ಕಲಬುರಗಿ: ಲಾಕ್‍ಡೌನ್ ಉಲ್ಲಂಘಿಸಿ ಗುರುವಾರ ಏಪ್ರಿಲ್ 16 ರಂದು ಚಿತ್ತಾಪುರ ತಾಲೂಕಿನ ರಾವೂರ ಗ್ರಾಮದಲ್ಲಿ ಶ್ರೀ ಸಿದ್ದಲಿಂಗೇಶ್ವರ ದೇವರ ದೇವಸ್ಥಾನದ ಮಠದ ಜಾತ್ರಾ ಮಹೋತ್ಸವ ಜರುಗಿಸಿದ ಹಿನ್ನೆಲೆಯಲ್ಲಿ ಸದರಿ ದೇವಸ್ಥಾನದ ಮಠದ 20 ಜನ ಹಾಗೂ 150 ರಿಂದ 200 ಗ್ರಾಮಸ್ಥರ ವಿರುದ್ಧ ವಾಡಿ ಪೊಲೀಸ್ ಠಾಣೆಯಲ್ಲಿ ಎಫ್.ಐ.ಆರ್. ದಾಖಲಿಸಲಾಗಿದೆ ಎಂದು ಕಲಬುರಗಿ ಜಿಲ್ಲಾಧಿಕಾರಿ ಶರತ್ ಬಿ. ಅವರು ತಿಳಿಸಿದ್ದಾರೆ.
ಕೊರೋನಾ ಹರಡದಂತೆ ಮುಂಜಾಗೃತಾ ಕ್ರಮವಾಗಿ ಜಿಲ್ಲೆಯಾದ್ಯಂತ ಈಗಾಗಲೇ ಸಿ.ಆರ್.ಪಿ.ಸಿ. ಕಾಯ್ದೆ 1973ರ ಕಲಂ 144 ಕಲಂ ಜಾರಿಯಲ್ಲಿದ್ದು, ಯಾವುದೇ ರೀತಿಯ ಜನ ಸಮೂಹ ಹಾಗೂ ಜಾತ್ರೆ ನಡೆಸುವುದನ್ನು ನಿಷೇಧಿಸಲಾಗಿದೆ. ಇಂತಹ ಸಂದರ್ಭದಲ್ಲಿ ಜಾತ್ರೆಯನ್ನು ರದ್ದುಗೊಳಿಸುವುದಾಗಿ ಲಿಖಿತವಾಗಿ ಹೇಳಿಕೆ ನೀಡಿ ತದನಂತರ ಜನಸಮೂಹವನ್ನು ಸೇರಿಸಿ ಜಾತ್ರೆ ಆಯೋಜಿಸಿದ್ದು, ಸರ್ಕಾರದ ಸೂಚನೆಗಳನ್ನು ಉಲ್ಲಂಘಿಸಿದಂತಾಗಿದೆ.
ಇದೇ ಪ್ರಕರಣ ಸಂಬಂಧ ಜಾತ್ರೆಯನ್ನು ತಡೆಯುವಲ್ಲಿ ವಿಫಲರಾಗಿ ಕರ್ತವ್ಯ ಲೋಪವೆಸಗಿದ ಚಿತ್ತಾಪುರ ಗ್ರಾಮೀಣ ಹೋಬಳಿಯ ಸೆಕ್ಟ್ರಲ್ ಮೆಜಿಸ್ಟ್ರೇಟ್ ಆಗಿ ನೇಮಕ ಮಾಡಲಾದ ಚಿತ್ತಾಪುರ ಶಿಶು ಅಭಿವೃದ್ಧಿ ಯೋಜನಾಧಿಕಾರಿ ರಾಜಕುಮಾರ ರಾಠೋಡ ಹಾಗೂ ವಾಡಿ ಪೊಲೀಸ್ ಠಾಣೆಯ ಪಿ.ಎಸ್.ಐ. ವಿಜಯಕುಮಾರ ಅವರನ್ನು ಗುರುವಾರದಂದೇ ಅಮಾನತ್ತುಗೊಳಿಸಲಾಗಿದೆ ಎಂದು ಡಿ.ಸಿ. ಶರತ್ ಬಿ. ತಿಳಿಸಿದ್ದಾರೆ.
ಈ ಪ್ರಕರಣ ಸಂಬಂಧ ಸೇಡಂ ಸಹಾಯಕ ಆಯುಕ್ತರು, ಚಿತ್ತಾಪುರ ತಹಶೀಲ್ದಾರರು, ರಾವೂರ ಗ್ರಾಮ ಪಂಚಾಯತ್‍ನ ಪಂಚಾಯತ್ ಅಭಿವೃದ್ಧಿ ಅಧಿಕಾರಿ, ಹಾಗೂ ಗ್ರಾಮ ಲೆಕ್ಕಾಧಿಕಾರಿಗಳಿಗೆ ಕಾರಣ ಕೇಳುವ ನೋಟೀಸು ಸಹ ಜಾರಿಗೊಳಿಸಲಾಗಿದೆ ಎಂದು ಅವರು ತಿಳಿಸಿದ್ದಾರೆ.
ಕಲಬುರಗಿ: ಕಲಬುರಗಿ ದಕ್ಷಿಣ ಮತಕ್ಷೇತ್ರದ ಶಾಸಕ ಅಲ್ಲಮಪ್ರಭು ಪಾಟೀಲ ಅವರು ಶನಿವಾರ ಸಂಜೆ ಕ್ಷೇತ್ರದ ಭೀಮಳ್ಳಿ ಗ್ರಾಮದ ರೈತರ ಹೊಲಗಳಿಗೆ…
ಕಲಬುರಗಿ: ಕಷ್ಟಗಳು ಬಂದಾಗ ಕುಗ್ಗದೆ, ಆ ಕಷ್ಟಗಳನ್ನು ಸವಾಲಾಗಿ ಸ್ವೀಕರಿಸಿ ಮೇಲೇಳಬೇಕು ಎಂದು ತಾಜ್ ನಗರದ ಆರೋಗ್ಯ ಕೇಂದ್ರದ ಹಿರಿಯ…
ಪರೋಪಕಾರ ಸೇವೆಯಿಂದ ಆತ್ಮತೃಪ್ತಿ: ಹಿರೇಮಠ ಕಲಬುರಗಿ: ನಗರ ಹೊರವಲಯದ ಸೈಯದ್ ಚಿಂಚೋಳಿ ರಸ್ತೆಯ ಬಳಿ ಇರುವ ಕೆವಿಪಿ ದಣ್ಣೂರ ಪಿಯು…
ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…
ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…
ಚಿಂಚೋಳಿ: ಕಾನೂನು ತೊಡಕಿನಿಂದ ಸ್ಥಗಿತಗೊಂಡ ಸಿದ್ದಸಿರಿ ಎಥೆನಾಲ್ ಕಾರ್ಖಾನೆ ಪ್ರಾರಂಭಕ್ಕೆ ಕರ್ನಾಟಕ ಮಾಲಿನ್ಯ ನಿಯಂತ್ರಣ ಮಂಡಳಿ ಅನುಮತಿ ನೀಡಬೇಕೆಂದು ಒತ್ತಾಯಿಸಿ…