ಕಲಬುರಗಿ: ಅಫಜಲಪುರ ಮತಕ್ಷೇತ್ರದ ಶಾಸಕ ಎಂ . ವೈ . ಪಾಟೀಲ ಅವರು ಕೋವಿಡ್ – 19 ತಡೆಗಟ್ಟಲು ಕ್ಷೇತ್ರದಾದ್ಯಂತ ಸಂಚರಿಸಿ ಜನರಲ್ಲಿ ಅರಿವು ಮೂಡಿಸುತ್ತಿರುವುದಕ್ಕೆ ಜೈ ಕರ್ನಾಟಕ ರಕ್ಷಣಾ ವೇದಿಕೆ ಜಿಲ್ಲಾ ಉಪಾಧ್ಯಕ್ಷ ಅಸ್ಸಾಕ್ ಎಸ್. ಬಂದಠವಾಡ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.
ಶಾಸಕ ಮತ್ತವರ ಪುತ್ರರಾದ ಜಿಲ್ಲಾ ಪಂಚಾಯತ್ ಸದಸ್ಯ
ಅರುಣಕುಮಾರ ಪಾಟೀಲ, ವೈದ್ಯ ಡಾ. ಸಂಜೀವಕುಮಾರ ಪಾಟೀಲ, ಜಿಲ್ಲಾ ಪಂಚಾಯತಿ ಉಪಾಧ್ಯಕ್ಷೆ ಶೋಭಾ ಸಿದ್ದು ಸಿರಸಗಿ ಮತ್ತು ಜಿ.ಪಂ. ಸದಸ್ಯರು ಹಾಗೂ ಕಾರ್ಯಕರ್ತರು ತಾಲ್ಲೂಕಿನಾದ್ಯಂತ ಸಂಚರಿಸಿ ದೀನ ದಲಿತರಿಗೆ, ಬಡವರು ಮತ್ತು ನಿರ್ಗತಿಕರಿಗೆ ಆಹಾರ ಸಾಮಗ್ರಿ, ಹಣ್ಣು ಹಂಪಲು, ಮಾಸ್ ಮತ್ತು ಸ್ಯಾನಿಟೈಸರ್ ವಿತರಿಸುವುದರ ಜೊತೆಗೆ ಕೊರೊನಾ ಸೋಂಕು ಹರಡದಂತೆ ತಡೆಯಲು ವಹಿಸಬೇಕಾದ ಮುನ್ನೆಚ್ಚರಿಕೆ ಕ್ರಮಗಳ ಬಗ್ಗೆ ಜನರಲ್ಲಿ
ಜಾಗೃತಿ ಮೂಡಿಸುತ್ತಿರುವುದು ಅತ್ಯಂತ ಶ್ಲಾಘನೀಯ ಕೆಲಸವಾಗಿದೆ ಎಂದು ಅವರು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…
ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…
ಚಿಂಚೋಳಿ: ಕಾನೂನು ತೊಡಕಿನಿಂದ ಸ್ಥಗಿತಗೊಂಡ ಸಿದ್ದಸಿರಿ ಎಥೆನಾಲ್ ಕಾರ್ಖಾನೆ ಪ್ರಾರಂಭಕ್ಕೆ ಕರ್ನಾಟಕ ಮಾಲಿನ್ಯ ನಿಯಂತ್ರಣ ಮಂಡಳಿ ಅನುಮತಿ ನೀಡಬೇಕೆಂದು ಒತ್ತಾಯಿಸಿ…
ಚಿಂಚೋಳಿ: ಸಿದ್ದಶ್ರೀ ಕಾರ್ಖಾನೆ ಪ್ರಾರಂಭ ಮಾಡಲು ರೈತರು ಹಗಲು ರಾತ್ರಿ ಎನ್ನದೆ ಬಸವೇಶ್ವರ ಉತ್ತರ ಬಳಿ ಧರಣಿಯಲ್ಲಿ ಹೋರಾಟ ಮಾಡುತ್ತಿದ್ದು.…
ಕಲಬುರಗಿ: ನವೆಂಬರ್ 29 ರಿಂದ 2 ಡಿಸೇಂಬರ್ ವರೆಗೆ ತಮಿಳುನಾಡಿನ ಅಲಗಪ್ಪ ವಿಶ್ವವಿದ್ಯಾಲಯ ಕರೈಕುಡಿಯಲ್ಲಿ ನಡೆಯುವ ದಕ್ಷಿಣ ಭಾರತ ಅಂತರ…
ಕಲಬುರಗಿ: ನಗರದ ವಾರ್ಡ ನಂ.51.ರ ಜೇವರ್ಗಿ ಕಾಲೋನಿ ವಾಟರ್ ಟ್ಯಾಂಕ್ ಹತ್ತಿರದ ಉದ್ಯವನದಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಪ್ರಿಯಾಂಕ ಖರ್ಗೆ…