ಎರಡು ವಿವಿಯ ವಸತಿ ನಿಲಯಗಳು ಕೊರೊಂಟೈನ್ ಕೇಂದ್ರಗಳಾಗಿ ಪರಿವರ್ತಿಸಿ: ಡಿ.ಸಿ. ಆದೇಶ

0
71

ಕಲಬುರಗಿ: ಜಿಲ್ಲೆಯಲ್ಲಿ ಕೊರೋನಾ ವೈರಸ್ ವ್ಯಾಪಕವಾಗಿ ಹರಡುತ್ತಿರುವ ಹಿನ್ನೆಲೆಯಲ್ಲಿ ಮುಂಜಾಗ್ರತವಾಗಿ ಗುಲಬರ್ಗಾ ವಿಶ್ವವಿದ್ಯಾಲಯ ಹಾಗೂ ಕಡಗಂಚಿಯ ಕೇಂದ್ರೀಯ ವಿಶ್ವವಿದ್ಯಾಲಯಗಳಲ್ಲಿರುವ ವಿದ್ಯಾರ್ಥಿಗಳ ವಸತಿ ನಿಲಯಗಳನ್ನು ತಾತ್ಕಾಲಿಕವಾಗಿ ಕೊರೊಂಟೈನ್ ಸೆಂಟರ್‍ಗಳನ್ನಾಗಿ ಪರಿವರ್ತಿಸಿ ಕಲಬುರಗಿ ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ದಂಡಾಧಿಕಾರಿಗಳಾದ ಶರತ್ ಬಿ. ಅವರು ಆದೇಶ ಹೊರಡಿಸಿದ್ದಾರೆ.

ಸಾಂಕ್ರಾಮಿಕ ಕಾಯ್ದೆ 1897, ಕರ್ನಾಟಕ ಕೋವಿಡ್-19 ರೆಗ್ಯುಲೇಶನ್ ಉಪ ಕಲಂ (24) 2020 ನಿಯಮ 12ರಲ್ಲಿ ಹಾಗೂ Disaster Management Act 2005 , ಕಲಂ 25, 26 ಮತ್ತು 30 ರಡಿ ಸಿ.ಆರ್.ಪಿ.ಸಿ. ಕಾಯ್ದೆ 1973 ರ ಕಲಂ 133ರನ್ವಯ ಈ ಆದೇಶ ಹೊರಡಿಸಿದ್ದು, ಮೇಲ್ಕಂಡ ಎರಡೂ ವಿಶ್ವವಿದ್ಯಾಲಯಗಳ ಕುಲಸಚಿವರು ತಕ್ಷಣವೇ ವಿದ್ಯಾರ್ಥಿಗಳ ವಸತಿ ನಿಲಯಗಳನ್ನು ಕಲಬುರಗಿ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿಗಳ ಸುಪರ್ದಿಗೆ ಹಸ್ತಾಂತರಿಸಬೇಕೆಂದು ಡಿ.ಸಿ. ಅವರು ತಮ್ಮ ಆದೇಶದಲ್ಲಿ ತಿಳಿಸಿದ್ದಾರೆ.

Contact Your\'s Advertisement; 9902492681

ಪ್ರತ್ಯುತ್ತರ ಬಿಟ್ಟು

Please enter your comment!
Please enter your name here