ಬಿಸಿ ಬಿಸಿ ಸುದ್ದಿ

ಕುಲಸಚಿವರ ಭರವಸೆ: ವಿವಿ ಅತಿಥಿ ಉಪನ್ಶಾಸಕರಿಗೆ ಮಾರ್ಚ್ ವೇತನ ನಾಳೆ ಜಮಾ

ಕಲಬುರಗಿ: ಗುಲಬರ್ಗಾ ವಿಶ್ವವಿದ್ಶಾಲಯದಲ್ಲಿ ಕಾರ್ಯನಿರ್ವಹಿಸುತ್ತಿರುವ ಅತಿಥಿ ಉಪನ್ಶಾಸಕರ ಮಾರ್ಚ್ˌ ಎಪ್ರೀಲ್ ಮತ್ತು ಮೇ ತಿಂಗಳ ವೇತನವನ್ನು ತಕ್ಷಣವೇ ಬಿಡುಗಡೆ ಮಾಡುವಂತೆ ಸಂಘದ ಅಧ್ಶಕ್ಷ ಡಾ.ಅರುಣಕುಮಾರ ಕುರ್ನೆ ಹಾಗೂ ಸಂಘಟನಾ ಕಾರ್ಯದರ್ಶಿ ಡಾ.ಶಂಬುಲಿಂಗ ನಡಗೇರಿ ನೇತ್ರತ್ವದಲ್ಲಿ ಕುಲಸಚಿವ ಪ್ರೊ.ಸಿ. ಸೋಮಶೇಖರ ಅವರಿಗೆ ಮನವಿ ಸಲ್ಲಿಸಲಾಯಿತು.

ಈ ವೇಳೆ ಮಾತನಾಡಿದ ಡಾ.ಅರುಣಕುಮಾರ ಕುರ್ನೆˌ ಕೊರೊನಾ ರೋಗದಿಂದ ದೇಶವೇ ಲಾಕ್ ಡೌನ್ ಆಗಿರುವುದು ಎಲ್ಲರಿಗೂ ಗೊತ್ತಿರುವ ವಿಷಯ. ಇಂತಹ ಸಮಯದಲ್ಲಿ ಅತಿಥಿ ಉಪನ್ಶಾಸಕರೂ ಸಹ ತುಂಬಾ ಸಂಕಷ್ಟದಲ್ಲಿದ್ದಾರೆ. ಗುಲಬರ್ಗಾ ವಿಶ್ವವಿದ್ಶಾಲಯದ ವ್ಶಾಪ್ತಿಯಲ್ಲಿರುವ ಕ್ಶಾಂಪಸ್ˌ ಬೀದರ ಮತ್ತು ರಾಯಚೂರ ವ್ಶಾಪ್ತಿಯಲ್ಲಿ ಬರುವ ಅಧ್ಶಯನ ಕೇಂದ್ರಗಳಲ್ಲಿ ಬೋಧಿಸುತ್ತಿರುವ ಎಲ್ಲರಿಗೂ ಮೂರು ತಿಂಗಳ ವೇತನ ಬಿಡುಗಡೆ ಮಾಡುವಂತೆ ಮನವಿ ಸಲ್ಲಿಸಿದರು.

ಇದಕ್ಕೆ ಸ್ಪಂದಿಸಿದ ಕುಲಸಚಿವ ಪ್ರೊ.ಸಿ. ಸೋಮಶೇಖರˌ ತಕ್ಷಣವೇ ಮಾರ್ಚ್ ತಿಂಗಳ ವೇತನ ಎಲ್ಲ ಅತಿಥಿ ಉಪನ್ಶಾಸಕರಿಗೂ ಅವರವರ ಅಕೌಂಟ್ ಗೆ ನಾಳೆಯೇ ದಿನಾಂಕ 18ರಂದು ಜಮಾ ಮಾಡಲಾಗುವುದು. ಉಳಿದ ಎರಡು ತಿಂಗಳ ವೇತನವೂ ಹಂತಹಂತವಾಗಿ ಜಮಾ ಮಾಡಲಾಗುವುದು ಎಂದು ತಿಳಿಸಿದರು.

emedialine

Recent Posts

ತೊಗರಿ ಬೆಳೆ‌ ಹಾನಿ ಪ್ರದೇಶ ವೀಕ್ಷಿಸಿದ ಶಾಸಕ ಅಲ್ಲಮಪ್ರಭು ಪಾಟೀಲ

ಕಲಬುರಗಿ: ಕಲಬುರಗಿ ದಕ್ಷಿಣ ಮತಕ್ಷೇತ್ರದ ಶಾಸಕ ಅಲ್ಲಮಪ್ರಭು ಪಾಟೀಲ ಅವರು ಶನಿವಾರ ಸಂಜೆ ಕ್ಷೇತ್ರದ ಭೀಮಳ್ಳಿ ಗ್ರಾಮದ ರೈತರ ಹೊಲಗಳಿಗೆ…

6 hours ago

ಕಷ್ಟಗಳಿಗೆ ಕುಗ್ಗದೇ ಸವಾಲಾಗಿ ಸ್ವಿಕರಿಸಿ

ಕಲಬುರಗಿ: ಕಷ್ಟಗಳು ಬಂದಾಗ ಕುಗ್ಗದೆ, ಆ ಕಷ್ಟಗಳನ್ನು ಸವಾಲಾಗಿ ಸ್ವೀಕರಿಸಿ ಮೇಲೇಳಬೇಕು ಎಂದು ತಾಜ್ ನಗರದ ಆರೋಗ್ಯ ಕೇಂದ್ರದ ಹಿರಿಯ…

6 hours ago

ಕಲಬುರಗಿ: ಹಾಸ್ಯ ಕಲಾವಿದ ರೇವಣಸಿದ್ಧ ಸ್ವಾಮಿ ದಂಪತಿಗೆ ಗೆಳೆಯರ ಬಳಗದಿಂದ ಸತ್ಕರಿಸಲಾಯಿತು.

ಪರೋಪಕಾರ ಸೇವೆಯಿಂದ ಆತ್ಮತೃಪ್ತಿ: ಹಿರೇಮಠ ಕಲಬುರಗಿ: ನಗರ ಹೊರವಲಯದ ಸೈಯದ್ ಚಿಂಚೋಳಿ ರಸ್ತೆಯ ಬಳಿ ಇರುವ ಕೆವಿಪಿ ದಣ್ಣೂರ ಪಿಯು…

6 hours ago

ಸಾವಿರ ಸೀರೆ ವಿತರಿಸಿ ಸಚಿವ ಪ್ರಿಯಾಂಕ್ ಜನ್ಮದಿನ ಆಚರಣೆ

  ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…

22 hours ago

ಮೂರೂ ಕ್ಷೇತ್ರದಲ್ಲಿ ಕಾಂಗ್ರೆಸ್ ಗೆಲುವು: ಕಾರ್ಯಕರ್ತರಿಂದ ವಿಜಯೋತ್ಸವ

ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…

1 day ago

ಸಿದ್ದಸಿರಿ ಹೋರಾಟ ಪ್ರಾಯೋಜಿತ: ಶರಣು ಪಾಟೀಲ್

ಚಿಂಚೋಳಿ: ಕಾನೂನು ತೊಡಕಿನಿಂದ ಸ್ಥಗಿತಗೊಂಡ ಸಿದ್ದಸಿರಿ ಎಥೆನಾಲ್ ಕಾರ್ಖಾನೆ ಪ್ರಾರಂಭಕ್ಕೆ ಕರ್ನಾಟಕ ಮಾಲಿನ್ಯ ನಿಯಂತ್ರಣ ಮಂಡಳಿ ಅನುಮತಿ ನೀಡಬೇಕೆಂದು ಒತ್ತಾಯಿಸಿ…

1 day ago