ಕಲಬುರಗಿ: ಮಹಾಮಾರಿ ಕೊರೋನಾ ವೈರಸ್ ಒಂದೇ ದಿನದಲ್ಲಿ ಮೂವರು ಜನರಿಗೆ ಕೋವಿಡ್ -19 ವೈರಸ್ ತಗಲಿರುವ ಬಗ್ಗೆ ವೈದ್ಯಕೀಯ ವರದಿ ದೃಢಪಡಿಸಿದೆ. ಜಿಲ್ಲೆಯಲ್ಲಿ ಇದೂವರೆಗೆ ಕೊರೋನಾ ಪೀಡಿತರ ಸಂಖ್ಯೆ 20ಕ್ಕೆ ಏರಿಕೆಯಾಗಿದ್ದು, ಇದರಲ್ಲಿ ಮೂವರು ನಿಧನ ಹೊಂದಿದ್ದಾರೆ. 3 ಜನ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಗೊಂಡಿದ್ದಾರೆ ಎಂದು ಜಿಲ್ಲಾಧಿಕಾರಿ ಶರತ್ ಬಿ ತಿಳಿಸಿದ್ದಾರೆ.
ಇಂದು ಮಧ್ಯಾಹ್ನ 23 ವರ್ಷದ ಮಹಿಳೆಗೆ ಸೋಂಕು ತಗಲಿರುವ ಬಗ್ಗೆ ದೃಢಪಟ್ಟಿತ್ತು. ನಂತರ ಸಂಜೆ ಬಂದ ವರದಿಯಲ್ಲಿ ಇಬ್ಬರಿಗೆ ವೈರಸ್ ತಗುಲಿರುವುದು ದೃಢಪಟ್ಟಿದ್ದು, ಐದು ವರ್ಷದ ಬಾಲಕ ಮತ್ತು 32 ವರ್ಷದ ಯುವಕನಿಗೆ ಕೊರೋನಾ ಪಾಸಿಟಿವ್ ಇರುವುದಾಗಿ ವೈದ್ಯಕೀಯ ವರದಿ ಖಚಿತ ಪಡಿಸಿದೆ.
ಇದರಲ್ಲಿ 32 ವರ್ಷದ ವ್ಯಕ್ತಿ ಬೆಂಗಳೂರಿಗೆ ಪ್ರಯಾಣ ಮಾಡಿದ ಹಿನ್ನೆಲೆ ಹೊಂದಿದ್ದಾರೆ ಎಂದು ತಿಳಿದುಬಂದಿದೆ.
ಪ್ರಸ್ತುತ ಪೀಡಿತರೇಲ್ಲರು ಇ.ಎಸ್.ಐ.ಸಿ. ಐಸೋಲೇಷನ್ ವಾರ್ಡ್ ನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಶಂಕಿತ ಪೀಡಿತರನ್ನು ಕ್ವಾರೆಂಟೈನ್ ಲ್ಲಿ ಇಟ್ಟು ನಿಗಾ ಇಡಲಾಗಿದೆ.
ಕಲಬುರಗಿ: ಮಹಿಳೆಯರ ಸಹಭಾಗಿತ್ವ ಮತ್ತು ಕೊಡುಗೆಯಿಲ್ಲದೆ ದೇಶದ ಸರ್ವಾಂಗೀಣ ಅಭಿವೃದ್ಧಿ ಅಸಾಧ್ಯ ಎಂದು ಶರಣಬಸವೇಶ್ವರ ವಿದ್ಯಾವರ್ಧಕ ಸಂಘದ ಅಧ್ಯಕ್ಷೆ ಮಾತೋಶ್ರೀ…
ಕಲಬುರಗಿ: ಕಲಬುರಗಿ ದಕ್ಷಿಣ ಮತಕ್ಷೇತ್ರದ ಶಾಸಕ ಅಲ್ಲಮಪ್ರಭು ಪಾಟೀಲ ಅವರು ಶನಿವಾರ ಸಂಜೆ ಕ್ಷೇತ್ರದ ಭೀಮಳ್ಳಿ ಗ್ರಾಮದ ರೈತರ ಹೊಲಗಳಿಗೆ…
ಕಲಬುರಗಿ: ಕಷ್ಟಗಳು ಬಂದಾಗ ಕುಗ್ಗದೆ, ಆ ಕಷ್ಟಗಳನ್ನು ಸವಾಲಾಗಿ ಸ್ವೀಕರಿಸಿ ಮೇಲೇಳಬೇಕು ಎಂದು ತಾಜ್ ನಗರದ ಆರೋಗ್ಯ ಕೇಂದ್ರದ ಹಿರಿಯ…
ಪರೋಪಕಾರ ಸೇವೆಯಿಂದ ಆತ್ಮತೃಪ್ತಿ: ಹಿರೇಮಠ ಕಲಬುರಗಿ: ನಗರ ಹೊರವಲಯದ ಸೈಯದ್ ಚಿಂಚೋಳಿ ರಸ್ತೆಯ ಬಳಿ ಇರುವ ಕೆವಿಪಿ ದಣ್ಣೂರ ಪಿಯು…
ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…
ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…