ಶಹಾಪುರ: ಇಂದು ಯಾದಗಿರಿ ಮತ್ತು ಕಲಬುರಗಿ ಗಡಿ ಚೆಕ್ ಪೋಸ್ಟ್ ಮುಡಬೂಳ ಕ್ರಾಸ್ ಹತ್ತಿರ ನಿರ್ಮಿಸಿರುವ ಚೆಕ್ ಪೋಸ್ಟ್ಗೆ ಯಾದಗಿರಿ ಜಿಲ್ಲಾ ಪೊಲೀಸ್ ತರಿಸಿದ ಅಧಿಕಾರಿ ರಿಷಿಕೇಶ್ ಭಗವಾನ್ ಸೋನಾಮಣಿ ಭೇಟಿ ನೀಡಿ ಪರಿಶೀಲಿಸಿದರು.
ಅನಾವಶ್ಯಕವಾಗಿ ರಸ್ತೆಗಿಳಿದಿರುವ ವಾಹನಗಳು ಪರಿಶೀಲಿಸಿ ಯಾವುದೇ ಕಾರಣಕ್ಕೂ ಬೇರೆ ಜಿಲ್ಲೆಯಿಂದ ಬರುವ ವಾಹನಗಳಿಗೆ ಪ್ರವೇಶ ನೀಡಬಾರದು ಎಂದು ಬಿ.ಗುಡಿ ಪೊಲೀಸ್ ಠಾಣೆಯ ಪಿಎಸ್ಐ ರಾಜಕುಮಾರ್ ಜಾಮಗೊಂಡ ಅವರಿಗೆ ಹೇಳಿದರು.
ಯಾರೇ ಆಗಿರಲಿ ಪ್ರತಿಯೊಬ್ಬರು ಸರಕಾರದ ನಿಯಮವನ್ನು ಉಲ್ಲಂಘನೆ ಮಾಡಬಾರದು ನಿಯಮ ಉಲ್ಲಂಘಿಸಿದವರನ್ನು ಸ್ಥಳದಲ್ಲಿರುವ ಅಧಿಕಾರಿಗಳು ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಬೇಕೆಂದು ಮನವರಿಕೆ ಮಾಡಿಕೊಟ್ಟರು.