ಬಿಸಿ ಬಿಸಿ ಸುದ್ದಿ

ಚಿಂಚೋಳಿ ಕ್ಷೇತ್ರದ ಮತದಾನ ಸರಕಾರ ಬದಲಿಸುತ್ತದೆ: ಮಾಜಿ ಸಚಿವ ಅರವಿಂದ್ ಲಿಂಬಾವಳಿ

ಕಲಬುರಗಿ: ಚಿಂಚೋಳಿ ವಿಧಾನಸಭಾ ಕ್ಷೇತ್ರದ ಉಪ ಚುನಾವಣಾ ಪ್ರಚಾರದಲ್ಲಿ ಮಾಜಿ ಸಚಿವ ಅರವಿಂದ್ ಲಿಂಬಾವಳಿ ಕೊಡ್ಲ ಗ್ರಾಮದಲ್ಲಿ ಮಾತನಾಡುತ್ತಾ ಕೇಂದ್ರದಲ್ಲಿ ಮೋದಿ ಸರ್ಕಾರ ಮತ್ತೊಮ್ಮೆ ಬರುವುದು ನಿಶ್ಚಿತ ಅಲ್ಲದೆ ಬಹಳಷ್ಟು ಬಡವರಿಗಾಗಿ ಕಾರ್ಯಕ್ರಮಗಳನ್ನು ಕೊಟ್ಟಿದ್ದಾರೆ ಅದೇ ರೀತಿ ಇಲ್ಲಿ ಉಪಚುನಾವಣೆಯಲ್ಲಿ ತಮ್ಮ ಒಂದು ಮತದಾನ ರಾಜ್ಯದ ಸರ್ಕಾರ ಬದಲಾಯಿಸುತ್ತದೆ ರಾಜ್ಯದಲ್ಲಿ ಮತ್ತೊಮ್ಮೆ ಬಿ.ಎಸ್ ಯಡಿಯೂರಪ್ಪನವರು ಮುಖ್ಯಮಂತ್ರಿ ಆಗಲಿದ್ದಾರೆ.

ಅವರು ಚಿಂಚೋಳಿ ಕ್ಷೇತ್ರದ ಉಪ ಚುನಾವಣೆ ಪ್ರಚಾರ ಸಭೆಯಲ್ಲಿ ಮಾತನಾಡಿ, ಚಿಂಚೋಳಿ ಮತ್ತು  ಕಂದಗೋಳ ಉಪಚುನಾವಣೆಯಲ್ಲಿ ಎರಡು ಕ್ಷೇತ್ರ ಗೆಲ್ಲುತ್ತೇವೆ ಹೀಗಾಗಿ ನಮ್ಮ ಸಮಾಜದ ಮತದಾರರು ಯಾವುದೇ ಆಮಿಷಕ್ಕೆ ಒಳಗಾಗದೆ ತಮ್ಮ ಅಮೂಲ್ಯವಾದ ಮತ ಬಿಜೆಪಿ ಅಭ್ಯರ್ಥಿ ಅವಿನಾಶ್ ಜಾದವ್ ಅವರಿಗೆ ನೀಡಬೇಕಾಗಿ ವಿನಂತಿಸಿದ್ದಾರೆ.

ಅವಿನಾಶ್ ಜಾಧವ್ ಗೆದ್ದರೆ ನಮ್ಮ ಸಮಾಜದ ಸುನಿಲ್ ವಲ್ಯಪೂರ್ ವಿಧಾನಪರಿಷತ್ ಸದಸ್ಯರಾಗಲಿದ್ದಾರೆ ಸರ್ಕಾರ ಬಂದರೆ ನಾನು ಮಂತ್ರಿಯಾಗುತ್ತಾನೆ ಹೀಗಾಗಿ ತಮ್ಮ ಮತ ಬಿಜೆಪಿಗೆ ಹಾಕಿ ಎಂದು ಮತದಾರರಲ್ಲಿ ಮನವಿ ಮಾಡಿದರು.

ನಂತರ ಬಿಜೆಪಿ ರಾಜ್ಯ ಪ್ರಧಾನ ಕಾರ್ಯದರ್ಶಿ ಹಾಗೂ ಬಿಜೆಪಿ ಚುನಾವಣೆ ಉಸ್ತುವಾರಿ ಎನ್ ರವಿಕುಮಾರ್ ಚಿಂಚೋಳಿ ವಿಧಾನಸಭಾ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿ ಅವಿನಾಶ್ ಜಾದವ್ ರವರ ಪರವಾಗಿ ಚಿಮ್ಮಂಚೋಡ್ ಗ್ರಾಮದಲ್ಲಿ ರೂಟ್ ಶೋದ ನಡೆಸಿ, ಮತಯಾಚನೆ ನಡೆಸಿದರು. ಶಾಸಕರಾದ ಬಸವರಾಜ್ ಮತ್ತಿಮೂಡ್ ಉಮೇಶ್ ಜಾಧವ್ , ಸೇರಿದಂತೆ ಪಕ್ಷದ ಮುಖಂಡರು ಹಾಗೂ ಕಾರ್ಯಕರ್ತರು ಭಾಗಿಯಾಗಿದ್ದರು.

emedialine

Recent Posts

ಸಾವಿರ ಸೀರೆ ವಿತರಿಸಿ ಸಚಿವ ಪ್ರಿಯಾಂಕ್ ಜನ್ಮದಿನ ಆಚರಣೆ

  ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…

15 hours ago

ಮೂರೂ ಕ್ಷೇತ್ರದಲ್ಲಿ ಕಾಂಗ್ರೆಸ್ ಗೆಲುವು: ಕಾರ್ಯಕರ್ತರಿಂದ ವಿಜಯೋತ್ಸವ

ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…

17 hours ago

ಸಿದ್ದಸಿರಿ ಹೋರಾಟ ಪ್ರಾಯೋಜಿತ: ಶರಣು ಪಾಟೀಲ್

ಚಿಂಚೋಳಿ: ಕಾನೂನು ತೊಡಕಿನಿಂದ ಸ್ಥಗಿತಗೊಂಡ ಸಿದ್ದಸಿರಿ ಎಥೆನಾಲ್ ಕಾರ್ಖಾನೆ ಪ್ರಾರಂಭಕ್ಕೆ ಕರ್ನಾಟಕ ಮಾಲಿನ್ಯ ನಿಯಂತ್ರಣ ಮಂಡಳಿ ಅನುಮತಿ ನೀಡಬೇಕೆಂದು ಒತ್ತಾಯಿಸಿ…

1 day ago

ಸಿದ್ದ ಶ್ರೀ ಕಾರ್ಖಾನೆ ಪ್ರಾರಂಭವಾಗುವರೆಗೂ ಹೋರಾಟ: ವೀರಣ್ಣ ಗಂಗಾಣಿ

ಚಿಂಚೋಳಿ: ಸಿದ್ದಶ್ರೀ ಕಾರ್ಖಾನೆ ಪ್ರಾರಂಭ ಮಾಡಲು ರೈತರು ಹಗಲು ರಾತ್ರಿ ಎನ್ನದೆ ಬಸವೇಶ್ವರ ಉತ್ತರ ಬಳಿ ಧರಣಿಯಲ್ಲಿ ಹೋರಾಟ ಮಾಡುತ್ತಿದ್ದು.…

1 day ago

ದಕ್ಷಿಣ ಭಾರತ ಅಂತರ ವಿಶ್ವವಿದ್ಯಾಲಯ ಮಹಿಳೆಯರ ಕಬಡ್ಡಿ ಕ್ರೀಡಾಕೂಟಕ್ಕೆ ಆಯ್ಕೆ

ಕಲಬುರಗಿ: ನವೆಂಬರ್ 29 ರಿಂದ 2 ಡಿಸೇಂಬರ್ ವರೆಗೆ ತಮಿಳುನಾಡಿನ ಅಲಗಪ್ಪ ವಿಶ್ವವಿದ್ಯಾಲಯ ಕರೈಕುಡಿಯಲ್ಲಿ ನಡೆಯುವ ದಕ್ಷಿಣ ಭಾರತ ಅಂತರ…

1 day ago

ಪ್ರಿಯಾಂಕ್ ಖರ್ಗೆ ಜನ್ಮದಿನ; ರಕ್ತದಾನ ಶಿಬಿರಕ್ಕೆ ಶಾಸಕ ಪಾಟೀಲ ಚಾಲನೆ

ಕಲಬುರಗಿ: ನಗರದ ವಾರ್ಡ ನಂ.51.ರ  ಜೇವರ್ಗಿ ಕಾಲೋನಿ ವಾಟರ್ ಟ್ಯಾಂಕ್ ಹತ್ತಿರದ ಉದ್ಯವನದಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಪ್ರಿಯಾಂಕ ಖರ್ಗೆ…

1 day ago