ಕಲಬುರಗಿ: ಕಲಬುರಗಿ ಭ್ರಷ್ಟಾಚಾರ ನಿಗ್ರಹ ದಳ ಪೊಲೀಸ್ ಠಾಣೆಯ ಅಧಿಕಾರಿಗಳು ಕೆಳಕಂಡ ದಿನಾಂಕಗಳಂದು ಪ್ರತಿದಿನ ಬೆಳಗಿನ 10 ರಿಂದ ಮಧ್ಯಾಹ್ನ 1 ಗಂಟೆಯವರೆಗೆ ಜಿಲ್ಲೆಯ ವಿವಿಧ ತಾಲೂಕುಗಳಿಗೆ ಭೇಟಿ ನೀಡಿ ಕಲಬುರಗಿ ಎಸಿಬಿ ಪೊಲೀಸ್ ಠಾಣಾ ಮಟ್ಟದ ಜನಸಂಪರ್ಕ ಸಭೆಗಳನ್ನು ನಡೆಸಲಿದ್ದಾರೆ ಎಸಿಬಿ ಪೊಲೀಸ್ ಠಾಣೆಯ ಅರಕ್ಷಕ ಉಪಾಧೀಕ್ಷಕರಾದ ಸುಧಾ ಆದಿ ಅವರು ತಿಳಿಸಿದ್ದಾರೆ.
ಪೊಲೀಸ್ ಇನ್ಸ್‌ಪೆಕ್ಟರ್ ಮಹ್ಮದ ಇಸ್ಮಾಯಿಲ್ (ಮೊಬೈಲ್ ಸಂಖ್ಯೆ 9480806309) ಅವರು ಮೇ 17 ರಂದು ಶಹಾಬಾದ ತಾಲೂಕು ಪ್ರವಾಸಿ ಮಂದಿರದಲ್ಲಿ, ಮೇ 18 ರಂದು ಕಮಲಾಪುರ ಗ್ರಾಮ ಪಂಚಾಯಿತಿ ಸಭಾಂಗಣದಲ್ಲಿ ಹಾಗೂ ಮೇ 20 ರಂದು ಯಡ್ರಾಮಿ ತಾಲೂಕು ಪ್ರವಾಸಿ ಮಂದಿರದಲ್ಲಿ ಜನಸಂಪರ್ಕ ಸಭೆ ನಡೆಸುವರು.
ಪೊಲೀಸ್ ಇನ್ಸ್‌ಪೆಕ್ಟರ್ ಕಷ್ಣಪ್ಪ ಕಲ್ಲದೇವರು (ಮೊಬೈಲ್ ಸಂಖ್ಯೆ 9480806310) ಅವರು ಮೇ 22 ರಂದು ಸೇಡಂ ತಾಲೂಕು ಪ್ರವಾಸಿ ಮಂದಿರದಲ್ಲಿ, ಮೇ 24 ರಂದು ಆಳಂದ ತಾಲೂಕು ಪ್ರವಾಸಿ ಮಂದಿರದಲ್ಲಿ ಹಾಗೂ ಮೇ 25 ರಂದು ಅಫಜಲಪುರ ತಾಲೂಕು ಪ್ರವಾಸಿ ಮಂದಿರದಲ್ಲಿ ಜನಸಂಪರ್ಕ ಸಭೆ ನಡೆಸುವರು.
ಈ ಹಿಂದೆ ಆಯಾ ತಾಲೂಕುಗಳಲ್ಲಿ ಜನಸಂಪರ್ಕ ಸಭೆ ನಡೆಸಲು ದಿನಾಂಕವನ್ನು ನಿಗದಿಪಡಿಸಲಾಗಿತ್ತು. ಆದರೆ ಎಸಿಬಿ ಅಧಿಕಾರಿಗಳು ಠಾಣಾ ಗುನ್ನೆ ನಂ. 02/2019 ಮತ್ತು 03/2019ರನ್ವಯ ತನಿಖೆ ಕಾರ್ಯದಲ್ಲಿ ತೊಡಗಿರುವ ಹಿನ್ನೆಲೆಯಲ್ಲಿ ಜನಸಂಪರ್ಕ ಸಭೆ ನಡೆಸಿರುವುದಿಲ್ಲ. ಅದರಂತೆ ಮೇಲ್ಕಂಡ ಜನಸಂಪರ್ಕ ಸಭೆಯ ದಿನಾಂಕದಲ್ಲಿ ಬದಲಾವಣೆ ಮಾಡಲಾಗಿದೆ ಎಂದು ಅವರು ತಿಳಿಸಿದ್ದಾರೆ.