ಬಿಸಿ ಬಿಸಿ ಸುದ್ದಿ

ಶಾಸಕ ಮತ್ತಿಮುಡು ಅವರಿಂದ ದಿನ ಬಳಕೆ ಸಾಮಾಗ್ರಿಗಳ 500ಕಿಟ್ ವಿತರಣೆ

ಶಹಾಬಾದ್: ನಗರದ ರಾಮಗಡ ವಾರ್ಡಿನಲ್ಲಿ ಮಾನ್ಯ ಬ‌ಸವರಾಜ ಮತ್ತಿಮೂಡ ಶಾಸಕರು ಬಡವರು, ನಿರ್ಗತಿಕರು ಹಾಗೂ ಅಲೆಮಾರಿ ಜನಾಂಗದವರಿಗೆ ಆಹಾರ ಪದಾರ್ಥಗಳ ಗೋಧಿ ಹಿಟ್ಟು, ತೊಗರಿ ಬೇಳೆ, ಸಕ್ಕರೆ, ಚಹಾಪತ್ತಿ, ಅರಿಶಿಣ ಪುಡಿ, ಮೆಣಸಿನಕಾಯಿ ಪುಡಿ, ಇತ್ಯಾದಿ ಪದಾರ್ಥಗಳು) ಮತ್ತು 1000 ಮಾಸ್ಕಗಳನ್ನು ಹಾಗೂ ‌ಸ್ಯಾನಿಟೈಜರಗಳನ್ನು 500 ಕಿಟ್ ಗಳು ವಿತರಿಸಿದರು.

ಸಂವಿಧಾನ ಶಿಲ್ಪಿ ಡಾಕ್ಟರ್ ಬಾಬಾ ಸಾಹೇಬ್ ಅಂಬೇಡ್ಕರ್ ರವರ ಜಯಂತಿಯ ದಿನದಂದು ಹಾಗೂ ಪ್ರಧಾನಿ ನರೇಂದ್ರ ಮೋದಿ ಯವರು ಇಂದು ರಾಷ್ಟ್ರವನ್ನು ಉದ್ದೇಶಿಸಿ ಮಾತನಾಡಿದ ಅಂಶವನ್ನು ಗಮನದಲ್ಲಿಟ್ಟುಕೊಂಡು ಇಂದು ಬಡವರಿಗೆ ಆಹಾರದ ಕಿಟ್ ಗಳನ್ನು ವಿತರಿಸಿರುವದರಲ್ಲಿ ಸಾರ್ಥಕತೆ ಭಾವ ಶಾಸಕರ ಮುಖದಲ್ಲಿ ಎದ್ದು ಕಾಣುತ್ತಿತ್ತು.

ಈ ಕ್ಷಣಕ್ಕೆ ಸಾಕ್ಷಿಯಾದವರು, ಶಹಾಬಾದ ಮಂಡಲ ಅಧ್ಯಕ್ಷರಾದ ಅಣವೀರ ಇಂಗಿನಶೆಟ್ಟಿ, ಸುಭಾಶ್ ಜಾಪೂರ, ನಿಂಗಣ್ಣ ಹುಳಗೋಳಕರ, ಅರುಣ್ ಪಟ್ಟಣಕರ, ಪಂಡಿತ್, ಚುನಾಯಿತ ಪ್ರತಿನಿಧಿಗಳು,ಮಾಜಿ ಪುರಸಭಾ ಸದಸ್ಯರು, ಪಕ್ಷದ ಪದಾಧಿಕಾರಿಗಳು, ಹಾಗೂ ಹಿರಿಯ ನಾಯಕರು ಉಪಸ್ಥಿತರಿದ್ದರು.

 

emedialine

Recent Posts

ಮಹಿಳಾ ಸಹಭಾಗಿತ್ವ ಇಲ್ಲದೆ ದೇಶದ ಅಭಿವೃದ್ಧಿ ಅಸಾಧ್ಯ: ಮಾತೋಶ್ರೀ ಡಾ. ಅವ್ವಾಜಿ

ಕಲಬುರಗಿ: ಮಹಿಳೆಯರ ಸಹಭಾಗಿತ್ವ ಮತ್ತು ಕೊಡುಗೆಯಿಲ್ಲದೆ ದೇಶದ ಸರ್ವಾಂಗೀಣ ಅಭಿವೃದ್ಧಿ ಅಸಾಧ್ಯ ಎಂದು ಶರಣಬಸವೇಶ್ವರ ವಿದ್ಯಾವರ್ಧಕ ಸಂಘದ ಅಧ್ಯಕ್ಷೆ ಮಾತೋಶ್ರೀ…

4 hours ago

ತೊಗರಿ ಬೆಳೆ‌ ಹಾನಿ ಪ್ರದೇಶ ವೀಕ್ಷಿಸಿದ ಶಾಸಕ ಅಲ್ಲಮಪ್ರಭು ಪಾಟೀಲ

ಕಲಬುರಗಿ: ಕಲಬುರಗಿ ದಕ್ಷಿಣ ಮತಕ್ಷೇತ್ರದ ಶಾಸಕ ಅಲ್ಲಮಪ್ರಭು ಪಾಟೀಲ ಅವರು ಶನಿವಾರ ಸಂಜೆ ಕ್ಷೇತ್ರದ ಭೀಮಳ್ಳಿ ಗ್ರಾಮದ ರೈತರ ಹೊಲಗಳಿಗೆ…

14 hours ago

ಕಷ್ಟಗಳಿಗೆ ಕುಗ್ಗದೇ ಸವಾಲಾಗಿ ಸ್ವಿಕರಿಸಿ

ಕಲಬುರಗಿ: ಕಷ್ಟಗಳು ಬಂದಾಗ ಕುಗ್ಗದೆ, ಆ ಕಷ್ಟಗಳನ್ನು ಸವಾಲಾಗಿ ಸ್ವೀಕರಿಸಿ ಮೇಲೇಳಬೇಕು ಎಂದು ತಾಜ್ ನಗರದ ಆರೋಗ್ಯ ಕೇಂದ್ರದ ಹಿರಿಯ…

14 hours ago

ಕಲಬುರಗಿ: ಹಾಸ್ಯ ಕಲಾವಿದ ರೇವಣಸಿದ್ಧ ಸ್ವಾಮಿ ದಂಪತಿಗೆ ಗೆಳೆಯರ ಬಳಗದಿಂದ ಸತ್ಕರಿಸಲಾಯಿತು.

ಪರೋಪಕಾರ ಸೇವೆಯಿಂದ ಆತ್ಮತೃಪ್ತಿ: ಹಿರೇಮಠ ಕಲಬುರಗಿ: ನಗರ ಹೊರವಲಯದ ಸೈಯದ್ ಚಿಂಚೋಳಿ ರಸ್ತೆಯ ಬಳಿ ಇರುವ ಕೆವಿಪಿ ದಣ್ಣೂರ ಪಿಯು…

14 hours ago

ಸಾವಿರ ಸೀರೆ ವಿತರಿಸಿ ಸಚಿವ ಪ್ರಿಯಾಂಕ್ ಜನ್ಮದಿನ ಆಚರಣೆ

  ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…

1 day ago

ಮೂರೂ ಕ್ಷೇತ್ರದಲ್ಲಿ ಕಾಂಗ್ರೆಸ್ ಗೆಲುವು: ಕಾರ್ಯಕರ್ತರಿಂದ ವಿಜಯೋತ್ಸವ

ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…

1 day ago