ಸುರಪುರ: ತಾಲ್ಲೂಕಿನ ಹೆಬ್ಬಾಳ(ಬಿ) ಮತ್ತು ಗೆದ್ದಲಮರಿ ತಾಲ್ಲೂಕು ಪಂಚಾಯತಿ ಕ್ಷೇತ್ರಗಳಿಗೆ ವಿವಿಧ ಕಾರಣದಿಂದ ತೆರವಾಗಿರುವ ಸ್ಥಾನಗಳಿಗೆ ನಡೆಯುವ ಚುನಾವಣೆಗೆ ನಾಮಪತ್ರ ಸಲ್ಲಿಸಲು ಗುರುವಾರ ಕೊನೆಯದಿನದ ವರೆಗೆ ಒಟ್ಟು ಹದಿನೈದು ಜನರು ತಮ್ಮ ಉಮೇದುವಾರಿಕೆ ಸಲ್ಲಿಸಿದ್ದಾರೆ.
ಹೆಬ್ಬಾಳ(ಬಿ) ತಾಲ್ಲೂಕು ಪಂಚಾಯತಿ ಕ್ಷೇತ್ರಕ್ಕೆ ಕಾಂಗ್ರೇಸ್ ಪಕ್ಷದಿಂದ ನಾಲ್ಕು ಹಾಗು ಭಾರತೀಯ ಜನತಾ ಪಕ್ಷದಿಂದ ನಾಲ್ಕು ಮತ್ತು ಬಿಎಸ್‌ಪಿಯಿಂದ ಒಂದು ಮತ್ತು ಇಬ್ಬರು ಪಕ್ಷೇತರರು ಸೇರಿದಂತೆ ಒಟ್ಟು ಹನ್ನೊಂದು ನಾಮಪತ್ರಗಳು ಸಲ್ಲಿಕೆಯಾಗಿವೆ.ಅದೆರೀತಿಯಾಗಿ ಗೆದ್ದಲಮರಿ ತಾಲ್ಲೂಕು ಪಂಚಾಯತಿ ಕ್ಷೇತ್ರದ ಚುನಾವಣೆಗೆ ಕಾಂಗ್ರೇಸ್ ಪಕ್ಷದಿಂದ ಎರಡು ಹಾಗು ಬಿಜೆಪಿಯಿಂದ ಎರಡು ಒಟ್ಟು ನಾಲ್ಕು ಜನ ಉಮೇದುವಾರಿಕೆ ಸಲ್ಲಿಸಿದ್ದಾರೆ.
ತಾಲ್ಲೂಕಿನ ಕಾಮನಟಿಗಿ ಗ್ರಾಮ ಪಂಚಾಯತಿ ಮತ್ತು ಅಗ್ನಿ ಗ್ರಾಮ ಪಂಚಾಯತಿಯ ಅಗತೀರ್ಥ ತಲಾ ಒಂದರಂತೆ ಒಟ್ಟು ಎರಡು ಸ್ಥಾನಗಳಿಗೆ ನಡೆಯುವ ಗ್ರಾಮ ಪಂಚಾಯತಿ ಚುನಾವಣೆಯಲ್ಲಿ ಕಾಮನಟಿಗಿಯಲ್ಲಿ ಎರಡು ಮತ್ತು ಅಗತೀರ್ಥ ಗ್ರಾಮದ ಒಂದು ಸ್ಥಾನಕ್ಕೆ ಎರಡರಂತೆ ಒಟ್ಟು ನಾಲ್ಕು ನಾಮಪತ್ರಗಳು ಸಲ್ಲಿಕೆಯಾಗಿವೆ.ಈ ರೀತಿಯಾಗಿ ಒಟ್ಟು ಚುನಾವಣೆಗೆ ಹತ್ತೊಂಬತ್ತು ನಾಮಪತ್ರ ಸಲ್ಲಿಕೆಯಾಗಿದ್ದು ಈ ಎಲ್ಲಾ ಸ್ಥಾನಗಳಿಗೆ ಈ ತಿಂಗಳ ೨೯ನೇ ತಾರೀಖಿನಂದು ಚುನಾವಣೆ ನಡೆಯಲಿವೆ ಎಂದು ಚುನಾವಣಾಧಿಕಾರಿಯೂ ಆಗಿರುವ ತಹಸೀಲ್ದಾರ ಸುರೇಶ ಅಂಕಲಗಿ ತಿಳಿಸಿದ್ದಾರೆ.
ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…
ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…
ಚಿಂಚೋಳಿ: ಕಾನೂನು ತೊಡಕಿನಿಂದ ಸ್ಥಗಿತಗೊಂಡ ಸಿದ್ದಸಿರಿ ಎಥೆನಾಲ್ ಕಾರ್ಖಾನೆ ಪ್ರಾರಂಭಕ್ಕೆ ಕರ್ನಾಟಕ ಮಾಲಿನ್ಯ ನಿಯಂತ್ರಣ ಮಂಡಳಿ ಅನುಮತಿ ನೀಡಬೇಕೆಂದು ಒತ್ತಾಯಿಸಿ…
ಚಿಂಚೋಳಿ: ಸಿದ್ದಶ್ರೀ ಕಾರ್ಖಾನೆ ಪ್ರಾರಂಭ ಮಾಡಲು ರೈತರು ಹಗಲು ರಾತ್ರಿ ಎನ್ನದೆ ಬಸವೇಶ್ವರ ಉತ್ತರ ಬಳಿ ಧರಣಿಯಲ್ಲಿ ಹೋರಾಟ ಮಾಡುತ್ತಿದ್ದು.…
ಕಲಬುರಗಿ: ನವೆಂಬರ್ 29 ರಿಂದ 2 ಡಿಸೇಂಬರ್ ವರೆಗೆ ತಮಿಳುನಾಡಿನ ಅಲಗಪ್ಪ ವಿಶ್ವವಿದ್ಯಾಲಯ ಕರೈಕುಡಿಯಲ್ಲಿ ನಡೆಯುವ ದಕ್ಷಿಣ ಭಾರತ ಅಂತರ…
ಕಲಬುರಗಿ: ನಗರದ ವಾರ್ಡ ನಂ.51.ರ ಜೇವರ್ಗಿ ಕಾಲೋನಿ ವಾಟರ್ ಟ್ಯಾಂಕ್ ಹತ್ತಿರದ ಉದ್ಯವನದಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಪ್ರಿಯಾಂಕ ಖರ್ಗೆ…