ಆಳಂದ: ಪಟ್ಟಣದ ಭಾರತೀಯ ಜನತಾ ಪಕ್ಷದ ಕಾರ್ಯಾಲಯದಲ್ಲಿ ಭಾರತದ ಸಂವಿಧಾನ ಶಿಲ್ಪಿ, ಮಹಾ ಮಾನವತಾವಾದಿ ಡಾ. ಬಿ ಆರ್ ಅಂಬೇಡ್ಕರ್ ಅವರ ಜಯಂತಿ ಆಚರಿಸಲಾಯಿತು.
ಶಾಸಕ ಸುಭಾಷ್ ಆರ್ ಗುತ್ತೇದಾರ ಡಾ. ಬಿ ಆರ್ ಅಂಬೇಡ್ಕರ್ ಭಾವಚಿತ್ರಕ್ಕೆ ಪೂಜೆ ಸಲ್ಲಿಸಿ ಗೌರವ ನಮನ ಸಲ್ಲಿಸಿದರು. ಈ ಸಂದರ್ಭದಲ್ಲಿ ಆಳಂದ ಮಂಡಲ ಅಧ್ಯಕ್ಷ ಆನಂದರಾವ ಪಾಟೀಲ ಕೊರಳ್ಳಿ, ಮುಖಂಡ ಮಲ್ಲಣ್ಣ ನಾಗೂರೆ, ಶ್ರೀಮಂತ ನಾಮಣೆ, ಶ್ರೀಶೈಲ ಖಜೂರೆ, ಮೀರ ಮಹ್ಮದ್, ಬಿಜೆಪಿ ಪ್ರದಾನ ಕಾರ್ಯದರ್ಶಿ ಪ್ರಕಾಶ ಮಾನೆ ಸೇರಿದಂತೆ ಇತರರು ಇದ್ದರು.