ಕಲಬುರಗಿ: ಡಾ ಬಾಬಾ ಸಾಹೇಬ್ ಅಂಬೇಡ್ಕರ್ ರವರ ತತ್ವ,ಸಿದ್ದಾಂತ ಹಾಗೂ ಅವರ ಆದರ್ಶಗಳನ್ನು ಜನರು ತಮ್ಮ ನಿಜ ಜೀವನದಲ್ಲಿ ಅಳವಡಿಸಿಕೊಂಡಾಗ ಮಾತ್ರ ಭವ್ಯ ಭಾರತದ ನಿರ್ಮಾಣ ಸಾಧ್ಯವಾಗುತ್ತದೆ ಎಂದು ಮಾಜಿ ಸಚಿವ ಹಾಗೂ ಬಿಜೆಪಿ ನಾಯಕರಾದ ಮಾಲಿಕಯ್ಯ ಗುತ್ತೇದಾರ ಅಭಿಪ್ರಾಯ ವ್ಯಕ್ತಪಡಿಸಿದರು.
ಅವರು ನಗರದ ಜಗತ್ ವೃತದಲ್ಲಿರುವ ಡಾ.ಬಾಬಾ ಸಾಹೇಬ್ ಅಂಬೇಡ್ಕರ್ ರವರ 129ನೇ ಜಯಂತೋತ್ಸವದ ಅಂಗವಾಗಿ ಡಾ.ಅಂಬೇಡ್ಕರ್ ಪ್ರತಿಮೆಗೆ ಮಾಲಾರ್ಪಣೆ ಮಾಡಿ ಮಾತನಾಡಿದರು. ಮುಂದುವರೆದು ಮಾತನಾಡಿದ ಅವರು ಸಮಾಜದಲ್ಲಿ ಕಟ್ಟ ಕಡೆಯ ಮನುಷ್ಯ ಮುಖ್ಯವಾಹಿನಿಗೆ ಬರಬೆಕಾದರೆ ಶಿಕ್ಷಣ ಬಹುಮುಖ್ಯ ಪಾತ್ರ ವಹಿಸುತ್ತದೆ,ಆದ್ದರಿಂದ ಪ್ರತಿಯೊಬ್ಬರೂ ಡಾ ಬಾಬಾ ಸಾಹೇಬ್ ಅಂಬೇಡ್ಕರ್ ರವರ ಆಶಯದಂತೆ ಶಿಕ್ಷಣಕ್ಕೆ ಹೆಚ್ಚಿನ ಆದ್ಯತೆ ನೀಡಬೇಕು ಅದರಿಂದ ಸಾಮಾಜಿಕವಾಗಿ, ರಾಜಕೀಯವಾಗಿ ಮತ್ತು ಆರ್ಥಿಕವಾಗಿ ಮುಂದೆ ಬರಲು ಸಾಧ್ಯವಾಗುತ್ತದೆ ಎಂದು ಹೇಳಿದರು.ಕೊರೋನಾ ಮಹಾಮಾರಿಯನ್ನು ತೋಲಗಿಸಲು ಸಂಕಲ್ಪ ಮಾಡುವ ಜೋತೆಗೆ ದೇಶವನ್ನು ಆಪತ್ತಿನಂದ ಪಾರು ಮಾಡಬೇಕಾಗೆದೆ ಎಂದರು.
ಈ ಸಂದರ್ಭದಲ್ಲಿ ಕಲಬುರಗಿ ಗ್ರಾಮೀಣ ಶಾಸಕರಾದ ಬಸವರಾಜ ಮತ್ತಿಮಡು,ಬಿಜೆಪಿ ಜಿಲ್ಲಾ ಉಪಾಧ್ಯಕ್ಷರು,ಮಾಜಿ ಜಿಲ್ಲಾ ಪಂಚಾಯತ್ ಮಾಜಿ ಅಧ್ಯಕ್ಷ ಅಂಬಾರಾಯ ಅಷ್ಠಗಿ, ಯುವ ಬಿಜೆಪಿ ಮುಖಂಡರಾದ ಶಿವಾ ಅಷ್ಠಗಿ, ವಿನೋದ ಬೋಮ್ಮಾ ಶಾಂತವೀರ ಬಡಿಗೇರ,ರಮೇಶ್ ಹುಲಿಮನಿ,ಜೀನೆಶ ಜ್ಯೋತಿ ಡಾ ಭೀಮಾಶಂಕರ್ ಸಾಗರ್ ಸೇರಿದಂತೆ ಮುಂತಾದವರಿದ್ದರು.
ಕಲಬುರಗಿ: ಮಹಿಳೆಯರ ಸಹಭಾಗಿತ್ವ ಮತ್ತು ಕೊಡುಗೆಯಿಲ್ಲದೆ ದೇಶದ ಸರ್ವಾಂಗೀಣ ಅಭಿವೃದ್ಧಿ ಅಸಾಧ್ಯ ಎಂದು ಶರಣಬಸವೇಶ್ವರ ವಿದ್ಯಾವರ್ಧಕ ಸಂಘದ ಅಧ್ಯಕ್ಷೆ ಮಾತೋಶ್ರೀ…
ಕಲಬುರಗಿ: ಕಲಬುರಗಿ ದಕ್ಷಿಣ ಮತಕ್ಷೇತ್ರದ ಶಾಸಕ ಅಲ್ಲಮಪ್ರಭು ಪಾಟೀಲ ಅವರು ಶನಿವಾರ ಸಂಜೆ ಕ್ಷೇತ್ರದ ಭೀಮಳ್ಳಿ ಗ್ರಾಮದ ರೈತರ ಹೊಲಗಳಿಗೆ…
ಕಲಬುರಗಿ: ಕಷ್ಟಗಳು ಬಂದಾಗ ಕುಗ್ಗದೆ, ಆ ಕಷ್ಟಗಳನ್ನು ಸವಾಲಾಗಿ ಸ್ವೀಕರಿಸಿ ಮೇಲೇಳಬೇಕು ಎಂದು ತಾಜ್ ನಗರದ ಆರೋಗ್ಯ ಕೇಂದ್ರದ ಹಿರಿಯ…
ಪರೋಪಕಾರ ಸೇವೆಯಿಂದ ಆತ್ಮತೃಪ್ತಿ: ಹಿರೇಮಠ ಕಲಬುರಗಿ: ನಗರ ಹೊರವಲಯದ ಸೈಯದ್ ಚಿಂಚೋಳಿ ರಸ್ತೆಯ ಬಳಿ ಇರುವ ಕೆವಿಪಿ ದಣ್ಣೂರ ಪಿಯು…
ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…
ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…