ಕಲಬುರಗಿ: ಮಹಾಮಾರಿ ಕೊರೋನಾ ಸಾಂಕ್ರಾಮಿಕ ಸೋಂಕು ಹರಡದಂತೆ ಮುಂಜಾಗ್ರತವಾಗಿ ಲಾಕ್ ಡೌನ್ ಜಾರಿಗೊಳಿಸಲಾಗಿದೆ. ಆರಂಭದಿಂದ ಇಲ್ಲಿಯವರೆಗೆ ಲಾಕ್ ಡೌನ್ ಉಲ್ಲಂಘಿಸಿದ ಜಿಲ್ಲೆಯ 118 ಜನರ ವಿರುದ್ಧ ರೌಡಿ ಶೀಟ್ ತೆರೆಯಲಾಗಿದೆ ಎಂದು ಕಲಬುರಗಿ ಜಿಲ್ಲಾ ಪೊಲೀಸ್ ಅಧೀಕ್ಷಕ ಯಡಾ ಮಾರ್ಟಿನ್ ಮಾರ್ಬನ್ಯಾಂಗ್ ತಿಳಿಸಿದ್ದಾರೆ.
ಕಲಬುರಗಿ ನಗರ ಪೊಲೀಸ್ ಆಯುಕ್ತಾಲಯದ ವ್ಯಾಪ್ತಿ ಹೊರತುಪಡಿಸಿ ಜಿಲ್ಲೆಯ ಆಳಂದ, ಅಫಜಲಪೂರ, ಜೇವರ್ಗಿ, ಚಿತ್ತಾಪೂರ, ಶಹಾಬಾದ, ಸೇಡಂ, ಮತ್ತು ಚಿಂಚೋಳಿ ತಾಲ್ಲೂಕಾಗಳ ವ್ಯಾಪ್ತಿಯಲ್ಲಿ ಲಾಕ್ ಡೌನ್ ಉಲ್ಲಂಘಿಸಿದವರ ವಿರುದ್ದ ಜಿಲ್ಲೆಯ ವಿವಿಧ ಪೊಲೀಸ್ ಠಾಣೆಗಳಲ್ಲಿ ಇಲ್ಲಿಯವರೆಗೆ ಒಟ್ಟು 38 ಪ್ರಕರಣಗಳನ್ನು ದಾಖಲಿಸಿಕೊಳ್ಳಲಾಗಿದೆ.
ಈ ಪ್ರಕರಣಗಳಿಗೆ ಸಂಬಂಧಿಸಿದಂತೆ 122 ಜನರನ್ನು ವಶಕ್ಕೆ ಪಡೆಯಲಾಗಿದೆ ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ.
ಇನ್ನೂ ರಸ್ತೆಯಲ್ಲಿ ಅನಾವಶ್ಯಕವಾಗಿ ಸಂಚರಿಸುತ್ತಿದ್ದ 659 ವಾಹನಗಳನ್ನು ವಶಕ್ಕೆ ಪಡೆದು 92700/- ರೂ. ದಂಡ ಸಹ ವಿಧಿಸಲಾಗಿದೆ ಎಂದು ಎಸ್.ಪಿ. ಯಡಾ ಮಾರ್ಟಿನ್ ಮಾರ್ಬನ್ಯಾಂಗ್ ರವಿವಾರ ತಿಳಿಸಿದ್ದಾರೆ.
ಕಲಬುರಗಿ: ಕಲಬುರಗಿ ದಕ್ಷಿಣ ಮತಕ್ಷೇತ್ರದ ಶಾಸಕ ಅಲ್ಲಮಪ್ರಭು ಪಾಟೀಲ ಅವರು ಶನಿವಾರ ಸಂಜೆ ಕ್ಷೇತ್ರದ ಭೀಮಳ್ಳಿ ಗ್ರಾಮದ ರೈತರ ಹೊಲಗಳಿಗೆ…
ಕಲಬುರಗಿ: ಕಷ್ಟಗಳು ಬಂದಾಗ ಕುಗ್ಗದೆ, ಆ ಕಷ್ಟಗಳನ್ನು ಸವಾಲಾಗಿ ಸ್ವೀಕರಿಸಿ ಮೇಲೇಳಬೇಕು ಎಂದು ತಾಜ್ ನಗರದ ಆರೋಗ್ಯ ಕೇಂದ್ರದ ಹಿರಿಯ…
ಪರೋಪಕಾರ ಸೇವೆಯಿಂದ ಆತ್ಮತೃಪ್ತಿ: ಹಿರೇಮಠ ಕಲಬುರಗಿ: ನಗರ ಹೊರವಲಯದ ಸೈಯದ್ ಚಿಂಚೋಳಿ ರಸ್ತೆಯ ಬಳಿ ಇರುವ ಕೆವಿಪಿ ದಣ್ಣೂರ ಪಿಯು…
ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…
ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…
ಚಿಂಚೋಳಿ: ಕಾನೂನು ತೊಡಕಿನಿಂದ ಸ್ಥಗಿತಗೊಂಡ ಸಿದ್ದಸಿರಿ ಎಥೆನಾಲ್ ಕಾರ್ಖಾನೆ ಪ್ರಾರಂಭಕ್ಕೆ ಕರ್ನಾಟಕ ಮಾಲಿನ್ಯ ನಿಯಂತ್ರಣ ಮಂಡಳಿ ಅನುಮತಿ ನೀಡಬೇಕೆಂದು ಒತ್ತಾಯಿಸಿ…