ಕಲಬುರಗಿ: ಕೊರೋನಾ ವೈರಸ್ ತಡೆಗಟ್ಟುವ ಮತ್ತು ಜನಸಂದಣಿ ನಿಯಂತ್ರಣದಲ್ಲಿಡಲು ಈಗಾಗಲೇ ಕಲಬುರಗಿ ಜಿಲ್ಲೆಯಾದ್ಯಂತ ಜಾರಿಯಲ್ಲಿರುವ ಸಿ.ಆರ್.ಪಿ.ಸಿ. ಕಾಯ್ದೆ-1973ರ ಕಲಂ 144 ನಿಷೇಧಾಜ್ಞೆ ಯನ್ನು 2020ರ ಏಪ್ರಿಲ್ 30ರವರೆಗೆ ವಿಸ್ತರಿಸಿ ಕಲಬುರಗಿ ಜಿಲ್ಲಾಧಿಕಾರಿ ಶರತ್ ಬಿ. ಅವರು ಸೋಮವಾರ ಆದೇಶ ಹೊರಡಿಸಿದ್ದಾರೆ.
ಕೊರೋನಾ ವೈರಸ್ ಹರಡದಂತೆ ಮುಂಜಾಗೃತಾ ಕ್ರಮವಾಗಿ ಈಗಾಗಲೇ ಕಲಬುರಗಿ ಜಿಲ್ಲೆಯಾದ್ಯಂತ 2020ರ ಮಾರ್ಚ್ 19ರ ರಾತ್ರಿ 8 ಗಂಟೆಯಿಂದ ಏಪ್ರಿಲ್ 14ರ ರಾತ್ರಿ 8 ಗಂಟೆಯವರೆಗೆ ಒಟ್ಟು 26 ದಿನಗಳವರೆಗೆ ನಿಷೇಧಾಜ್ಞೆ ಜಾರಿಗೊಳಿಸಲಾಗಿತ್ತು. ಆದರೆ ಈಗ ಪರಿಸ್ಥಿತಿಯ ಅಗತ್ಯತೆಯನ್ನು ಮನಗಂಡು ಜಿಲ್ಲಾಧಿಕಾರಿಗಳು 2020ರ ಏಪ್ರಿಲ್ 30ರ ವರೆಗೆ ನಿಷೇಧಾಜ್ಞೆಯನ್ನು ವಿಸ್ತರಿಸಿದ್ದಾರೆ.
ನಿಷೇಧಾಜ್ಞೆ ಯ ಈ ಸಂದರ್ಭದಲ್ಲಿ ಸಾಮೂಹಿಕವಾಗಿ ಧಾರ್ಮಿಕ ಮತ್ತು ವೈಯಕ್ತಿಕ ಕಾರ್ಯಕ್ರಮಗಳನ್ನು ಆಯೋಜಿಸುವಂತಿಲ್ಲ. ಗುಂಪು-ಗುಂಪಾಗಿ ಚಲಿಸುವುದು ಮತ್ತು ಅನಾವಶ್ಯಕವಾಗಿ ಸಂಚರಿಸುವಂತಿಲ್ಲ ಮತ್ತು ಈ ಆದೇಶದಿಂದ ಭಯಪಟ್ಟು ಅಗತ್ಯಕ್ಕಿಂತ ಹೆಚ್ಚು ಅವಶ್ಯ ದಾಸ್ತಾನುಗಳನ್ನು ಸಹ ಖರೀದಿಸುವ ಅಗತ್ಯವಿಲ್ಲ ಎಂದು ಅವರು ಆದೇಶದಲ್ಲಿ ತಿಳಿಸಿದ್ದು, ಈ ಆದೇಶ ಅಗತ್ಯ ಸೇವೆಗಳಿಗೆ ಅನ್ವಯವಾಗುವುದಿಲ್ಲ ಎಂದು ಡಿ.ಸಿ. ಶರತ್ ಬಿ. ಅವರು ಆದೇಶದಲ್ಲಿ ಸ್ಪಷ್ಟಪಡಿಸಿದ್ದಾರೆ.
ಕಲಬುರಗಿ: ಕಲಬುರಗಿ ದಕ್ಷಿಣ ಮತಕ್ಷೇತ್ರದ ಶಾಸಕ ಅಲ್ಲಮಪ್ರಭು ಪಾಟೀಲ ಅವರು ಶನಿವಾರ ಸಂಜೆ ಕ್ಷೇತ್ರದ ಭೀಮಳ್ಳಿ ಗ್ರಾಮದ ರೈತರ ಹೊಲಗಳಿಗೆ…
ಕಲಬುರಗಿ: ಕಷ್ಟಗಳು ಬಂದಾಗ ಕುಗ್ಗದೆ, ಆ ಕಷ್ಟಗಳನ್ನು ಸವಾಲಾಗಿ ಸ್ವೀಕರಿಸಿ ಮೇಲೇಳಬೇಕು ಎಂದು ತಾಜ್ ನಗರದ ಆರೋಗ್ಯ ಕೇಂದ್ರದ ಹಿರಿಯ…
ಪರೋಪಕಾರ ಸೇವೆಯಿಂದ ಆತ್ಮತೃಪ್ತಿ: ಹಿರೇಮಠ ಕಲಬುರಗಿ: ನಗರ ಹೊರವಲಯದ ಸೈಯದ್ ಚಿಂಚೋಳಿ ರಸ್ತೆಯ ಬಳಿ ಇರುವ ಕೆವಿಪಿ ದಣ್ಣೂರ ಪಿಯು…
ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…
ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…
ಚಿಂಚೋಳಿ: ಕಾನೂನು ತೊಡಕಿನಿಂದ ಸ್ಥಗಿತಗೊಂಡ ಸಿದ್ದಸಿರಿ ಎಥೆನಾಲ್ ಕಾರ್ಖಾನೆ ಪ್ರಾರಂಭಕ್ಕೆ ಕರ್ನಾಟಕ ಮಾಲಿನ್ಯ ನಿಯಂತ್ರಣ ಮಂಡಳಿ ಅನುಮತಿ ನೀಡಬೇಕೆಂದು ಒತ್ತಾಯಿಸಿ…