ಕಲಬುರಗಿ: ಕಮಲಾಪೂರ ತಾಲೂಕಿನ ಓಕಳ್ಳಿ ಗ್ರಾಮ ಪಂಚಾಯತಿಯಲ್ಲಿ ಕೊರೋನಾ ಲಾಕ್ ಡೌನ್ ಹಿನ್ನೆಲೆಯಲ್ಲಿ ಅಂಗನವಾಡಿ ಕಾರ್ಯಕರ್ತರಿಗೆ ಉಚಿತವಾಗಿ ಹ್ಯಾಂಡ್ ಗ್ಲೋಸ್ಜ್, ಮಾಸ್ಕ್, ಸೇನಿಟೈಜರ್‌ಗಳನ್ನು ಕಮಲಾಪೂರ ತಹಸೀಲ್ದಾರ್ ಅಂಜುಮ್ ತಬಸುಮ್ ವಿತರಿಸಿದರು. ಓಕಳ್ಳಿ ಗ್ರಾಮ ಪಂಚಾಯತ್ ಅಧ್ಯಕ್ಷ ಹಾಗೂ ಬಹುಜನ ಸಮಾಜ ಪಕ್ಷದ ಜಿಲ್ಲಾ ಅಧ್ಯಕ್ಷ ವಿಜಯಕುಮಾರ ಶೆಟ್ಟಿ ಓಕಳ್ಳಿ, ಕಮಲಾಪೂರ ಕಾರ್ಯನಿರ್ವಾಹಕ ಅಧಿಕಾರಿ ಜಗದೇವಪ್ಪ, ಗ್ರಾಮ ಪಂಚಾಯತ್ ಅಭಿವೃದ್ದಿ ಅಧಿಕಾರಿ ಆರಾಧನಾ, ಅಲ್ಲಾಭಕ್ಷ, ಪುಷ್ಪ, ವಿನೋದ ತಲಾಟೆ, ಗ್ರಾಮ ಪಂಚಾಯತ್ ಉಪಾಧ್ಯಕ್ಷ ಹಾಗೂ ಗ್ರಾಮಸ್ಥರು ಉಪಸ್ಥಿತರಿದ್ದರು.