ಶಹಾಬಾದ: ಕೊರೊನಾ ವೈರಸ್ ದಿನದಿಂದ ದಿನಕ್ಕೆ ಸಂಖ್ಯೆಯನ್ನು ವ್ಯಾಪಿಸುತ್ತಿರುವುದರಿಂದ ಭೀತಿ ಪ್ರಾರಂಭವಾಗಿದೆ. ಕೊರೊನಾ ಭೀತಿ ಹಿನ್ನೆಲೆಯಲ್ಲಿ ಮೇ 3 ರವರೆಗೂ ಲಾಕ್ ಡೌನ್ ಜಾರಿಯಾಗಿದೆ. ಸಮಾಜದ ನಾಗರಿಕರ ಆರೋಗ್ಯ ಹಿತದೃಷ್ಟಿಯಿಂದ ಪ್ರಧಾನಿ ಮೋದಿಯವರು ಲಾಕ್‍ಡೌನ್ ಆದೇಶವನ್ನು ಸಾರ್ವಜನಿಕರು ಪಾಲಿಸುವ ಮೂಲಕ ಕೈ ಜೋಡಿಸಬೇಕೆಂದು ನಗರ ಬಿಜೆಪಿ ಮಾಜಿ ಅಧ್ಯಕ್ಷ ಸುಭಾಷ ಜಾಪೂರ ಮನವಿ ಮಾಡಿದ್ದಾರೆ.
ಅಮೇರಿಕಾ, ಇಟಲಿ ಸೇರಿದಂತೆ ಅನೇಕ ದೇಶಗಳಲ್ಲಿ ಕೊರೊನಾ ಅನೇಕ ಜೀವಗಳನ್ನು ಬಲಿ ತೆಗೆದುಕೊಂಡಿದೆ. ದೇಶದಲ್ಲಿ ವೈರಸ್ ಹರಡುವಿಕೆ ಹೆಚ್ಚಾಗುತ್ತಿದೆ. ಇದರಿಂದ ಸಾವಿನ ಸಂಖ್ಯೆಯೂ ಹೆಚ್ಚಾಗುತ್ತಿರುವುದು ಆತಂಕಕಾರಿ ಬೆಳವಣಿಗೆ.ಆದ್ದರಿಂದ ಸಾರ್ವಜನಿಕರು ಮನೆಯಿಂದ ಯಾರು ಹೊರಗಡೆ ಬರಬೇಡಿ. ಮನೆಯ ಸುತ್ತಮುತ್ತ, ದೇವಸ್ಥಾನ ಇತರ ಪ್ರದೇಶಗಳಲ್ಲಿ ಕುಳಿತು ಹರಟೆ ಹೊಡೆಯಬೇಡಿ. ಈ ಬಗ್ಗೆ ನಿಷ್ಕಾಳಜಿ ತೋರಿದರೇ ನಿಮ್ಮ ಮತ್ತು ನಿಮ್ಮ ಕುಟುಂಬದವರ ಜೀವಕ್ಕೂ ನೀವು ಕುತ್ತು ತರಬಹುದು.
ಆದ್ದರಿಂದ ಎಲ್ಲಾ ಜನರೂ ಮನೆಯಲ್ಲಿರುವುದು ಇದಕ್ಕೆ ಮದ್ದು.ಹೊರಗೆ ಹೋಗಬೇಕಾದ ಪ್ರಸಂಗ ಬಂದರೇ ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಪಾಡುವ ಮೂಲಕ ಈ ರೋಗವನ್ನು ಬರದಂತೆ ನೋಡಿಕೊಳ್ಳುವ ಜವಾಬ್ದಾರಿ ನಮ್ಮೆಲ್ಲರದಾಗಿದೆ.ಆದ್ದರಿಂದ ಸರ್ಕಾರದ ನಿಯಮಗಳನ್ನು ಕಡ್ಡಾಯವಾಗಿ ಪಾಲಿಸುವಂತೆ ಜಾಪೂರ ಮನವಿ ಮಾಡಿದರು.
ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…
ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…
ಚಿಂಚೋಳಿ: ಕಾನೂನು ತೊಡಕಿನಿಂದ ಸ್ಥಗಿತಗೊಂಡ ಸಿದ್ದಸಿರಿ ಎಥೆನಾಲ್ ಕಾರ್ಖಾನೆ ಪ್ರಾರಂಭಕ್ಕೆ ಕರ್ನಾಟಕ ಮಾಲಿನ್ಯ ನಿಯಂತ್ರಣ ಮಂಡಳಿ ಅನುಮತಿ ನೀಡಬೇಕೆಂದು ಒತ್ತಾಯಿಸಿ…
ಚಿಂಚೋಳಿ: ಸಿದ್ದಶ್ರೀ ಕಾರ್ಖಾನೆ ಪ್ರಾರಂಭ ಮಾಡಲು ರೈತರು ಹಗಲು ರಾತ್ರಿ ಎನ್ನದೆ ಬಸವೇಶ್ವರ ಉತ್ತರ ಬಳಿ ಧರಣಿಯಲ್ಲಿ ಹೋರಾಟ ಮಾಡುತ್ತಿದ್ದು.…
ಕಲಬುರಗಿ: ನವೆಂಬರ್ 29 ರಿಂದ 2 ಡಿಸೇಂಬರ್ ವರೆಗೆ ತಮಿಳುನಾಡಿನ ಅಲಗಪ್ಪ ವಿಶ್ವವಿದ್ಯಾಲಯ ಕರೈಕುಡಿಯಲ್ಲಿ ನಡೆಯುವ ದಕ್ಷಿಣ ಭಾರತ ಅಂತರ…
ಕಲಬುರಗಿ: ನಗರದ ವಾರ್ಡ ನಂ.51.ರ ಜೇವರ್ಗಿ ಕಾಲೋನಿ ವಾಟರ್ ಟ್ಯಾಂಕ್ ಹತ್ತಿರದ ಉದ್ಯವನದಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಪ್ರಿಯಾಂಕ ಖರ್ಗೆ…
View Comments
Jaan nu jaragusuadarina matadaukhyastaru kaanunu chowakatinali horadutaare aadare NCOVI-19 hoddodesalu agatya mulasawkaragalu vadagisi, matu vaidakeyanearavu nedabeaku.