೊರಗೆ ಬರದೇ ಮನೆಯಲ್ಲಿರುವುದೇ ಈ ರೋಗಕ್ಕೆ ಮದ್ದು ಎಂದು ಬಿಜೆಪಿ ನಗರ ಅಧ್ಯಕ್ಷ ಅಣವೀರ ಇಂಗಿನಶೆಟ್ಟಿ ಹೇಳಿದರು.
ಅವರು ರವಿವಾರ ಬಸವರಾಜ ಮಮತ್ತಿಮುಡು ಅಭಿಮಾನಿ ಬಳಗದ ವತಿಯಿಂದ ಪೊಲೀಸ್ ಸಿಬ್ಬಂದಿಗೆ ಮಾಸ್ಕ್, ಸೆನೆಟೈಸರ್ ವಿತರಿಸಿ ಮಾತನಾಡಿದರು.
ಕರೊನಾ ವೈರಸ್‌ನ್ನು ತಡೆಗಟ್ಟಲು ತಾಲೂಕಾಢಳಿತ ಸಾಕಷ್ಟು ಶ್ರಮ ವಹಿಸುತ್ತಿದೆ. ಮನೆಯಲ್ಲೇ ಇರುವ ಜನರು ಸಾಕಷ್ಟು ನಿದ್ದೆ ಮಾಡುತ್ತಿದ್ದಾರೆ. ಹಗಲು-ರಾತ್ರಿ ಎನ್ನದೇ ಪೊಲೀಸ್ ಸಿಬ್ಬಂದಿಗಳಿಗೆ ನಿದೆಯಿಲ್ಲದೇ ಕೆಲಸದಲ್ಲಿ ನಿರತರಾಗಿದ್ದಾರೆ.ಇವರ ಸೇವೆ ಶ್ಲಾಘನೀಯವಾದುದು.ಇಲ್ಲಿನ ಸಿಬ್ಬಂದಿಗಳಿಗೆ ಉಚಿತವಾಗಿ ಮಾಸ್ಕ್ ಹಾಗೂ ಸ್ಯಾನಿಟೈಜರ್ ನೀಡುವ ಮೂಲಕ ನಮ್ಮ ಅಲ್ಪ ಸೇವೆ ಮಾಡುತ್ತಿದ್ದೆವೆ.ಯಾವುದೇ ಕಾರಣಕ್ಕೂ ಸಾರ್ವಜನಿಕರು ಮನೆಯಿಂದ ಹೊರಗೆ ಬರದೇ ಸಹಕಾರ ನೀಡಬೇಕು.ಆಗ ಮಾತ್ರ ಕರೊನಾ ವೈರಸ್ ಸರಣಿ ಕೊಂಡಿಯನ್ನು ಮುರಿಯಬಹುದು.ಆದ್ದರಿಂದ ವಿನಾಕಾರಣ ಹೊರಗೆ ಬರಬೇಡಿ ಎಂದು ಮನವಿ ಮಾಡಿದರು.
ಬಿಜೆಪಿ ಜಿಲ್ಲಾ ಮುಖಂಡ ಗೋರಖನಾಥ, ಅರುಣ ಪಟ್ಟಣಕರ್, ನಾಗರಾಜ ಮೇಲಗಿರಿ, ನಿಂಗಣ್ಣ ಹುಳಗೋಳಕರ್, ಸದಾನಂದ ಕುಂಬಾರ, ಶ್ರೀಧರ ಜೋಷಿ, ರಾಜಶೇಖರ ದೇವರಮನಿ ಸೇರಿದಂತೆ ಇತರರು ಇದ್ದರು.
ಕಲಬುರಗಿ: ಕಲಬುರಗಿ ದಕ್ಷಿಣ ಮತಕ್ಷೇತ್ರದ ಶಾಸಕ ಅಲ್ಲಮಪ್ರಭು ಪಾಟೀಲ ಅವರು ಶನಿವಾರ ಸಂಜೆ ಕ್ಷೇತ್ರದ ಭೀಮಳ್ಳಿ ಗ್ರಾಮದ ರೈತರ ಹೊಲಗಳಿಗೆ…
ಕಲಬುರಗಿ: ಕಷ್ಟಗಳು ಬಂದಾಗ ಕುಗ್ಗದೆ, ಆ ಕಷ್ಟಗಳನ್ನು ಸವಾಲಾಗಿ ಸ್ವೀಕರಿಸಿ ಮೇಲೇಳಬೇಕು ಎಂದು ತಾಜ್ ನಗರದ ಆರೋಗ್ಯ ಕೇಂದ್ರದ ಹಿರಿಯ…
ಪರೋಪಕಾರ ಸೇವೆಯಿಂದ ಆತ್ಮತೃಪ್ತಿ: ಹಿರೇಮಠ ಕಲಬುರಗಿ: ನಗರ ಹೊರವಲಯದ ಸೈಯದ್ ಚಿಂಚೋಳಿ ರಸ್ತೆಯ ಬಳಿ ಇರುವ ಕೆವಿಪಿ ದಣ್ಣೂರ ಪಿಯು…
ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…
ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…
ಚಿಂಚೋಳಿ: ಕಾನೂನು ತೊಡಕಿನಿಂದ ಸ್ಥಗಿತಗೊಂಡ ಸಿದ್ದಸಿರಿ ಎಥೆನಾಲ್ ಕಾರ್ಖಾನೆ ಪ್ರಾರಂಭಕ್ಕೆ ಕರ್ನಾಟಕ ಮಾಲಿನ್ಯ ನಿಯಂತ್ರಣ ಮಂಡಳಿ ಅನುಮತಿ ನೀಡಬೇಕೆಂದು ಒತ್ತಾಯಿಸಿ…